Karnataka Rain: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದ್ದು, ಶಿವಮೊಗ್ಗ, ಮೈಸೂರು, ಮಂಡ್ಯ, ಚಿಕ್ಕಮಗಳೂರು, ಚಾಮರಾಜನಗರ, ಹಾಸನ, ರಾಮನಗರ, ಕೊಡಗು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಹಾಗೇ, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದೆ. ಉತ್ತರ ಕರ್ನಾಟಕದಲ್ಲೂ ಇಂದು ಮತ್ತು ನಾಳೆ ಮಳೆ ಮುಂದುವರೆಯಲಿದೆ.
ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಇನ್ನು 3 ದಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಶಾನ್ಯ ಮುಂಗಾರು ಆಗಮನದಿಂದ ಕರ್ನಾಟಕದ ದಕ್ಷಿಣ ಭಾಗದಲ್ಲಿ ಇಂದಿನಿಂದ 3 ದಿನ ಮಳೆ ಹೆಚ್ಚಾಗಲಿದೆ. ಕರ್ನಾಟಕದಲ್ಲಿ ಇಂದಿನಿಂದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ರಾಮನಗರ, ಕೋಲಾರ, ಮಂಡ್ಯ, ಮೈಸೂರು ಮಳೆ ಹೆಚ್ಚಾಗಲಿದೆ.
ಕೇರಳದಲ್ಲಿ ಮತ್ತೆ ಮಳೆಯ ಆರ್ಭಟ ಹೆಚ್ಚಾಗಿದ್ದು, ಇಂದು 11 ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಕಣ್ಣೂರು, ಕಾಸರಗೋಡು, ಅಲಪ್ಪುಳ, ತಿರುವನಂತಪುರಂ, ಕೊಲ್ಲಂ ಸೇರಿದಂತೆ 11 ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಇರಲಿದೆ. ಭಾರೀ ಮಳೆಯಿಂದ ಕೇರಳದ ಡ್ಯಾಂಗಳು ತುಂಬಿ ನಿಂತಿವೆ.
Rainfall Forecast: Scattered to widespread very light to moderate rains with isolated heavy to very heavy rains likely over SIK and Malnad, and isolated to scattered moderate rains with isolated heavy rains likely to prevail over Coastal and dry weather likely to prevail over NIK pic.twitter.com/ww2USDEggi
— KSNDMC (@KarnatakaSNDMC) October 26, 2021
ಕರ್ನಾಟಕ ಮಾತ್ರವಲ್ಲದೆ ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ ಮತ್ತು ಮಾಹೆಯ ಕೆಲವು ಭಾಗಗಳಲ್ಲಿ ಇಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಅದರಲ್ಲೂ ಕೇರಳ ಮತ್ತು ಮಾಹೆಯಲ್ಲಿ ಇಂದು ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ತಮಿಳುನಾಡು, ಪುದುಚೇರಿ, ಕಾರೈಕಲ್, ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಆಂಧ್ರಪ್ರದೇಶ, ಯಾನಂ ಮತ್ತು ಲಕ್ಷದ್ವೀಪದಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಗಂಗಾನದಿ ಪಶ್ಚಿಮ ಬಂಗಾಳ ಮತ್ತು ರಾಯಲಸೀಮಾದಲ್ಲಿ ಗುಡುಗು ಸಹಿತ ಪ್ರತ್ಯೇಕ ಮಳೆಯಾಗುವ ಸಾಧ್ಯತೆಯಿದೆ.
ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಇಂದಿನಿಂದ ಶನಿವಾರದವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈಶಾನ್ಯ ಮಾನ್ಸೂನ್ ಬುಧವಾರ ದಕ್ಷಿಣ ಭಾರತದ ಪೂರ್ವ ಕರಾವಳಿಯಾದ್ಯಂತ ಮಳೆ ತರುವ ಸಾಧ್ಯತೆಯಿದೆ. ನೈಋತ್ಯ ಬಂಗಾಳ ಕೊಲ್ಲಿಯ ಮೇಲೆ ಪಶ್ಚಿಮಕ್ಕೆ ಚಲಿಸುವ ಚಂಡಮಾರುತದ ಪರಿಚಲನೆಯೊಂದಿಗೆ, ಗುರುವಾರದಿಂದ ಈ ವಾರಾಂತ್ಯದವರೆಗೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಇದನ್ನೂ ಓದಿ: Uttarakhand Rain: ಉತ್ತರಾಖಂಡದಲ್ಲಿ ಮಳೆಯಿಂದ ಸಾವನ್ನಪ್ಪಿದವರ ಸಂಖ್ಯೆ 76ಕ್ಕೆ ಏರಿಕೆ; 14 ಜನ ಇನ್ನೂ ನಾಪತ್ತೆ
Karnataka Weather Today: ಕರ್ನಾಟಕದ 19 ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಮಳೆಯ ಅಬ್ಬರ