AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Today: ರಾಜ್ಯದಲ್ಲಿ ಮುಂದುವರೆದ ಒಣ ಹವೆಯ ವಾತಾವರಣ

Karnataka Weather: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮಳೆರಾಯನ ಆರ್ಭಟ ಕಡಿಮೆಯಾಗಿದ್ದು, ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಪ್ರದೇಶಗಳೆಲ್ಲೆಡೆ ಒಣ ಹವೆ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜಧಾನಿ ಬೆಂಗಳೂರಲ್ಲಿ ಮೋಡಕವಿದ ವಾತಾವರಣದ ಸಾಧ್ಯತೆ ಇದ್ದರೆ, ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Karnataka Weather Today: ರಾಜ್ಯದಲ್ಲಿ ಮುಂದುವರೆದ ಒಣ ಹವೆಯ ವಾತಾವರಣ
Karnataka Weather Forecast Nov 2
ಭಾವನಾ ಹೆಗಡೆ
|

Updated on:Nov 02, 2025 | 7:17 AM

Share

ಬೆಂಗಳೂರು, ನವೆಂಬರ್ 2: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮಳೆರಾಯನ (Weather Forecast) ಆರ್ಭಟ ಕಡಿಮೆಯಾಗಿದ್ದು, ಇಂದು ಎಲ್ಲೆಡೆ ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಕರಾವಳಿಯ ಜಿಲ್ಲೆಗಳಲ್ಲಿ, ಉತ್ತರ ಒಳನಾಡು ಮತ್ತು ದಕ್ಷೀಣ ಒಳನಾಡು ಪ್ರದೇಶಗಳಲ್ಲಿ ಒಣ ಹವೆ ಇರಲಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಒಣ ಹವೆ

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಸಂಪೂರ್ಣವಾಗಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮಳೆ ಸಾಧ್ಯತೆ ತೀರಾ ವಿರಳವಾಗಿರಲಿದೆ. ಕರಾವಳಿಯಲ್ಲೂ ಸಧ್ಯಕ್ಕೆ ವರುಣಾರ್ಭಟ ನಿಂತಿದ್ದು, ಮಳೆಯ ಸಾಧ್ಯತೆ ಕಡಿಮೆಯಿದೆ. ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿಯೂ ಉಳಿದ ಭಾಗಗಳಂತೆ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ತಾಪಮಾನ 29°C ಮತ್ತು ಕನಿಷ್ಠ ತಾಪಮಾನ 19°C ಇರಲಿದೆ. ಗಾಳಿಯ ವೇಗ ಗಂಟೆಗೆ 10 ಕಿ.ಮೀ. ಇರಲಿದೆ. ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:16 am, Sun, 2 November 25

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಬಿಗ್ ಬಾಸ್ ಮನೆಯಿಂದ ಮಂಜ ಔಟ್: ಅಶ್ಲೀಲವಾಗಿ ಮಾತಾಡಿದ್ದಕ್ಕೆ ಶಿಕ್ಷೆ
ಬಿಗ್ ಬಾಸ್ ಮನೆಯಿಂದ ಮಂಜ ಔಟ್: ಅಶ್ಲೀಲವಾಗಿ ಮಾತಾಡಿದ್ದಕ್ಕೆ ಶಿಕ್ಷೆ
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ