Karnataka Weather Today: ಬೆಂಗಳೂರು ಸೇರಿ ರಾಜ್ಯಾದ್ಯಂತ 3 ದಿನ ಭಾರೀ ಮಳೆ; 19 ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ
Karnataka Rain: ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿತ್ರದುರ್ಗ, ತುಮಕೂರು, ಬಾಗಲಕೋಟೆ, ಬೆಳಗಾವಿ, ವಿಜಯಪುರ, ಬೆಂಗಳೂರು, ಕೋಲಾರ, ಕೊಡಗು, ರಾಮನಗರ, ಶಿವಮೊಗ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ ಸೇರಿ ಹಲವೆಡೆ ಭಾರೀ ಮಳೆಯಾಗುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು: ಕಳೆದೆರಡು ವಾರಗಳಿಂದ ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ (Rain in Karnataka) ಜೋರಾಗಿದೆ. 2-3 ದಿನಗಳಿಂದ ರಾಜಧಾನಿ ಬೆಂಗಳೂರು (Bengaluru Rain) ಸೇರಿದಂತೆ ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲೂ ಭಾರೀ ಮಳೆಯಾಗುತ್ತಿದೆ. ಮಳೆಯ ಅಬ್ಬರಕ್ಕೆ ಬೆಂಗಳೂರಿನ ರಸ್ತೆಗಳು ತುಂಬಿ ಹರಿಯುತ್ತಿವೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಇಂದು ಕರ್ನಾಟಕದ 19ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ (Heavy Rain) ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ.
ಬಂಗಾಳಕೊಲ್ಲಿಯಲ್ಲಿ ಜವಾದ್ ಚಂಡಮಾರುತ ಏಳಲು ಸಜ್ಜಾಗಿದೆ. ಈ ವಾರ ಈ ಹೊಸ ಚಂಡಮಾರುತ ಏಳುವ ಸಾಧ್ಯತೆಯಿದ್ದು, ಬೆಂಗಳೂರು, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಹಾಸನ, ಹಾವೇರಿ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಅ. 13ರವರೆಗೂ ಮಳೆ ಮುಂದುವರೆಯುವ ನಿರೀಕ್ಷೆಯಿದೆ. ಕಳೆದ ತಿಂಗಳ ಅಂತ್ಯದಿಂದಲೂ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಬೆಂಗಳೂರಿನಲ್ಲೂ ಎಡೆಬಿಡದೆ ಮಳೆ ಸುರಿದ ಪರಿಣಾಮ ಅನೇಕ ಅನಾಹುತಗಳಾಗಿವೆ. ಅ. 12 ಮತ್ತು 13ರಂದು ರಾಜ್ಯದಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದೆ.
ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿತ್ರದುರ್ಗ, ತುಮಕೂರು, ಬಾಗಲಕೋಟೆ, ಬೆಳಗಾವಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಕೊಡಗು, ರಾಮನಗರ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅ. 12ರಂದು ಮತ್ತೆ ಚುರುಕಾಗಲಿರುವ ಮುಂಗಾರು ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಮೈಸೂರು, ಚಾಮರಾಜ ನಗರ, ರಾಯಚೂರು, ಬೀದರ್, ಯಾದಗಿರಿ ಜಿಲ್ಲೆ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಧಾರಾಕಾರವಾಗಿ ಸುರಿಯುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಕಲಬುರ್ಗಿ, ಬೀದರ್, ಯಾದಗಿರಿ, ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ, ವಿಜಯಪುರ, ರಾಯಚೂರು, ಹಾವೇರಿ ಜಿಲ್ಲೆಗಳ ಕೆಲವು ಭಾಗದಲ್ಲಿ ಇನ್ನು 3 ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್ 12ರವರೆಗೂ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಕೊಡಗಿನಲ್ಲಿ ಮಳೆ ಹೆಚ್ಚಾಗುವ ಸೂಚನೆ ಇದೆ. ಅಲ್ಲದೆ, ಉತ್ತರ ಒಳನಾಡಿನ ಜಿಲ್ಲೆಗಳಾದ ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ.
ನೈಋತ್ಯ ಮುಂಗಾರು ಮುಗಿದು ಈಶಾನ್ಯ ಹಿಂಗಾರು ಮಳೆ ಶುರುವಾಗುತ್ತಿರುವುದರಿಂದ ಮಳೆಯ ಅಬ್ಬರ ಹೆಚ್ಚಾಗಿದೆ. ಕಳೆದ ಸೆ. 30ಕ್ಕೆ ಈ ಬಾರಿಯ ಮುಂಗಾರು ಅಂತ್ಯಗೊಂಡಿದೆ. ಕರ್ನಾಟಕ, ಆಂಧ್ರ ಪ್ರದೇಶ, ಕೇರಳ, ತಮಿಳುನಾಡು, ಪುದುಚೆರಿ, ಗೋವಾ, ಮಹಾರಾಷ್ಟ್ರದಲ್ಲಿ 4 ದಿನ ಭಾರೀ ಮಳೆಯಾಗಲಿದೆ. ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ಇನ್ನೆರಡು ದಿನ ಮಳೆಯಾಗಲಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಬಹುತೇಕ ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಅಕ್ಟೋಬರ್ 13ರವರೆಗೂ ಕರ್ನಾಟಕದ ಉತ್ತರ ಒಳನಾಡು ಸೇರಿ ಪುದುಚೇರಿ, ಆಂಧ್ರ ಕರಾವಳಿ, ತೆಲಂಗಾಣ, ತಮಿಳುನಾಡು, ಗೋವಾ, ಕಾರೈಕಲ್, ಪಶ್ಚಿಮ ಬಂಗಾಳ, ಒಡಿಶಾ, ಸಿಕ್ಕಿಂ, ಕೊಂಕಣದಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆ ಸಾಧ್ಯತೆ ಇದೆ.
ಇದನ್ನೂ ಓದಿ: Karnataka Rain: ಬೆಂಗಳೂರಿನಲ್ಲಿ ಇಂದು ಗುಡುಗು ಸಹಿತ ಮಳೆ; ಕರ್ನಾಟಕದ ಹಲವೆಡೆ ಆರೆಂಜ್ ಅಲರ್ಟ್ ಘೋಷಣೆ
Karnataka Weather Today: ಕರ್ನಾಟಕದಲ್ಲಿ ಅ. 13ರವರೆಗೂ ಮಳೆಯ ಅಬ್ಬರ; ಕರಾವಳಿಯಲ್ಲಿಂದು ಹಳದಿ ಅಲರ್ಟ್ ಘೋಷಣೆ