Karnataka Weather Today: ಇಂದಿನಿಂದ 6 ದಿನ ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಚಳಿ ಹೆಚ್ಚಳ

Bengaluru Weather: ಬೆಂಗಳೂರಿನಲ್ಲಿ ಇಂದಿನಿಂದ (ಜ. 15) ಜ. 19ರವರೆಗೆ ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್​ ಇರಲಿದೆ.

Karnataka Weather Today: ಇಂದಿನಿಂದ 6 ದಿನ ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಚಳಿ ಹೆಚ್ಚಳ
ಶೀತ ಗಾಳಿImage Credit source: Twitter
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jan 15, 2023 | 5:56 AM

ಬೆಂಗಳೂರು: ಬೆಂಗಳೂರಿನಲ್ಲಿ ಸಂಕ್ರಾಂತಿಗೂ ಚಳಿಯ ಕಾಟ ಕಡಿಮೆಯಾಗಿಲ್ಲ. ಇಂದು ಕೂಡ ಬೆಂಗಳೂರಿನಲ್ಲಿ 13ರಿಂದ 15 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗುವ ಸಾಧ್ಯತೆಯಿದೆ. ಇಂದಿನಿಂದ 6 ದಿನಗಳ ಕಾಲ ಕರ್ನಾಟಕದ (Karnataka Weather Today) ಬಹುತೇಕ ಜಿಲ್ಲೆಗಳಲ್ಲಿ ಮಂಜು ಕವಿಯುವ ನಿರೀಕ್ಷೆಯಿದೆ. ಬೆಂಗಳೂರಿನಲ್ಲಿ ಇಂದಿನಿಂದ (ಜ. 15) ಜ. 19ರವರೆಗೆ ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್​ ಇರಲಿದೆ.

ಬೆಂಗಳೂರು, ಮೈಸೂರು, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮುಂತಾದೆಡೆ ಶೀತ ಗಾಳಿ ಹೆಚ್ಚಾಗಲಿದೆ. ಹಾಗೇ, ಉತ್ತರ ಕರ್ನಾಟಕದಲ್ಲಿ ಕೂಡ ಚಳಿ ಹೆಚ್ಚಾಗುತ್ತಲೇ ಇದೆ. ಕರ್ನಾಟಕದ ಕೆಲವು ಭಾಗಗಳಲ್ಲಿ, ಇಂದು ಶೀತ ಅಲೆಗಳ ಪರಿಸ್ಥಿತಿ ಇರುತ್ತದೆ. ಉತ್ತರ ಕರ್ನಾಟಕದ ಬಾಗಲಕೋಟೆ, ಬೀದರ್, ಬಾಗಲಕೋಟೆ, ವಿಜಯಪುರದಲ್ಲಿ ಭಾರೀ ಚಳಿ ಶುರುವಾಗಿದೆ. ಉತ್ತರ ಕರ್ನಾಟಕದ ಬೀದರ್, ವಿಜಯಪುರ, ಬಾಗಲಕೋಟೆ, ರಾಯಚೂರು ಜಿಲ್ಲೆಗಳಲ್ಲಿ ಶೀತ ಅಲೆಯ ಮುನ್ಸೂಚನೆ ನೀಡಲಾಗಿದೆ. ರಾಜ್ಯಾದ್ಯಂತ ಶೀತ ಅಲೆ ಹೆಚ್ಚಾಗಿರುವುದರಿಂದ ಕನಿಷ್ಠ ಮೂರು ಪದರಗಳ ಬಟ್ಟೆಗಳನ್ನು ಧರಿಸಬೇಕು, ಸಾಧ್ಯವಾದಾಗ ಮನೆಯೊಳಗೇ ಉಳಿಯಬೇಕು, ದೇಹವನ್ನು ಪೂರ್ತಿಯಾಗಿ ಕವರ್ ಮಾಡಿಕೊಳ್ಳಬೇಕು ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಇದನ್ನೂ ಓದಿ: Karnataka Weather Today: ಸಂಕ್ರಾಂತಿಗೂ ಕಡಿಮೆಯಾಗಿಲ್ಲ ಚಳಿ; ಈ ಜಿಲ್ಲೆಗಳಲ್ಲಿ ಶೀತ ಗಾಳಿ

ವಿವಿಧ ರಾಜ್ಯಗಳ ಇಂದಿನ ಹವಾಮಾನ ಹೀಗಿದೆ: ಇಂದು ಅರುಣಾಚಲ ಪ್ರದೇಶದ ಮೇಲೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅಸ್ಸಾಂನಲ್ಲಿ ಕೂಡ ಮಳೆಯಾಗುವ ಸಾಧ್ಯತೆಯಿದೆ. ಇಂದು ಈಶಾನ್ಯ ಭಾರತದಲ್ಲಿ ವಾಯು ಗುಣಮಟ್ಟವು ಕಳಪೆಯಾಗಿರುವ ಸಾಧ್ಯತೆಯಿದೆ. ಮುಂಜಾನೆ ಉತ್ತರ, ಮಧ್ಯ, ಪೂರ್ವ ಮತ್ತು ಈಶಾನ್ಯ ಭಾರತದ ಕೆಲವು ಭಾಗಗಳಲ್ಲಿ ದಟ್ಟವಾದ ಮಂಜು ಇರುತ್ತದೆ. ಸಿಕ್ಕಿಂ, ಮೇಘಾಲಯ, ಪಶ್ಚಿಮ ಬಂಗಾಳ, ಒಡಿಶಾ, ಅಸ್ಸಾಂ ಮತ್ತು ತ್ರಿಪುರಾದಲ್ಲಿ ಮುಂದಿನ 2 ದಿನಗಳ ಕಾಲ ತೀವ್ರ ಚಳಿಯೊಂದಿಗೆ ಮಂಜು ಕವಿದ ವಾತಾವರಣ ಇರಲಿದೆ.

ಜನವರಿ 20ರವರೆಗೆ ದೆಹಲಿ-ಎನ್‌ಸಿಆರ್ ಸೇರಿದಂತೆ ಉತ್ತರ ಭಾರತದಲ್ಲಿ ತೀವ್ರ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಚಳಿ ಎಷ್ಟು ಅಪಾಯಕಾರಿಯೆಂದರೆ ದೆಹಲಿ-ಎನ್‌ಸಿಆರ್ ಮತ್ತು ರಾಜಸ್ಥಾನದ ಕೆಲವು ಭಾಗಗಳಲ್ಲಿ ರಾತ್ರಿಯ ಉಷ್ಣತೆಯು ಶೂನ್ಯ ಡಿಗ್ರಿ ತಲುಪಬಹುದು. ಇಂದಿನಿಂದ ದೆಹಲಿ-ಎನ್‌ಸಿಆರ್‌ನಲ್ಲಿ ತೀವ್ರ ಶೀತದ ಅವಧಿ ಪ್ರಾರಂಭವಾಗಲಿದೆ.

ಇದನ್ನೂ ಓದಿ: Brain Stroke: ಚಳಿಗಾಲದಲ್ಲಿ ಶೇ.30ರಷ್ಟು ಹೆಚ್ಚಾದ ಬ್ರೈನ್ ಸ್ಟ್ರೋಕ್ ಪ್ರಕರಣಗಳು: ಯಾರ್ಯಾರಿಗೆ ಅಪಾಯ, ಲಕ್ಷಣಗಳೇನು ತಿಳಿಯಿರಿ

ದೆಹಲಿಯ ಸಫ್ದರ್‌ಜಂಗ್ ಪ್ರದೇಶದಲ್ಲಿ ಕನಿಷ್ಠ ತಾಪಮಾನವು ಶೂನ್ಯ ಡಿಗ್ರಿ ಸೆಲ್ಸಿಯಸ್‌ಗಿಂತ ಕುಸಿಯಬಹುದು. ಗುರುಗ್ರಾಮ ಮತ್ತು ನೊಯ್ಡಾದಲ್ಲಿ ಇದು 0ಯಿಂದ 1 ಡಿಗ್ರಿ ಸೆಲ್ಸಿಯಸ್ ದಾಖಲೆಯಾಗಿರಬಹುದು. ಜನವರಿ 17ರವರೆಗೆ ರಾಜಸ್ಥಾನದ ಉತ್ತರ ಭಾಗದಲ್ಲಿ ತೀವ್ರ ಶೀತ ಅಲೆ ಉಂಟಾಗಬಹುದು. ಹಿಮಾಚಲ ಪ್ರದೇಶದಲ್ಲಿ ಜನವರಿ 17ರವರೆಗೆ, ಪಂಜಾಬ್‌ನಲ್ಲಿ ಜನವರಿ 16 ರಿಂದ 17ರವರೆಗೆ ಮತ್ತು ಚಂಡೀಗಢದಲ್ಲಿ ಜನವರಿ 17ರಿಂದ 18ರವರೆಗೆ ಮೈ ಕೊರೆಯುವ ಚಳಿ ಇರುತ್ತದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ