Karnataka Weather Today: ಇಂದಿನಿಂದ 3 ದಿನ ಕರ್ನಾಟಕದಲ್ಲಿ ವ್ಯಾಪಕ ಮಳೆ; ಆಂಧ್ರ ಪ್ರದೇಶ, ಒಡಿಶಾದಲ್ಲಿ ಚಂಡಮಾರುತದ ಭೀತಿ
Karnataka Rain: ಕರ್ನಾಟಕದ ಕರಾವಳಿ ಮತ್ತು ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಸಿಡಿಲು, ಮಳೆಯಿಂದ ಉಡುಪಿಯಲ್ಲಿ 17 ಮನೆಗಳಿಗೆ ಹಾನಿಯಾಗಿದೆ. ಬೆಂಗಳೂರಿನಲ್ಲೂ ಇಂದು ಮಳೆ ಮುಂದುವರೆಯಲಿದೆ.
Bengaluru Rain: ಕರ್ನಾಟಕದಲ್ಲಿ ಸುರಿಯುತ್ತಿರುವ ಮಳೆ ಇನ್ನೂ 3 ದಿನ ಮುಂದುವರೆಯಲಿದೆ. ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯಾದ್ಯಂತ ಮಳೆಯಾಗುತ್ತಿದೆ. ಡಿ. 4ರವರೆಗೂ ಕರಾವಳಿ, ಮಲೆನಾಡಿನಲ್ಲಿ ಮಳೆ ಸುರಿಯಲಿದೆ. ಹಾಗೇ, ಕರ್ನಾಟಕ, ಆಂಧ್ರಪ್ರದೇಶ, ಒಡಿಶಾ, ಗುಜರಾತ್ ಸೇರಿದಂತೆ 10 ರಾಜ್ಯಗಳಲ್ಲಿ ಇಂದು ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ಶನಿವಾರ ಚಂಡಮಾರುತ ಅಪ್ಪಳಿಸುವ ಎಚ್ಚರಿಕೆಯನ್ನು ನೀಡಲಾಗಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಸಿಡಿಲು, ಮಳೆಯಿಂದ ಉಡುಪಿಯಲ್ಲಿ 17 ಮನೆಗಳಿಗೆ ಹಾನಿಯಾಗಿದೆ. ಬೆಂಗಳೂರಿನಲ್ಲೂ ಇಂದು ಮಳೆ ಮುಂದುವರೆಯಲಿದೆ. ಇಂದಿನಿಂದ ಡಿ. 4ರವರೆಗೂ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಯಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.
03 दिसंबर , 2021 की सुबह तक /Forecast for the State valid up to morning of 03RD December 2021: 24 hours: Rain/thundershowers very likely to occur at many places over Coastal Karnataka and at a few places over Interior Karnataka.
— Met centre Bengaluru (@metcentre_bng) December 1, 2021
ಗುಜರಾತ್ನಲ್ಲಿ ಇಂದು ಮಳೆಯಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಕರ್ನಾಟಕ ರಾಜ್ಯಗಳು ಭಯಂಕರ ಮಳೆಗೆ ತತ್ತರಿಸಿವೆ. ಗುಜರಾತ್ನಲ್ಲಿ ಇಂದು ಭಾರೀ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಹಾಗೇ, ಗುಜರಾತ್‌ನ ಆನಂದ್, ಬರೂಚ್, ನವ್ಸರಿ, ವಲ್ಸೇದ್, ಅಮ್ರೇಲಿ ಮತ್ತು ಭವನಗರ ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮಧ್ಯಪ್ರದೇಶ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಮಹಾರಾಷ್ಟ್ರ, ಗೋವಾ, ರಾಜಸ್ಥಾನ, ಹರಿಯಾಣ, ಉತ್ತರ ಪ್ರದೇಶ, ಕೇರಳದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.
Rainfall Forecast: Scattered to widespread very light to moderate rains with isolated heavy rains likely over NIK, Malnad & Coastal Karnataka regions and scattered to widespread very light to moderate rains likely over SIK districts. pic.twitter.com/IjqsNMeyHR
— KSNDMC (@KarnatakaSNDMC) December 1, 2021
ಗುಜರಾತ್‌ನ ಉತ್ತರ ಮತ್ತು ದಕ್ಷಿಣ ಕರಾವಳಿ ತೀರದಲ್ಲಿ ಇಂದು ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಈ ಅಕಾಲಿಕ ಮಳೆಯಿಂದ ರೈತರ ಬೆಳೆಗಳಿಗೆ ತೊಂದರೆಯಾಗಲಿದೆ ಮತ್ತು ಕಟಾವು ಮಾಡಲೂ ಕಷ್ಟವಾಗಲಿದೆ ಎಂದು ಹೇಳಲಾಗಿದೆ. ಇಂದು ಗುಜರಾತ್‌ನ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಅಮ್ರೇಲಿ, ಜುನಾಗಢ್, ಗಿರ್ ಸೋಮನಾಥ್, ಬೊಟಾಡ್ ಮತ್ತು ಭಾವನಗರ ಸೇರಿದಂತೆ ಸೌರಾಷ್ಟ್ರ ಜಿಲ್ಲೆಗಳ ಆನಂದ್, ಭರೂಚ್, ನವಸಾರಿ, ವಲ್ಸಾದ್ ಸೂರತ್, ಡ್ಯಾಂಗ್ಸ್ ಮತ್ತು ತಾಪಿಯಲ್ಲಿ ಪಂಚಮಹಲ್, ದಾಹೋದ್, ಛೋಟಾ ಉದಯಪುರ್ ಸೇರಿದಂತೆ ಹಲವೆಡೆ ಇಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಐಎಂಡಿ ತಿಳಿಸಿದೆ.
ಇದನ್ನೂ ಓದಿ: Andhra Pradesh Rain: ಆಂಧ್ರದಲ್ಲಿ ವರುಣನ ಆರ್ಭಟ; ಭೂಕುಸಿತವಾಗಿ ತಿರುಮಲ ಘಾಟ್ ರಸ್ತೆ ಬಂದ್