Karnataka Weather Today: ಬೆಂಗಳೂರು, ಶಿವಮೊಗ್ಗ, ಉಡುಪಿ, ಉತ್ತರ ಕರ್ನಾಟಕದಲ್ಲಿ ಇನ್ನೂ 3 ದಿನ ಮಳೆ

| Updated By: ಸುಷ್ಮಾ ಚಕ್ರೆ

Updated on: Oct 15, 2021 | 6:45 AM

Karnataka Rain: ಕರ್ನಾಟಕ, ಆಂಧ್ರ ಪ್ರದೇಶ, ತಮಿಳುನಾಡು, ಅಂಡಮಾನ್ ಮತ್ತು ನಿಕೋಬಾರ್, ಲಕ್ಷದ್ವೀಪದಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲೂ ಅ. 17ರವರೆಗೆ ಭಾರೀ ಮಳೆಯಾಗುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Karnataka Weather Today: ಬೆಂಗಳೂರು, ಶಿವಮೊಗ್ಗ, ಉಡುಪಿ, ಉತ್ತರ ಕರ್ನಾಟಕದಲ್ಲಿ ಇನ್ನೂ 3 ದಿನ ಮಳೆ
ಕರ್ನಾಟಕದಲ್ಲಿ ಮಳೆ (ಸಂಗ್ರಹ ಚಿತ್ರ)
Follow us on

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿದ್ದ ಮಳೆ ನಿನ್ನೆ ಕೊಂಚ ಕಡಿಮೆಯಾಗಿತ್ತು. ಆದರೆ, ಇಂದಿನಿಂದ 3 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇಂದಿನಿಂದ ಅ. 17ರವರೆಗೆ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ಮಳೆ ಹೆಚ್ಚಾಗಿದೆ.

ಕರ್ನಾಟಕ ಮಾತ್ರವಲ್ಲದೆ ಪಕ್ಕದ ರಾಜ್ಯವಾದ ಕೇರಳ, ತಮಿಳುನಾಡು, ಆಂಧ್ರಪ್ರದೇಶದಲ್ಲೂ ಮಳೆ ಹೆಚ್ಚಾಗಲಿದೆ. ಕರ್ನಾಟಕದ ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಉತ್ತರ ಒಳನಾಡಿನಲ್ಲಿ ಇಂದು ಭಾರೀ ಮಳೆಯಾಗಲಿದೆ.

ಜವಾದ್ ಚಂಡಮಾರುತ ಏಳುವ ಸಾಧ್ಯತೆ ಇರುವುದರಿಂದ ದಕ್ಷಿಣ ಭಾರತದಲ್ಲಿ ಮಳೆ ಹೆಚ್ಚಾಗಿದೆ. ಬೆಂಗಳೂರು, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಹಾಸನ, ಹಾವೇರಿ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಅ. 17ರವರೆಗೂ ಮಳೆ ಮುಂದುವರೆಯುವ ನಿರೀಕ್ಷೆಯಿದೆ. ಕಳೆದ ತಿಂಗಳ ಅಂತ್ಯದಿಂದಲೂ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿತ್ರದುರ್ಗ, ತುಮಕೂರು, ಬಾಗಲಕೋಟೆ, ಬೆಳಗಾವಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಕೊಡಗು, ರಾಮನಗರ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರಗಳಲ್ಲಿ ಹಳದಿ ಅಲರ್ಟ್‌ ಘೋಷಿಸಲಾಗಿದೆ.

ಉತ್ತರ ಒಳನಾಡಿನ ಕಲಬುರ್ಗಿ, ಬೀದರ್‌, ಯಾದಗಿರಿ, ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ, ವಿಜಯಪುರ, ರಾಯಚೂರು, ಹಾವೇರಿ ಜಿಲ್ಲೆಗಳ ಕೆಲವು ಭಾಗದಲ್ಲಿ ಇನ್ನು 3 ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್ 17ರವರೆಗೂ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಕೊಡಗಿನಲ್ಲಿ ಮಳೆ ಹೆಚ್ಚಾಗುವ ಸೂಚನೆ ಇದೆ. ಅಲ್ಲದೆ, ಉತ್ತರ ಒಳನಾಡಿನ ಜಿಲ್ಲೆಗಳಾದ ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ.

ಕೇರಳದಲ್ಲಿ ಮಳೆ ಹೆಚ್ಚಾಗಿರುವುದರಿಂದ ಘಟ್ಟ ಪ್ರದೇಶಗಳಲ್ಲಿ ಸಂಜೆಯ ಬಳಿಕ ಸಂಚರಿಸುವುದನ್ನು ನಿಷೇಧಿಸಲಾಗಿದೆ. ಗುಡ್ಡ ಕುಸಿತವಾಗುವ ಭೀತಿ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ಆದೇಶ ನೀಡಲಾಗಿದೆ. ತಿರುವನಂತಪುರಂ, ಕೊಲ್ಲಂ, ಇಡುಕ್ಕಿ ಸೇರಿದಂತೆ ಕೇರಳದ 7 ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ಕರ್ನಾಟಕ, ಆಂಧ್ರ ಪ್ರದೇಶ, ಕೇರಳ, ತಮಿಳುನಾಡು, ಪುದುಚೆರಿ, ಗೋವಾ, ಮಹಾರಾಷ್ಟ್ರದಲ್ಲಿ 3 ದಿನ ಭಾರೀ ಮಳೆಯಾಗಲಿದೆ. ಕರ್ನಾಟಕ, ಆಂಧ್ರ ಪ್ರದೇಶ, ತಮಿಳುನಾಡು, ಅಂಡಮಾನ್ ಮತ್ತು ನಿಕೋಬಾರ್, ಲಕ್ಷದ್ವೀಪದಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಪುದುಚೇರಿ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಗೋವಾ, ಕಾರೈಕಲ್‌, ಪಶ್ಚಿಮ ಬಂಗಾಳ, ಅರಣಾಚಲ ಪ್ರದೇಶ, ಮಧ್ಯಪ್ರದೇಶ, ಛತ್ತೀಸ್​ಗಢ, ಒಡಿಶಾ, ಸಿಕ್ಕಿಂನಲ್ಲಿ ಇಂದು ವಿಪರೀತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: Karnataka Weather Today: ಬೆಂಗಳೂರು ಸೇರಿ ರಾಜ್ಯಾದ್ಯಂತ 3 ದಿನ ಭಾರೀ ಮಳೆ; 19 ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ

Kerala Rain: ಭಾರೀ ಮಳೆಗೆ ಕೇರಳ ತತ್ತರ; 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ