Karnataka Weather Today: ಇಂದು ಕರ್ನಾಟಕಕ್ಕೆ ಅಪ್ಪಳಿಸಲಿದೆ ಚಂಡಮಾರುತ; ನ. 28ರವರೆಗೂ ಭಾರೀ ಮಳೆಯ ಅಲರ್ಟ್
Karnataka Rain Today: ಇಂದು ತಮಿಳುನಾಡು ಮತ್ತು ಕೇರಳದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶದಲ್ಲಿ ಶನಿವಾರ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಇಂದು ಕರ್ನಾಟಕದಲ್ಲಿ ಮತ್ತೊಂದು ಚಂಡಮಾರುತ ಅಪ್ಪಳಿಸುವ ಭೀತಿ ಎದುರಾಗಿದೆ.
ಬೆಂಗಳೂರು: ಈಗಾಗಲೇ ಭಾರೀ ಮಳೆಯಿಂದ (Heavy Rain) ಕರ್ನಾಟಕದ ಜನರು ಕಂಗಾಲಾಗಿದ್ದಾರೆ. ಮತ್ತೆ ಇಂದಿನಿಂದ ಚಂಡಮಾರುತದ (Cyclone) ಆತಂಕ ಎದುರಾಗಿರುವುದರಿಂದ ಇನ್ನೂ 3 ದಿನ ಭಾರೀ ಮಳೆಯಾಗಲಿದೆ. ಇಂದು ಚಂಡಮಾರುತದ ರೂಪದಲ್ಲಿ ಮಳೆರಾಯ ಕರ್ನಾಟಕಕ್ಕೆ ಅಪ್ಪಳಿಸುವ ಸಾಧ್ಯತೆಯಿದೆ. ಚೆನ್ನೈಗೆ (Chennai Rain) ಅಪ್ಪಳಿಸುವ ಚಂಡಮಾರುತ ರಾಜ್ಯದ ಮೇಲೂ ಪ್ರಭಾವ ಬೀರಲಿದೆ. ಮೈಸೂರು ಭಾಗ, ಉಡುಪಿವರೆಗೂ ಚಂಡಮಾರುತ ಅಪ್ಪಳಿಸುತ್ತದೆ. ಹೀಗಾಗಿ ಇಂದಿನಿಂದ ನ. 28ರವರೆಗೆ ಮುನ್ನೆಚ್ಚರಿಕೆ ನೀಡಲಾಗಿದೆ.
ಇಂದಿನಿಂದ ನವೆಂಬರ್ 28ರವರೆಗೆ ಚಂಡಮಾರುತದ ಭೀತಿ ಎದುರಾಗಿರುವುದರಿಂದ ಮುಂಜಾಗ್ರತಾ ಕ್ರಮ ವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಮಳೆಯಿಂದ ಅವಾಂತರಗಳು ಸೃಷ್ಟಿಯಾಗುವ ಹಿನ್ನೆಲೆ ಬಿಬಿಎಂಪಿ ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ. ಡಿಸಿಗಳು ಚಂಡಮಾರುತ ಹಾಗೂ ಮಳೆಯ ಹಾನಿಯ ನಿಯಂತ್ರಣದ ಕಡೆ ಗಮನ ನೀಡಬೇಕು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ರಾಜ್ಯಾದ್ಯಂತ ನವೆಂಬರ್ 28ರವರೆಗೂ ಭಾರೀ ಮಳೆ ಸುರಿಯುವ ನಿರೀಕ್ಷೆಯಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರ್ಗಿ, ಹಾವೇರಿಯಲ್ಲಿ ಮಳೆ ಹೆಚ್ಚಾಗಲಿದೆ. ಇಂದಿನಿಂದ 3 ದಿನಗಳ ಕಾಲ ಕರ್ನಾಟಕ, ಕೇರಳ, ಮಾಹೆ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಾಲ್‌ನಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ. ಈ ಅವಧಿಯಲ್ಲಿ ಕರಾವಳಿ ಕರ್ನಾಟಕದಲ್ಲಿಯೂ ಭಾರೀ ಮಳೆಯಾಗಲಿದೆ. ಇಂದು ಬೆಂಗಳೂರಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 3 ದಿನ ತಮಿಳುನಾಡು, ಪುದುಚೇರಿ ಮತ್ತು ಕಾರೈಕಾಲ್‌ನಲ್ಲಿ ಮಳೆಯಾಗಲಿದೆ. ಇಂದು ಕೇರಳ ಮತ್ತು ಮಾಹೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ, ಕೇರಳ ಮತ್ತು ಅಕ್ಕಪಕ್ಕದ ಪ್ರದೇಶಗಳು ಸಾಕ್ಷಿಯಾಗಿವೆ. ಮಳೆ-ಸಂಬಂಧಿತ ಘಟನೆಗಳಿಂದಾಗಿ ಪ್ರವಾಹದಂತಹ ಪರಿಸ್ಥಿತಿಗಳು ಮತ್ತು ಸಾವು-ನೋವುಗಳು ಉಂಟಾಗಲಿವೆ.
ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಮಾತನಾಡಿದ್ದಾರೆ. ಬಂಗಾಳಕೊಲ್ಲಿಯಲ್ಲಿ ಒಂದು ಚಂಡಮಾರುತ ಎದುರಾಗುವ ಸಾಧ್ಯತೆ ಇದ್ದು, ಅದರ ಪ್ರಭಾವದಿಂದ ವಾಯುಭಾರ ಕುಸಿತ ಪ್ರದೇಶವಾಗಿ ರೂಪಾಂತರಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಅಲ್ಲದೆ ಮುಂದಿನ 3 ದಿನಗಳ ಕಾಲ ದಕ್ಷಿಣ ಭಾರತದ ರಾಜ್ಯಗಳ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಇಂದು ಕರ್ನಾಟಕದಲ್ಲಿ ಮತ್ತೊಂದು ಚಂಡಮಾರುತ ಅಪ್ಪಳಿಸುವ ಭೀತಿ ಎದುರಾಗಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಚಂಡಮಾರುತವಾಗಿ ರೂಪಾಂತರಗೊಳ್ಳಲಿದೆ. ಹೀಗಾಗಿ, ಇನ್ನೂ 3 ದಿನ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಚಾಮರಾಜನಗರ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಉತ್ತರ ಕರ್ನಾಟಕವೂ ಮಳೆಯ ಅಬ್ಬರಕ್ಕೆ ತತ್ತರಿಸಿ ಹೋಗಿದೆ. ಇಂದಿನಿಂದ ಮತ್ತೆ ವರುಣನ ಆರ್ಭಟ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿಯಲ್ಲಿ ಮಳೆಯಾಗಲಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಇಂದು ಮಳೆಯಾಗಲಿದೆ. ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣ ಹವೆ ಮುಂದುವರೆಯಲಿದೆ. ಈ ತಿಂಗಳ 29ರವರೆಗೂ ಕರ್ನಾಟಕದ ಹಲವೆಡೆ ಮಳೆ ಮುಂದುವರಿಯಲಿದೆ.
ಇಂದು ತಮಿಳುನಾಡು ಮತ್ತು ಕೇರಳದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶದಲ್ಲಿ ಶನಿವಾರ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಈ ಶನಿವಾರ ತಮಿಳುನಾಡಿನಲ್ಲಿ ಮತ್ತು ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ತಮಿಳುನಾಡಿನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇಂದು ತಮಿಳುನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶ ಮತ್ತು ಕೇರಳದ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ತಮಿಳುನಾಡಿನಲ್ಲಿ ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೇರಳ, ಲಕ್ಷದ್ವೀಪ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ವ್ಯಾಪಕವಾದ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶದಲ್ಲಿ ಅಲ್ಲಲ್ಲಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಸಿಕ್ಕಿಂನಲ್ಲಿ ಹಿಮ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದಾದ್ಯಂತ ಇಂದು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.
ಇಂದಿನಿಂದ ಡಿಸೆಂಬರ್ 15ರವರೆಗೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಮುನ್ಸೂಚನೆಯಿದೆ. ತಮಿಳುನಾಡು, ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗಲಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತವಾಗಿ ಬದಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ತಮಿಳುನಾಡು, ಕೇರಳ, ಆಂಧ್ರ ಕರಾವಳಿಯಲ್ಲಿ ಹೆಚ್ಚು ಮಳೆಯಾಗಲಿದ್ದು ಪುದುಚೆರಿ, ಚೆನ್ನೈ, ನೆಲ್ಲೂರಿನಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ನೆರೆ ರಾಜ್ಯಗಳಲ್ಲಿ ಮಳೆ ಹಿನ್ನೆಲೆ ಇಂದಿನಿಂದ ಕರ್ನಾಟಕದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ.
ಇಂದಿನಿಂದ ಮೂರು ದಿನ ಆಂಧ್ರಪ್ರದೇಶದ ಕರಾವಳಿ, ಯಾನಂ, ರಾಯಲಸೀಮಾ, ಕರ್ನಾಟಕದ ದಕ್ಷಿಣ ಒಳನಾಡು, ಕೇರಳ, ಮಾಹೆ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆಯಲಿದ್ದು, ಇನ್ನೂ 3 ದಿನ ಕೆಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ: ಮಳೆಯಿಂದ ಕರ್ನಾಟಕದಲ್ಲಿ ಅಪಾರ ಬೆಳೆ ಹಾನಿ; ಕೇಂದ್ರದಿಂದ 900 ಕೋಟಿ ರೂ. ಪರಿಹಾರಕ್ಕೆ ಮನವಿಗೆ ರಾಜ್ಯ ಸರ್ಕಾರ ನಿರ್ಧಾರ
Karnataka Rain: ಬೆಂಗಳೂರು, ಕರಾವಳಿ ಸೇರಿ ಹಲವೆಡೆ ನ. 28ರವರೆಗೂ ವ್ಯಾಪಕ ಮಳೆ; ಮತ್ತೊಂದು ಚಂಡಮಾರುತದ ಭೀತಿ