Karnataka Weather Today | ಬೆಂಗಳೂರಲ್ಲಿ ರಾತ್ರಿಯಿಡೀ ಮಳೆ; ಮಳೆಯ ಅಬ್ಬರ ಮಂಗಳವಾರದವರೆಗೂ ಮುಂದುವರೆಯುವ ಸಂಭವ

| Updated By: guruganesh bhat

Updated on: Sep 20, 2021 | 7:54 AM

Karnataka Rains: ಬೆಂಗಳೂರಿನಲ್ಲಿ ನಿನ್ನೆ ಭಾರಿ ಮಳೆ ಸುರಿದಿದೆ. ಮಳೆಯ ಪರಿಣಾಮ ಹಲವೆಡೆ ರಸ್ತೆಗಳಲ್ಲಿ ನೀರು ನಿಂತು ವಾಹ ಸವಾರರು ಪರದಾಡುವಂತಾಗಿದೆ. ಕೆಲವೆಡೆ ತಗ್ಗು ಪ್ರದೇಶದ ಮನೆಗಳಿಗೆ ನುಗ್ಗಿರುವ ನೀರು ಸ್ಥಳೀಯ ನಿವಾಸಿಗಳಿಗೆ ನಿದ್ದೆಯಿಲ್ಲದ ರಾತ್ರಿಯನ್ನು ತಂದೊಡ್ಡಿದೆ.

Karnataka Weather Today | ಬೆಂಗಳೂರಲ್ಲಿ ರಾತ್ರಿಯಿಡೀ ಮಳೆ; ಮಳೆಯ ಅಬ್ಬರ ಮಂಗಳವಾರದವರೆಗೂ ಮುಂದುವರೆಯುವ ಸಂಭವ
Follow us on

Karnataka Rains |ಗಣೇಶ ಚತುರ್ಥಿ ಹಬ್ಬ ಕಳೆದರೂ ಕರ್ನಾಟಕದಲ್ಲಿ ಮಳೆದ ಅಬ್ಬರ ನಿಲ್ಲುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ಕಳೆದ 2 ವಾರಗಳಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈಗ ಮೂರ್ನಾಲ್ಕು ದಿನಗಳ ಕಾಲ ಕೊಂಚ ಕಡಿಮೆಯಾಗಿದ್ದ ವರುಣನ ಆರ್ಭಟ ಇಂದಿನಿಂದ ಮತ್ತೆ ಮುಂದುವರೆಯಲಿದೆ. ಸೆಪ್ಟೆಂಬರ್ 21ರವರೆಗೂ,ಅಂದರೆ ನಾಳೆಯವರೆಗೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುವ ಎಲ್ಲ ಲಕ್ಷಣಗಳಿವೆ.

ಬೆಂಗಳೂರಿನಲ್ಲಿ ನಿನ್ನೆ ಭಾರಿ ಮಳೆ ಸುರಿದಿದೆ. ಮಳೆಯ ಪರಿಣಾಮ ಹಲವೆಡೆ ರಸ್ತೆಗಳಲ್ಲಿ ನೀರು ನಿಂತು ವಾಹ ಸವಾರರು ಪರದಾಡುವಂತಾಗಿದೆ. ಕೆಲವೆಡೆ ತಗ್ಗು ಪ್ರದೇಶದ ಮನೆಗಳಿಗೆ ನುಗ್ಗಿರುವ ನೀರು ಸ್ಥಳೀಯ ನಿವಾಸಿಗಳಿಗೆ ನಿದ್ದೆಯಿಲ್ಲದ ರಾತ್ರಿಯನ್ನು ತಂದೊಡ್ಡಿದೆ. ಬಿಬಿಎಂಪಿ ಎಚ್ಚೆತ್ತುಕೊಂಡಿದ್ದರೆ ಎಷ್ಟೇ ಮಳೆ ಸುರಿದರೂ ಸಮಸ್ಯೆ ಉಂಟಾಗುತ್ತಿರಲಿಲ್ಲ ಎಂದು ಸಮಸ್ಯೆ ಉಂಟಾದವರು ಅಲವತ್ತುಕೊಂಡಿದ್ದಾರೆ.

ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಬೆಂಗಳೂರು, ಚಿಕ್ಕಮಗಳೂರು,ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಚದುರಿದ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಅಲ್ಪ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ ಸೆಪ್ಟೆಂಬರ್ 21ರವರೆಗೆ ಕರ್ನಾಟಕದಲ್ಲಿ ಭಾರೀ ಮಳೆ ಸುರಿಯಲಿದೆ. ಹೀಗಾಗಿ ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಭಾರೀ ಮಳೆ ಸುರಿಯಲಿದೆ. ಮುಖ್ಯವಾಗಿ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸೆ. 21ರವರೆಗೆ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಸೇರಿದಂತೆ ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಇನ್ನು ಮೂರು ದಿನ ಸಾಧಾರಣ ಮಳೆಯಾಗಲಿದೆ. ಇಂದಿನಿಂದ 3 ದಿನ ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ಕೋಲಾರ, ಮಂಡ್ಯ, ಮೈಸೂರು, ರಾಮನಗರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಕರ್ನಾಟಕ ಮಾತ್ರವಲ್ಲದೆ, ರಾಜಸ್ಥಾನ, ಗುಜರಾತ್, ತಮಿಳುನಾಡು, ಪಶ್ಚಿಮ ಬಂಗಾಳ, ಒರಿಸ್ಸಾ, ಉತ್ತರಾಖಂಡ, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್​ಗಢ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಸಿಕ್ಕಿಂ, ಮಹಾರಾಷ್ಟ್ರ, ಗೋವಾ, ಅಂಡಮಾನ್ ನಿಕೋಬಾರ್, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಜಾರ್ಖಂಡ್, ಬಿಹಾರ, ಉತ್ತರ ಪ್ರದೇಶ, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಲಕ್ಷದ್ವೀಪದಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ. ಪಂಜಾಬ್, ಹರಿಯಾಣ, ದೆಹಲಿ, ಜಮ್ಮು ಕಾಶ್ಮೀರ, ಲಡಾಖ್, ಕರ್ನಾಟಕದ ಒಳನಾಡು ಪ್ರದೇಶದಲ್ಲಿ ಇಂದು ಸಾಧಾರಣ ಮಳೆಯಾಗಲಿದೆ.

ಇದನ್ನೂ ಓದಿ: 

ವಿಷ್ಣು ಆ ಚಿತ್ರದ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ತೆರಳಬೇಕಿತ್ತು. ಆದರೆ..; ನಾಗತಿಹಳ್ಳಿ ಹಂಚಿಕೊಂಡ್ರು ಮಾಹಿತಿ

KCET 2021 result: ಸೆ. 20ಕ್ಕೆ ಕೆಸಿಇಟಿ ಫಲಿತಾಂಶ ಪ್ರಕಟ; ಇಲ್ಲಿದೆ ಸಂಪೂರ್ಣ ಮಾಹಿತಿ

(Karnataka weather Today expected Rainfall in Karnataka especially in Coastal Districts Karnataka Rain Yellow Alert Issued till September 21)

Published On - 6:56 am, Mon, 20 September 21