AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Today: ಬೆಂಗಳೂರು, ಕೊಡಗು, ಶಿವಮೊಗ್ಗ ಸೇರಿ 9 ಜಿಲ್ಲೆಗಳಲ್ಲಿ ಭಾರೀ ಮಳೆ; ಹಳದಿ ಅಲರ್ಟ್ ಘೋಷಣೆ

Karnataka Rain Today: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ ಈ 9 ಜಿಲ್ಲೆಗಳಲ್ಲಿ ಆ. 24ರವರೆಗೆ ಮಳೆ ಹೆಚ್ಚಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Karnataka Weather Today: ಬೆಂಗಳೂರು, ಕೊಡಗು, ಶಿವಮೊಗ್ಗ ಸೇರಿ 9 ಜಿಲ್ಲೆಗಳಲ್ಲಿ ಭಾರೀ ಮಳೆ; ಹಳದಿ ಅಲರ್ಟ್ ಘೋಷಣೆ
ಮಳೆ
TV9 Web
| Updated By: Skanda|

Updated on: Aug 21, 2021 | 6:04 AM

Share

Rain in Karnataka: ಕರ್ನಾಟಕದಲ್ಲಿ ಮತ್ತೆ ಮಳೆಯ ಆರ್ಭಟ (Rain in Karnataka) ಹೆಚ್ಚಾಗುತ್ತಿದ್ದು, ದಕ್ಷಿಣ ಒಳನಾಡಿನ 9 ಜಿಲ್ಲೆಗಳಲ್ಲಿ ನಾಳೆಯಿಂದ 3 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆ. 23 ಮತ್ತು 24ರಂದು ಕರ್ನಾಟಕದ ಬಹುತೇಕ ಕಡೆ ಮಳೆಯ ತೀವ್ರತೆ (Heavy Rain) ಹೆಚ್ಚಾಗಲಿದೆ. ಆಗಸ್ಟ್ 23 ಹಾಗೂ 24ರಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಚುರುಕಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ ಈ 9 ಜಿಲ್ಲೆಗಳಲ್ಲಿ ಆ. 24ರವರೆಗೆ ಮಳೆ ಹೆಚ್ಚಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಹೆಚ್ಚಿನ ಮಳೆಯ ಸಂಭವಿಸಿದೆ. ನಾಳೆಯಿಂದ ಆ. 24ರವರೆಗೂ ಮಳೆ ಹೆಚ್ಚಾಗಲಿದ್ದು, ಕರಾವಳಿಯಲ್ಲಿ ಮಳೆ ತೀವ್ರತೆ ಜಾಸ್ತಿಯಾಗಲಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ನಾಳೆಯಿಂದ ಮಳೆ ತೀವ್ರವಾಗಲಿದೆ.

ಆಗಸ್ಟ್​ ತಿಂಗಳಲ್ಲಿ ಕರ್ನಾಟಕದಲ್ಲಿ ಸಾಮಾನ್ಯ ಮಳೆಗಿಂತಲೂ ಶೇ. 47ರಷ್ಟು ಕಡಿಮೆ ಪ್ರಮಾಣದ ಮಳೆಯಾಗಿದೆ. ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಬೀದರ್, ರಾಯಚೂರು, ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಕಳೆದ ವರ್ಷಕ್ಕಿಂತಲೂ ಹೆಚ್ಚು ಮಳೆಯಾಗಿದೆ. ಕರಾವಳಿಯಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಜೂನ್ ಮತ್ತು ಜುಲೈ ತಿಂಗಳಲ್ಲಿ ಭಾರೀ ಮಳೆಯಿಂದ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿತ್ತು. ಆದರೆ, ಆಗಸ್ಟ್‌ನಲ್ಲಿ ಮಳೆ ತನ್ನ ಬಿರುಸು ಕಳೆದುಕೊಂಡಿದ್ದು, 19 ಜಿಲ್ಲೆಯಲ್ಲಿ ಮಳೆಯ ಕೊರತೆ ಕಂಡು ಬಂದಿದೆ. ದಕ್ಷಿಣ ಕನ್ನಡ ಮತ್ತು ರಾಮನಗರದಲ್ಲಿ ಮಳೆಯ ಕೊರತೆ ಹೆಚ್ಚಿದೆ. ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿಯೂ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ದಕ್ಷಿಣ ಒಳನಾಡಿನ 16 ಜಿಲ್ಲೆಯ ಪೈಕಿ 10 ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಕರಾವಳಿಯ ಮೂರು ಜಿಲ್ಲೆಯಲ್ಲಿಯೂ ಮಳೆ ಕಡಿಮೆಯಾಗಿದೆ. ಕರಾವಳಿಯಲ್ಲಿ ವಾಡಿಕೆಗಿಂತ ಶೇ.18 ಕಡಿಮೆ ಮಳೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಶೇ.31 ಮತ್ತು ದಕ್ಷಿಣ ಒಳನಾಡಿನಲ್ಲಿ ಶೇ.7ರಷ್ಟು ಮಳೆ ಹೆಚ್ಚಾಗಿದೆ.

ಕಳೆದ ವಾರ ಉತ್ತರ ಕನ್ನಡ, ರಾಯಚೂರು, ಹಾಸನ, ಚಿಕ್ಕಬಳ್ಳಾಪುರ, ಕೋಲಾರ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮಳೆಯ ಕೊರತೆ ಹೆಚ್ಚಾಗಿದೆ. ದಕ್ಷಿಣ ಕನ್ನಡ, ಉಡುಪಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಮತ್ತು ತುಮಕೂರು ಜಿಲ್ಲೆಯಲ್ಲಿ ಮಳೆಯ ಕೊರತೆಯಾಗಿದೆ. ಬೆಳಗಾವಿ, ಯಾದಗಿರಿ, ದಾವಣಗೆರೆ ಮತ್ತು ಮೈಸೂರು ಜಿಲ್ಲೆಯಲ್ಲಿ ವಾಡಿಕೆಯ ಮಳೆಯಾಗಿದೆ. ಚಿತ್ರದುರ್ಗ ಮತ್ತು ಚಾಮರಾಜನಗರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ.

ನಿನ್ನೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಉತ್ತರ ಒಳನಾಡಿನ ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಯಲ್ಲಿ ಮಳೆ ಹೆಚ್ಚಾಗಿದೆ. ಸುಮಾರು 10 ದಿನಗಳಿಂದ ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗಿನಲ್ಲಿ ಭಾರೀ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಮಳೆ ಕಡಿಮೆ ಇರಲಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಇಂದು ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಕರ್ನಾಟಕದಲ್ಲಿ ವಾಡಿಕೆಗಿಂತ ಈಗಾಗಲೇ ಶೇ. 48ರಷ್ಟು ಮಳೆ ಕಡಿಮೆಯಾಗಿದೆ. ಕರ್ನಾಟಕ ಮಾತ್ರವಲ್ಲದೆ ದಕ್ಷಿಣ ಭಾರತದಲ್ಲೂ ಮಳೆಯಾಗುತ್ತಿದ್ದು, ನಾಳೆಯಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಹೆಚ್ಚಾಗಲಿದ್ದು, ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಆ. 24ರವರೆಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ.

ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಸಿಕ್ಕಿಂ, ಒರಿಸ್ಸಾ, ಬಿಹಾರ, ತೆಲಂಗಾಣ, ಜಾರ್ಖಂಡ್, ಆಂಧ್ರಪ್ರದೇಶ, ಮಧ್ಯಪ್ರದೇಶ, ಛತ್ತೀಸ್​ಗಢದಲ್ಲಿ ಇನ್ನೆರಡು ದಿನ ಮಳೆಯಾಗಲಿದೆ. ಉಕ್ಕಿ ಹರಿಯುತ್ತಿದ್ದ ಗಂಗಾ ನದಿಯ ನೀರಿನ ಮಟ್ಟ ಕೊಂಚ ತಗ್ಗಿದೆ. ಕೇರಳ ಮತ್ತು ತಮಿಳುನಾಡಿನಲ್ಲಿ ಕೂಡ ಇಂದು ಮಳೆಯಾಗಲಿದೆ. ತೆಲಂಗಾಣ ಹಾಗೂ ಒರಿಸ್ಸಾದ ಕರಾವಳಿ ಪ್ರದೇಶಗಳಲ್ಲಿ ಮಳೆ ಮುಂದುವರೆಯಲಿದೆ.

ಇದನ್ನೂ ಓದಿ: Bengaluru: ಬೆಂಗಳೂರಿನಲ್ಲಿ ಆಗಸ್ಟ್ 30ರ ವರೆಗೆ ನೈಟ್ ಕರ್ಫ್ಯೂ ವಿಸ್ತರಣೆ: ಕಮಲ್ ಪಂತ್ ಆದೇಶ

ಮಾಸ್ಕ್ ಧರಿಸದವರಿಗೆ 250 ರೂ. ದಂಡ; ಹಬ್ಬಗಳ ಹಿನ್ನೆಲೆ ಬೆಂಗಳೂರಿಗರಿಗೆ ಹೊಸ ನಿಯಮ ಜಾರಿ

(Karnataka Weather Today: Heavy Rain continues till August 24 Yellow Alert Issued in 9 Districts Karnataka Rain)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ