Karnataka Weather Today: ಕರ್ನಾಟಕ, ಕೇರಳದಲ್ಲಿ ಇನ್ನೂ 4 ದಿನ ಭಾರೀ ಮಳೆ; ಕರಾವಳಿಯಲ್ಲಿ ಹಳದಿ ಅಲರ್ಟ್ ಘೋಷಣೆ
Karnataka Rain: ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ಏಳುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಇನ್ನೂ ಮೂರ್ನಾಲ್ಕು ದಿನ ರಾಜ್ಯಾದ್ಯಂತ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
Bangalore Rain: ಈಗಾಗಲೇ ಗುಲಾಬ್ (Cyclone Gulab), ಶಾಹೀನ್ ಚಂಡಮಾರುತದ (Cyclone Shaheen) ಪರಿಣಾಮದಿಂದ ಕರ್ನಾಟಕದಲ್ಲಿ ಭಾರೀ ಮಳೆಯಾಗಿದೆ. ಇದೀಗ ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ಏಳುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಇನ್ನೂ ಮೂರ್ನಾಲ್ಕು ದಿನ ರಾಜ್ಯಾದ್ಯಂತ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕೆಲವೆಡೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಇನ್ನು 4 ದಿನ ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ. ಕರ್ನಾಟಕ, ತಮಿಳುನಾಡು, ಕೇರಳದಲ್ಲಿ ಇನ್ನೂ 4 ದಿನ ಮಳೆ ಹೆಚ್ಚಾಗಲಿದೆ.
ಉತ್ತರ ಒಳನಾಡಿನ ಕಲಬುರ್ಗಿ, ಬೀದರ್, ಯಾದಗಿರಿ, ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ, ವಿಜಯಪುರ, ರಾಯಚೂರು, ಹಾವೇರಿ ಜಿಲ್ಲೆಗಳ ಕೆಲವು ಭಾಗದಲ್ಲಿ ಇನ್ನು 4 ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಅಕ್ಟೋಬರ್ 12ರವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಕೊಡಗಿನಲ್ಲಿ ಮಳೆ ಹೆಚ್ಚಾಗುವ ಸೂಚನೆ ಇದೆ. ಅಲ್ಲದೆ, ಉತ್ತರ ಒಳನಾಡಿನ ಜಿಲ್ಲೆಗಳಾದ ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ.
Fairly widespread to widespread light to moderate rain very likely over southern peninsular India & Maharashtra during next 5 days. Isolated heavy falls also likely over Konkan & Goa, Maharashtra, South Interior Karnataka and Kerala & Mahe during next 4-5 days; pic.twitter.com/b7QGKeuFKn
— India Meteorological Department (@Indiametdept) October 8, 2021
ಅಕ್ಚೋಬರ್ 10ರವರೆಗೂ ಬೆಂಗಳೂರಿನಲ್ಲಿ ಮಳೆ ಆರ್ಭಟ ಮುಂದುವರೆಯಲಿದೆ. ಬೆಂಗಳೂರು ಮಹಾನಗರ ಪಾಲಿಕೆ ಯಿಂದ ಮಳೆಗಾಲ ನಿರ್ವಹಣೆಗಾಗಿ 63 ಉಪವಿಭಾಗಗಳಲ್ಲಿ ತಾತ್ಕಾಲಿಕ ನಿಯಂತ್ರಣ ಕೊಠಡಿ ತೆರೆಯಲಾಗಿದೆ. ಅಕ್ಟೋಬರ್ ಅಂತ್ಯದವರೆಗೂ ಈ ನಿಯಂತ್ರಣ ಕೊಠಡಿಗಳು ಕಾರ್ಯ ನಿರ್ವಹಿಸಲಿವೆ. ತಗ್ಗುಪ್ರದೇಶಗಳಲ್ಲಿ ಶಾಶ್ವತ ಪರಿಹಾರಕ್ಕಾಗಿ ರಾಜಕಾಲುವೆಗಳಿಗೆ ತಡೆಗೋಡೆ ನಿರ್ಮಿಸಲಾಗುವುದು. ಮಳೆಗಾಲದಲ್ಲಿ ಪ್ರವಾಹ ಉಂಟಾಗುವ 539 ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸ್ಥಳಗಳ ಸಂಖ್ಯೆಯನ್ನು 185ಕ್ಕೆ ಇಳಿಸಲಾಗಿದೆ.
ಕರ್ನಾಟಕ ಸೇರಿದಂತೆ ತಮಿಳುನಾಡು, ಕೇರಳದಲ್ಲಿ ಇಂದು ಭಾರೀ ಮಳೆ ಸುರಿಯಲಿದೆ. ರಾಯಸೀಮೆ, ಪಶ್ಚಿಮ ಬಂಗಾಳ, ಗೋವಾ, ಲಕ್ಷದ್ವೀಪ, ಛತ್ತೀಸ್ಗಢ, ಸಿಕ್ಕಿಂ, ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶ, ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ, ನಾಗಾಲ್ಯಾಂಡ್, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ತ್ರಿಪುರ, ಮಣಿಪುರ, ಮಿಜೋರಾಂ, ದೆಹಲಿ, ಮಧ್ಯಪ್ರದೇಶ, ಜಾರ್ಖಂಡ್, ಗುಜರಾತ್, ಮಹಾರಾಷ್ಟ್ರ, ಒರಿಸ್ಸಾ, ಗೋವಾ, ಉತ್ತರ ಪ್ರದೇಶ, ಜಮ್ಮು ಕಾಶ್ಮೀರ, ಉತ್ತರಾಖಂಡ, ಲಡಾಖ್, ಪಂಜಾಬ್, ಹರಿಯಾಣ, ಆಂಧ್ರಪ್ರದೇಶದಲ್ಲಿ 4 ದಿನ ಮಳೆಯಾಗಲಿದೆ. ಇಂದು ಮುಂಬೈ, ಅಂಡಮಾನ್, ಜಾರ್ಖಂಡ್, ಬಿಹಾರದಲ್ಲಿ ಹೆಚ್ಚು ಮಳೆಯಾಗಲಿದೆ.
ಇದನ್ನೂ ಓದಿ: Bangalore Rain: ಬೆಂಗಳೂರಿನಲ್ಲಿ ರಾತ್ರಿಯಿಡೀ ಸುರಿದ ಮಳೆಗೆ ನದಿಯಂತಾದ ರಸ್ತೆಗಳು; ಜನಜೀವನ ಅಸ್ತವ್ಯಸ್ತ
Karnataka Weather Today: ಬೆಂಗಳೂರು ಸೇರಿ ಹಲವೆಡೆ ಅ. 10ರವರೆಗೂ ಮಳೆ ಸಾಧ್ಯತೆ; ಕರ್ನಾಟಕದ ಇಂದಿನ ಹವಾಮಾನ ಹೀಗಿದೆ