AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Today: ಕರ್ನಾಟಕದಲ್ಲಿ ಇನ್ನೆರಡು ದಿನ ವಿಪರೀತ ಮಳೆ; ಬೆಂಗಳೂರಿನಲ್ಲೂ ವರುಣನ ಆರ್ಭಟ

Karnataka Rain | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ಕಳೆದೊಂದು ವಾರದಿಂದ ಮುಂಗಾರು ಮಳೆ ಚುರುಕುಗೊಂಡಿದೆ. ಇಂದು ಮತ್ತು ನಾಳೆ ರಾಜ್ಯ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ.

Karnataka Weather Today: ಕರ್ನಾಟಕದಲ್ಲಿ ಇನ್ನೆರಡು ದಿನ ವಿಪರೀತ ಮಳೆ; ಬೆಂಗಳೂರಿನಲ್ಲೂ ವರುಣನ ಆರ್ಭಟ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Sep 05, 2021 | 6:31 AM

Share

Karnataka Rain | ಕಳೆದ ಜೂನ್- ಜುಲೈ ತಿಂಗಳಲ್ಲಿ ಜೋರಾಗಿ ಅಬ್ಬರಿಸಿದ್ದ ಮಳೆರಾಯ (Heavy Rain) ಆಗಸ್ಟ್​ ತಿಂಗಳಲ್ಲಿ ಕೊಂಚ ಮಂಕಾಗಿದ್ದ. ಇದೀಗ ಸೆಪ್ಟೆಂಬರ್ ಆರಂಭದಿಂದ ಮತ್ತೆ ವರುಣನ ಆರ್ಭಟ ಶುರುವಾಗಿದ್ದು, ಇನ್ನೆರಡು ದಿನ ಕರ್ನಾಟಕದಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ಕಳೆದೊಂದು ವಾರದಿಂದ ಮುಂಗಾರು ಮಳೆ (Monsoon 2021) ಚುರುಕುಗೊಂಡಿದೆ. ಇಂದು ಮತ್ತು ನಾಳೆ ರಾಜ್ಯ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಇಂದಿನಿಂದ ಮೂರು ದಿನ ಮಳೆ ಹೆಚ್ಚಾಗಲಿದೆ. ಬೆಂಗಳೂರಿನಲ್ಲಿ ಎರಡು ದಿನಗಳಿಂದ ಮಳೆ ಜಾಸ್ತಿಯಾಗಿದ್ದು, ಇಂದು ಕೂಡ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದೆ. ಇದರಿಂದ ಮಳೆ ಹೆಚ್ಚಾಗಿದೆ. ಆಗಸ್ಟ್​ ಕೊನೆಯ ವಾರದಲ್ಲಿ ಕರ್ನಾಟಕದಲ್ಲಿ ಉತ್ತಮ ಮಳೆಯಾಗಿದೆ. ಇನ್ನೂ 3 ದಿನ ಮಳೆ ಬೆಂಗಳೂರಿನಲ್ಲಿ ಮುಂದುವರೆಯಲಿದೆ ಎಂದು ಬೆಂಗಳೂರು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

ಇಂದಿನಿಂದ ಸೆ. 6ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರು, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ಮಿಂಚು, ಗಾಳಿ, ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ. ಇಂದು ಮತ್ತು ನಾಳೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಬೀದರ್, ಕಲಬುರ್ಗಿ, ವಿಜಯಪುರ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆಯಿಂದ ಹಳದಿ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕರ್ನಾಟಕದಲ್ಲಿ ಸೆ. 6ರಂದು ವಿಪರೀತ ಮಳೆಯಾಗುವ ಸಾಧ್ಯತೆಯಿದೆ.

ಇಂದಿನಿಂದ ಸೆ. 6ರವರೆಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಸೆಪ್ಟೆಂಬರ್ ತಿಂಗಳಲ್ಲಿ ಸಾಮಾನ್ಯಕ್ಕಿಂತ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಾಗಿದೆ. ರಾಮನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ ಜಿಲ್ಲೆಗಳಲ್ಲಿ ಕೂಡ ಇಂದು ಸಾಧಾರಣ ಮಳೆಯಾಗಲಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 3 ದಿನ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ.

ಇಂದಿನಿಂದ 3 ದಿನ ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದ್ದು, ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ರಾಯಚೂರು, ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಕಳೆದ ವರ್ಷಕ್ಕಿಂತಲೂ ಹೆಚ್ಚು ಮಳೆಯಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕ ಮಾತ್ರವಲ್ಲದೆ ಇನ್ನೂ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮೂರ್ನಾಲ್ಕು ದಿನಗಳಿಂದ ಶಿವಮೊಗ್ಗ, ಹಾಸನ, ಚಿಕ್ಕಬಳ್ಳಾಪುರ, ಬೆಂಗಳೂರು, ಧಾರವಾಡ, ಬೆಳಗಾವಿಯಲ್ಲಿ ನಿರೀಕ್ಷಿತ ಮಳೆ ಸುರಿದಿಲ್ಲ.

ದೆಹಲಿಯಲ್ಲಿ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಇಂದು ದೆಹಲಿ, ಕರ್ನಾಟಕ ಸೇರಿದಂತೆ ಬಿಹಾರ, ಮಧ್ಯಪ್ರದೇಶ, ಒರಿಸ್ಸಾ, ಮಹಾರಾಷ್ಟ್ರ, ಗೋವಾ, ಉತ್ತರಾಖಂಡ, ತಮಿಳುನಾಡು, ರಾಯಲಸೀಮೆ, ಆಂಧ್ರಪ್ರದೇಶ, ಸೌರಾಷ್ಟ್ರ, ಮಾಹೆ, ಅರುಣಾಚಲಪ್ರದೇಶ, ಉತ್ತರ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ, ತೆಲಂಗಾಣ, ವಿದರ್ಭ, ಬಿಹಾರ, ಪಶ್ಚಿಮ ಬಂಗಾಳ, ಹಿಮಾಚಲ ಪ್ರದೇಶ, ಪುದುಚೆರಿ, ಛತ್ತೀಸ್​ಗಢ, ಚಂಡೀಗಢ, ಹರಿಯಾಣ, ಪಂಜಾಬ್, ಲಕ್ಷದ್ವೀಪ, ಅಂಡಮಾನ್-ನಿಕೋಬಾರ್, ಜಮ್ಮು ಕಾಶ್ಮೀರ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ ರಾಜ್ಯಗಳಲ್ಲಿ ಇಂದಿನಿಂದ ಸೆ. 5ರವರೆಗೆ ಭಾರೀ ಮಳೆಯಾಗಲಿದೆ.

ಇದನ್ನೂ ಓದಿ: Karnataka Weather Today: ಬೆಂಗಳೂರಿನಲ್ಲಿ ಇನ್ನೂ 4 ದಿನ ಭಾರೀ ಮಳೆ; ಕರಾವಳಿಯಲ್ಲೂ ಸೆ. 6ರವರೆಗೆ ವರುಣನ ಆರ್ಭಟ

Karnataka Weather Today: ಕರಾವಳಿ, ಮಲೆನಾಡು ಸೇರಿ ಹಲವೆಡೆ ಸೆ. 6ರವರೆಗೂ ಗುಡುಗು ಸಹಿತ ಭಾರೀ ಮಳೆ

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​