Karnataka Weather Today: ರಾಜ್ಯದಲ್ಲಿ ಹೆಚ್ಚಿದ ವರುಣಾರ್ಭಟ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​

Karnataka Weather: ರಾಜ್ಯದಲ್ಲಿಂದು ವರುಣನ ಆರ್ಭಟ ಹೆಚ್ಚಿರಲಿದ್ದು, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು ನಗರದಲ್ಲೂ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ನೆರೆಯ ರಾಜ್ಯದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಭಾರಿ ಗಾಳಿಯೊಂದಿಗೆ ಮೊಂಟಾ ಚಂಡಮಾರುತ ಅಪ್ಪಳಿಸುತ್ತಿದೆ. ಈ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ನೀಡಲಾಗಿದೆ.

Karnataka Weather Today: ರಾಜ್ಯದಲ್ಲಿ ಹೆಚ್ಚಿದ ವರುಣಾರ್ಭಟ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​

Updated on: Oct 28, 2025 | 7:35 AM

ಬೆಂಗಳೂರು, ಅಕ್ಟೋಬರ್​ 28: ಕರ್ನಾಟದಲ್ಲಿ ವರುಣಾರ್ಭಟ (Weather Forecast)​ ಹೆಚ್ಚಿರಲಿದ್ದು, ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಿದೆ. ಉಳಿದೆಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಭಾಗದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಿರಲಿದೆ. ಬೆಂಗಳೂರಿನಲ್ಲಿ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಮಳೆ?

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,ಉತ್ತರ ಕನ್ನಡ, ಉಡುಪಿಯಲ್ಲಿ 30-40 ಕೀಮೀ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದ್ದು, ಈ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೀದರ್, ಕಲಬುರ್ಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೀದರ್, ಕಲಬುರ್ಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಿರಲಿದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ , ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಲ್ಲಿಯೂ ಮಳೆ

ಬೆಂಗಳೂರಿನಲ್ಲಿ ಇಂದು ಶೇ. 60 ರಷ್ಟು ಮಳೆಯಾಗುವ ಸಾಧ್ಯತೆಯಿದ್ದು, ಮೋಡ ಕವಿದ ವಾತಾವರಣವಿರಲಿದೆ. ನಗರದ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್​ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್​ ತಲುಪಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ 3 ದಿನಗಳ ತನಕ ರಾಜ್ಯದಲ್ಲಿ ಮಳೆ

ಮೊಂತಾ ಚಂಡಮಾರುತ ಹಿನ್ನಲೆ ಮುಂದಿನ 3 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರು ಸೇರಿದಂತೆ ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಬೀದರ್, ಕಲಬುರಗಿ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಚಿತ್ರದುರ್ಗ, ದಾವಣಗೆರೆಯಲ್ಲೂ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.