ಬೆಂಗಳೂರು: ಕರ್ನಾಟಕದ ಮಲೆನಾಡು, ಕರಾವಳಿ, ಕೊಡಗು, ಬೆಂಗಳೂರು, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರೀ (Heavy Rain) ಮಳೆಯಾಗುತ್ತಿದೆ. ಮಳೆಯಿಂದ ಬೆಂಗಳೂರಿನ ಬಹುತೇಕ ಏರಿಯಾಗಳು ನೀರಿನಿಂದ ಆವೃತವಾಗಿವೆ. ನೆರೆಯ ತಮಿಳುನಾಡು, ಕೇರಳ, ಆಂಧ್ರಪ್ರದೇಶದಲ್ಲಿ ಮಳೆ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಮಳೆ ಹೆಚ್ಚಾಗಿರುವುದರಿಂದ ಬಿಬಿಎಂಪಿಯಿಂದ (BBMP) ಹೆಚ್ಚಿನ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಇಂದು ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ಮಳೆ ಹೆಚ್ಚಾಗಿದೆ. ಕರ್ನಾಟಕದ ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಉತ್ತರ ಒಳನಾಡಿನಲ್ಲಿ ಇಂದು ಭಾರೀ ಮಳೆಯಾಗಲಿದೆ.
ಬೆಂಗಳೂರು, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಹಾಸನ, ಹಾವೇರಿ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಇಂದು ಮಳೆ ಮುಂದುವರೆಯುವ ನಿರೀಕ್ಷೆಯಿದೆ. ಕಳೆದ ತಿಂಗಳ ಅಂತ್ಯದಿಂದಲೂ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿತ್ರದುರ್ಗ, ತುಮಕೂರು, ಬಾಗಲಕೋಟೆ, ಬೆಳಗಾವಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಕೊಡಗು, ರಾಮನಗರ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡಿನ ಕಲಬುರ್ಗಿ, ಬೀದರ್, ಯಾದಗಿರಿ, ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ, ವಿಜಯಪುರ, ರಾಯಚೂರು, ಹಾವೇರಿ ಜಿಲ್ಲೆಗಳ ಕೆಲವು ಭಾಗದಲ್ಲಿ ಇಂದು ಮತ್ತು ನಾಳೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಕೊಡಗಿನಲ್ಲಿ ಮಳೆ ಹೆಚ್ಚಾಗುವ ಸೂಚನೆ ಇದೆ. ಅಲ್ಲದೆ, ಉತ್ತರ ಒಳನಾಡಿನ ಜಿಲ್ಲೆಗಳಾದ ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ.
ಅಸ್ಸಾಂ, ಮೇಘಾಲಯ, ಉತ್ತರಾಖಂಡ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ಉತ್ತರ ಪ್ರದೇಶ, ತ್ರಿಪುರ, ಪುದುಚೇರಿ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಗೋವಾ, ಕಾರೈಕಲ್, ಪಶ್ಚಿಮ ಬಂಗಾಳ, ಅರುಣಾಚಲ ಪ್ರದೇಶ, ಮಧ್ಯಪ್ರದೇಶ, ಛತ್ತೀಸ್ಗಢ, ಒಡಿಶಾ, ಸಿಕ್ಕಿಂನಲ್ಲಿ ಇಂದು ವಿಪರೀತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹಿಮಾಚಲ ಪ್ರದೇಶ, ಉತ್ತರ ಪ್ರದೇಶದಲ್ಲಿ ಇಂದು ಮತ್ತು ನಾಳೆಯೂ ಮಳೆ ಮುಂದುವರೆಯಲಿದೆ.
ಒರಿಸ್ಸಾ, ಹಿಮಾಚಲ ಪ್ರದೇಶ, ಮಹಾರಾಷ್ಟ್ರ, ತಮಿಳುನಾಡು, ಕೇರಳ, ಅಂಡಮಾನ್ ನಿಕೋಬಾರ್, ಜಾರ್ಖಂಡ್, ಲಕ್ಷದ್ವೀಪ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಸಿಕ್ಕಿಂ, ಬಿಹಾರ, ಹರಿಯಾಣ, ದೆಹಲಿ, ರಾಜಸ್ಥಾನ, ತೆಲಂಗಾಣ, ಗುಜರಾತ್ನಲ್ಲಿ ಇಂದು ಮಳೆಯಾಗಲಿದೆ. ರಾಜಸ್ಥಾನ, ಜಮ್ಮು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಉತ್ತರ ಪ್ರದೇಶದಲ್ಲಿ ಅ. 19ರವರೆಗೆ ಮಳೆ ಮುಂದುವೆಯಲಿದೆ.
ಕೇರಳದ ಕೊಟ್ಟಾಯಂನಲ್ಲಿ ಮಳೆಯಿಂದ ಭೂಕುಸಿತ ಉಂಟಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ. ಅವಶೇಷಗಳಡಿ ಸಿಲುಕಿ 13ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ಅವರಲ್ಲಿ ಒಂದೇ ಕುಟುಂಬದ 6 ಜನರು ಸೇರಿದ್ದಾರೆ. ಮಳೆ ಹೆಚ್ಚಾಗಿರುವುದರಿಂದ ಹಲವೆಡೆ ಪ್ರವಾಹದ ಆತಂಕ ಎದುರಾಗಿದ್ದು, ಮನೆಗಳು ಕೊಚ್ಚಿ ಹೋಗಿವೆ. ಮಳೆಯಿಂದ ಸಾಕಷ್ಟು ಆಸ್ತಿ-ಪಾಸ್ತಿಗಳು ನಷ್ಟವಾಗಿವೆ. ವಿಪರೀತ ಮಳೆಯಾಗುತ್ತಿರುವ ಪಥನಾಂತಿಟ್ಟ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ತಿರುವನಂತಪುರ, ಕೊಲ್ಲಂ, ಅಲಪ್ಪುಳ, ಪಲಕ್ಕಾಡ್, ಮಲಪ್ಪುರಂ, ಕೋಯಿಕ್ಕೋಡ್ ಮತ್ತು ವಯನಾಡ್ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಮುನ್ಸೂಚನೆ ಇರುವ ಕಾರಣ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.
ಇದನ್ನೂ ಓದಿ: Kerala Rain: ಕೇರಳದಲ್ಲಿ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ
Karnataka Weather Today: ಬೆಂಗಳೂರು, ಶಿವಮೊಗ್ಗ, ಉಡುಪಿ, ಉತ್ತರ ಕರ್ನಾಟಕದಲ್ಲಿ ಇನ್ನೂ 3 ದಿನ ಮಳೆ