Karnataka Weather Today: ಬೆಂಗಳೂರಿನಲ್ಲಿ ದಟ್ಟ ಮಂಜು; ಮಲೆನಾಡು, ಉತ್ತರ ಒಳನಾಡಿನಲ್ಲಿ ಈ ವಾರವಿಡೀ ಚಳಿ ಹೆಚ್ಚಳ
Bengaluru Weather Today: ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ತೀವ್ರ ಚಳಿ ಮತ್ತು ದಟ್ಟ ಮಂಜಿನ ವಾತಾವರಣ ನಿರ್ಮಾಣವಾಗಿದೆ. ಬಾಗಲಕೋಟೆಯಲ್ಲಿ ನಿನ್ನೆ 8.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.
ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ಚಳಿ (Cold Wave) ಹೆಚ್ಚಾಗಿದೆ. ಇನ್ನೂ 1 ವಾರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಶೀತ ಗಾಳಿ ಮುಂದುವರೆಯಲಿದೆ. ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಈ ವಾರ ಪೂರ್ತಿ ಚಳಿ ಹೆಚ್ಚಾಗಲಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಂಜು ಕವಿಯುವ ಸಾಧ್ಯತೆಯಿದೆ. ಜ. 20ರವರೆಗೂ ಮಲೆನಾಡು, ಬೆಂಗಳೂರು, ಕೊಡಗು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 13ರಿಂದ 14 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದೆ. ಶಿವಮೊಗ್ಗ (Shimoga Weather), ಚಿಕ್ಕಮಗಳೂರು (Chikmagalur Weather), ಕೊಡಗು ಜಿಲ್ಲೆಗಳಲ್ಲಿ (Kodagu Weather) ವಿಪರೀತ ಚಳಿ ಶುರುವಾಗಿದೆ.
ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ತೀವ್ರ ಚಳಿ ಮತ್ತು ದಟ್ಟ ಮಂಜಿನ ವಾತಾವರಣ ನಿರ್ಮಾಣವಾಗಿದೆ. ಕಳೆದ 4 ವರ್ಷಗಳ ಬಳಿಕ ಬೆಂಗಳೂರಿನಲ್ಲಿ ಅತಿ ಕನಿಷ್ಠ 13 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಇಂದು ಕೂಡ ಬೆಂಗಳೂರಿನಲ್ಲಿ ಚಳಿ ಮುಂದುವರೆಯಲಿದೆ. ಗುರುವಾರದಿಂದ ಸಿಲಿಕಾನ್ ಸಿಟಿಯಲ್ಲಿ ಕನಿಷ್ಠ ತಾಪಮಾನ 14ರಿಂದ 15 ಡಿಗ್ರಿ ಸೆಲ್ಸಿಯಸ್ ಇರಲಿದೆ. ಗರಿಷ್ಠ ತಾಪಮಾನ 29ರಿಂದ 30 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ: Karnataka Weather Today: ಇಂದಿನಿಂದ 6 ದಿನ ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಚಳಿ ಹೆಚ್ಚಳ
ಬಾಗಲಕೋಟೆಯಲ್ಲಿ ನಿನ್ನೆ 8.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಇಂದು ಉತ್ತರ ಒಳನಾಡಿನ ಹಲವೆಡೆ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 5ರಿಂದ 6 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ. ಬೆಂಗಳೂರು, ಮಲೆನಾಡು, ಕೊಡಗು, ಕರಾವಳಿಯ ಜೊತೆಗೆ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದಲ್ಲಿ ಶೀತ ಗಾಳಿ ಹೆಚ್ಚುತ್ತಲೇ ಇದೆ. ಉತ್ತರ ಕರ್ನಾಟಕದಲ್ಲಿ ಕನಿಷ್ಠ ತಾಪಮಾನ 9ರಿಂದ 13 ಡಿಗ್ರಿ ಸೆಲ್ಸಿಯಸ್ ಇದೆ. ಬಾಗಲಕೋಟೆ, ಬೀದರ್, ರಾಯಚೂರು, ವಿಜಯಪುರ ಭಾಗದಲ್ಲಿ ಶೀತ ಗಾಳಿ ಶುರುವಾಗಿದೆ.
Several trains in north India delayed due to fog. Visuals from New Delhi Railway Station
“I came from Bihar and my train reached here late by 2 hours,” says a passenger pic.twitter.com/foCD856i8M
— ANI (@ANI) January 17, 2023
ಇದನ್ನೂ ಓದಿ: Coldwave in Mysuru: ಮೈಸೂರಿನಲ್ಲಿ ಭಾರೀ ಚಳಿ ಇಬ್ಬನಿ, ಮೈಕೊರೆಯುವ ಚಳಿಗೆ ಕಂಗಾಲಾದ ಮೈಸೂರಿಗರು
ಭಾರತದ ಉತ್ತರ ಮತ್ತು ವಾಯುವ್ಯ ಪ್ರದೇಶಗಳಲ್ಲಿ ಶೀತ ಅಲೆ ಹೆಚ್ಚಾಗಿದೆ. ಇಲ್ಲಿನ ಅನೇಕ ನಗರಗಳಲ್ಲಿ ಕನಿಷ್ಠ ತಾಪಮಾನ 3ರಿಂದ 5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ಈ ವಾರವಿಡೀ ಚಳಿ ಹೆಚ್ಚಾಗುವ ನಿರೀಕ್ಷೆಯಿದೆ. ದೆಹಲಿಯಲ್ಲಿ ಚಳಿ ಕೊಂಚ ಕಡಿಮೆಯಾಗಿದೆ. ಇದರ ಜೊತೆಗೆ ಜಮ್ಮು ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ, ಅಸ್ಸಾಂ, ಸಿಕ್ಕಿಂ, ಪಶ್ಚಿಮ ಬಂಗಾಳ, ಪಂಜಾಬ್, ಹರಿಯಾಣ, ಉತ್ತರ ಪ್ರದೇಶದಲ್ಲಿ ಸಾಧಾರಣ ಮಳೆ ಮತ್ತು ಹಿಮಪಾತ ಉಂಟಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.