Karnataka Weather Today: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದು ಭಾರೀ ಮಳೆ ಸಾಧ್ಯತೆ

Karnataka Rain today: ಕರ್ನಾಟಕದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು, ಇಂದು ರಾಜ್ಯದ ಬಹುತೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಇಂದು ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

Karnataka Weather Today: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದು ಭಾರೀ ಮಳೆ ಸಾಧ್ಯತೆ
ಮಳೆ
Follow us
| Updated By: ganapathi bhat

Updated on:Aug 20, 2021 | 6:15 AM

Karnataka Rain: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ (Karnataka Rains) ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಇಂದು ಕರ್ನಾಟಕದ 8 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ (Rain in Karnataka) ಸಾಧ್ಯತೆಯಿದೆ. ಶಿವಮೊಗ್ಗ, ಕೊಡಗು, ರಾಮನಗರ, ಮೈಸೂರು, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲೂ (Bengaluru Rain) ಮಳೆಯ ಆರ್ಭಟ ಹೆಚ್ಚಾಗಿದೆ. ಇಂದು ಕೂಡ ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆಯ ಬಳಿಕ ಮಳೆಯಾಗುವ ಸಾಧ್ಯತೆಯಿದೆ.

ಕರ್ನಾಟಕದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು, ಇಂದು ರಾಜ್ಯದ ಬಹುತೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಪ್ರಬಲ ಮಾರುತಗಳ ಪ್ರಭಾವದಿಂದ ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಸುಮಾರು 10 ದಿನಗಳಿಂದ ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗಿನಲ್ಲಿ ಭಾರೀ ಮಳೆಯಾಗುತ್ತಿದೆ. ಬೆಂಗಳೂರಿನಲ್ಲೂ ಇಂದು ಮೋಡ ಕವಿದ ವಾತಾವರಣ ತುಂಬಿರಲಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಇಂದು ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಕರ್ನಾಟಕದಲ್ಲಿ ವಾಡಿಕೆಗಿಂತ ಈಗಾಗಲೇ ಶೇ. 48ರಷ್ಟು ಮಳೆ ಕಡಿಮೆಯಾಗಿದೆ. ಕರ್ನಾಟಕ ಮಾತ್ರವಲ್ಲದೆ ದಕ್ಷಿಣ ಭಾರತದಲ್ಲೂ ಮಳೆಯಾಗುತ್ತಿದ್ದು, ಕರ್ನಾಟಕದ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಮಳೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ.

ಇಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಹೆಚ್ಚಾಗಲಿದ್ದು, ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ.

ತಮಿಳುನಾಡು, ಕೇರಳ ಹಾಗೂ ಕರ್ನಾಟಕದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಕೂಡ ಇಂದು ಮಳೆ ಮುಂದುವರೆಯಲಿದೆ. ಈಗಾಗಲೇ ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಬೀದರ್, ರಾಯಚೂರು, ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಕಳೆದ ವರ್ಷಕ್ಕಿಂತಲೂ ಹೆಚ್ಚು ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಮಳೆಯಾಗಲಿದೆ. ಕರಾವಳಿಯಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಇತ್ತ ಬೆಂಗಳೂರಿನಲ್ಲೂ ಇಂದು ಮಳೆಯಾಗುವ ಸಾಧ್ಯತೆಯಿದೆ. ಈ ಬಾರಿ ಕೊಡಗಿನ ಮಡಿಕೇರಿ, ವಿರಾಜಪೇಟೆ, ಸೋಮವಾರ ಪೇಟೆ ಮುಂತಾದ ಕಡೆಗಳಲ್ಲಿ ಕಳೆದ ವರ್ಷಗಳಿಗಿಂತ ಹೆಚ್ಚು ಮಳೆಯಾಗಿದೆ. ಈ ಬಾರಿ ತುಂಗಭದ್ರಾ ಹಾಗೂ ಘಟಪ್ರಭಾ ಜಲಾಶಯದಲ್ಲಿ ನೀರು ಭರ್ತಿಯಾಗಿದೆ.

ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯ ಭಾರೀ ಕಡಿಮೆಯಾಗಿದೆ. ಜೂನ್ ಮತ್ತು ಜುಲೈನಲ್ಲಿ ಸುರಿದ ಭಾರೀ ಮಳೆಯಿಂದ ಈ ಭಾಗದಲ್ಲಿ ಪ್ರವಾಹ ಉಂಟಾಗಿತ್ತು. ಆದರೀಗ ಬಿಸಿಲಿನ ಕಾವು ಹೆಚ್ಚಾಗಿದೆ. ಆಗಸ್ಟ್​ ತಿಂಗಳಲ್ಲಿ ಕರ್ನಾಟಕದಲ್ಲಿ ಸಾಮಾನ್ಯ ಮಳೆಗಿಂತಲೂ ಶೇ. 47ರಷ್ಟು ಕಡಿಮೆ ಪ್ರಮಾಣದ ಮಳೆಯಾಗಿದೆ.

ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಸಿಕ್ಕಿಂ, ಒರಿಸ್ಸಾ, ಬಿಹಾರ, ತೆಲಂಗಾಣ, ಜಾರ್ಖಂಡ್, ಆಂಧ್ರಪ್ರದೇಶ, ಮಧ್ಯಪ್ರದೇಶ, ಛತ್ತೀಸ್​ಗಢದಲ್ಲಿ ಇಂದು ಮಳೆಯಾಗಲಿದೆ. ಉಕ್ಕಿ ಹರಿಯುತ್ತಿದ್ದ ಗಂಗಾ ನದಿಯ ನೀರಿನ ಮಟ್ಟ ಕೊಂಚ ತಗ್ಗಿದೆ. ಕೇರಳ ಮತ್ತು ತಮಿಳುನಾಡಿನಲ್ಲಿ ಕೂಡ ಇಂದು ಮಳೆಯಾಗಲಿದೆ. ತೆಲಂಗಾಣ ಹಾಗೂ ಒರಿಸ್ಸಾದ ಕರಾವಳಿ ಪ್ರದೇಶಗಳಲ್ಲಿ ಇಂದು ಮಳೆ ಮುಂದುವರೆಯಲಿದೆ.

ಒರಿಸ್ಸಾದ ಬಹುತೇಕ ಭಾಗಗಳಲ್ಲಿಯೂ ಮಳೆ ಹೆಚ್ಚಾಗಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಿಜೋರಾಂ, ಮಣಿಪುರ, ತ್ರಿಪುರ, ಸಿಕ್ಕಿಂ, ಜಾರ್ಖಂಡ್, ಮಧ್ಯಪ್ರದೇಶ, ಮಹಾರಾಷ್ಟ್ರ, ಗೋವಾ, ಛತ್ತೀಸ್​ಗಢ, ಆಂಧ್ರಪ್ರದೇಶ, ತೆಲಂಗಾಣ, ಅಂಡಮಾನ್ ನಿಕೋಬಾರ್, ತಮಿಳುನಾಡು, ಹಿಮಾಚಲ ಪ್ರದೇಶ, ಉತ್ತರ ಪ್ರದೇಶ, ರಾಜಸ್ಥಾನ, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದೆ.

ಇದನ್ನೂ ಓದಿ: Karnataka Weather Today: ಕರಾವಳಿ, ಮಲೆನಾಡಿನಲ್ಲಿ ಇನ್ನೆರಡು ದಿನ ಗುಡುಗು ಸಹಿತ ಮಳೆ ಸಾಧ್ಯತೆ

ಮಾಸ್ಕ್ ಧರಿಸದವರಿಗೆ 250 ರೂ. ದಂಡ; ಹಬ್ಬಗಳ ಹಿನ್ನೆಲೆ ಬೆಂಗಳೂರಿಗರಿಗೆ ಹೊಸ ನಿಯಮ ಜಾರಿ

(Karnataka Weather Today Heavy Rain in Mangalore Udupi Uttara Kannada Friday Karnataka Rain)

Published On - 6:12 am, Fri, 20 August 21