Karnataka Weather Today: ಕರ್ನಾಟಕದಲ್ಲಿ ಆಗಸ್ಟ್​ 15ರವರೆಗೂ ವರುಣನ ಆರ್ಭಟ; ಈ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆ

Karnataka Rain Today | ಕರಾವಳಿಯಲ್ಲಿ ಆಗಸ್ಟ್​ 15ರವರೆಗೆ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

Karnataka Weather Today: ಕರ್ನಾಟಕದಲ್ಲಿ ಆಗಸ್ಟ್​ 15ರವರೆಗೂ ವರುಣನ ಆರ್ಭಟ; ಈ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆ
ಹವಾಮಾನ ವರದಿ (ಸಾಂಕೇತಿಕ ಚಿತ್ರ)
Follow us
TV9 Web
| Updated By: Skanda

Updated on: Aug 12, 2021 | 6:21 AM

Karnataka Rains: ಬೆಂಗಳೂರು: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಆಗಸ್ಟ್ 15ರವರೆಗೆ ಮಳೆಯಾಗುವ ಸಾಧ್ಯತೆಯಿದೆ. ಇಂದು ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಪ್ರಬಲ ಮಾರುತಗಳ ಪ್ರಭಾವದಿಂದ ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಈಗಾಗಲೇ ಉತ್ತರ ಭಾರತದ ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ. ದಕ್ಷಿಣ ಭಾರತದಲ್ಲೂ ಮಳೆಯಾಗುತ್ತಿದ್ದು, ಇಂದು ಕರ್ನಾಟಕದ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಇಂದಿನಿಂದ 4 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲೂ ಈ ವಾರ ಮಳೆಯ ಆರ್ಭಟ ಹೆಚ್ಚಾಗಲಿದೆ. ಇಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಹೆಚ್ಚಾಗಲಿದ್ದು, ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಕಲ್ಯಾಣ ಕರ್ನಾಟಕದಲ್ಲಿ ಇಂದಿನಿಂದ ಮಳೆ ಕೊಂಚ ಕಡಿಮೆಯಾಗಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ತಮಿಳುನಾಡು, ಕೇರಳ ಹಾಗೂ ಕರ್ನಾಟಕದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಆ. 13ರವರೆಗೂ ಮಳೆ ಮುಂದುವರೆಯಲಿದೆ.

ಕರಾವಳಿಯಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಇತ್ತ ಬೆಂಗಳೂರಿನಲ್ಲೂ ಇಂದು ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ಬೆಂಗಳೂರಿನಲ್ಲಿ 209 ಸೂಕ್ಷ್ಮ ವಲಯಗಳನ್ನು ಗುರುತಿಸಲಾಗಿದ್ದು, ಮಳೆ ಬಂದರೆ ಈ ಭಾಗಗಳಲ್ಲಿ ಇರುವ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗುವುದರಿಂದ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ಜುಲೈ ತಿಂಗಳ ಅಂತ್ಯದಲ್ಲಿ ಸುರಿದ ಭಾರೀ ಮಳೆಯಿಂದ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿತ್ತು. ಆ ಮಳೆಯಿಂದ ಕರ್ನಾಟಕದ 13 ಜಿಲ್ಲೆಗಳಲ್ಲಿ 2.3 ಲಕ್ಷ ಹೆಕ್ಟೇರ್ ಬೆಳೆ ಹಾನಿ ಉಂಟಾಗಿದೆ. ಮಳೆಯ ಹೊಡೆತಕ್ಕೆ 10,538 ಮನೆಗಳು ಹಾನಿಯಾಗಿವೆ. ವಿದ್ಯುತ್ ಕಂಬಗಳು, ಸೇತುವೆಗಳು ಮುರಿದು ಬಿದ್ದು ಕೋಟ್ಯಂತರ ರೂ. ನಷ್ಟವಾಗಿದೆ. ಹಲವಾರು ಜನರು ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಈ ವರ್ಷದ ಪ್ರವಾಹದಲ್ಲಿ ಕರ್ನಾಟಕದ 14 ಜನರು ಸಾವನ್ನಪ್ಪಿದ್ದಾರೆ. ಭಾರೀ ಪ್ರವಾಹದಿಂದ ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ ಸೇರಿ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಹೆಚ್ಚು ನಷ್ಟವಾಗಿದೆ.

ಕೇವಲ ಕರ್ನಾಟಕ ಮಾತ್ರವಲ್ಲದೆ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಧ್ಯಪ್ರದೇಶ ರಾಜ್ಯಗಳಲ್ಲೂ ಇಂದಿನಿಂದ ವ್ಯಾಪಕ ಮಳೆಯಾಗಲಿದೆ. ಮಣಿಪುರ, ತ್ರಿಪುರ, ಮಿಜೋರಾಂ, ಉತ್ತರ ಪ್ರದೇಶ, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಇನ್ನೆರಡು ದಿನ ಮಳೆಯಾಗುವ ನಿರೀಕ್ಷೆಯಿದೆ. ಉತ್ತರಾಖಂಡ, ಸಿಕ್ಕಿಂ, ಗೋವಾ, ಮಹಾರಾಷ್ಟ್ರ, ಕೇರಳದಲ್ಲಿ ಇನ್ನೂ ಮಳೆಯ ಆರ್ಭಟ ಕಡಿಮೆಯಾಗಿಲ್ಲ.

ಇದನ್ನೂ ಓದಿ: Karnataka Weather Today: ಮಲೆನಾಡು, ಕರಾವಳಿಯಲ್ಲಿ ಇನ್ನೆರಡು ದಿನ ಮಳೆ; ಬೆಂಗಳೂರಿನ ಇಂದಿನ ಹವಾಮಾನ ಹೀಗಿದೆ

Karnataka Dams Water Level: ರಾಜ್ಯದಲ್ಲಿಂದು ಸಾಧಾರಣ ಮಳೆ; ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

(Karnataka Weather Today Heavy Rain Expected till August 15 in Coastal Karnataka and Malnad Karnataka Rain)