Karnataka Weather: ಕರ್ನಾಟಕದಲ್ಲಿ ಜುಲೈ 21 ರ ತನಕ ಭಾರೀ ಮಳೆ ಸಾಧ್ಯತೆ; SSLC ಪರೀಕ್ಷೆಗೆ ತೆರಳುವಾಗ ಎಚ್ಚರದಿಂದಿರಿ ಮಕ್ಕಳೇ

ರಾಜ್ಯದ ಕರಾವಳಿ ಭಾಗದಲ್ಲಿ ಇಂದು ಧಾರಾಕಾರ ಮಳೆಯಾಗಲಿದೆ. ಜತೆಗೆ ದಕ್ಷಿಣ ಒಳನಾಡಿನಲ್ಲೂ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಒಂದು ವಾರದ ತನಕ ಇದೇ ರೀತಿ ಮಳೆಯ ವಾತಾವರಣ ಮುಂದುವರೆಯಲಿದ್ದು ನಂತರ ಕಡಿಮೆಯಾಗುವ ನಿರೀಕ್ಷೆ ಇದೆ.

Karnataka Weather: ಕರ್ನಾಟಕದಲ್ಲಿ ಜುಲೈ 21 ರ ತನಕ ಭಾರೀ ಮಳೆ ಸಾಧ್ಯತೆ; SSLC ಪರೀಕ್ಷೆಗೆ ತೆರಳುವಾಗ ಎಚ್ಚರದಿಂದಿರಿ ಮಕ್ಕಳೇ
ಸಾಂಕೇತಿಕ ಚಿತ್ರ
Follow us
TV9 Web
| Updated By: Skanda

Updated on: Jul 18, 2021 | 8:55 AM

ಕರ್ನಾಟಕದಲ್ಲಿ ಮಲೆನಾಡು, ಕರಾವಳಿ ಸೇರಿದಂತೆ ಹಲವೆಡೆ ಕಳೆದ ಹತ್ತು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ (Karnataka Rain). ಬಿಡುವು ನೀಡದೇ ಸುರಿಯುತ್ತಿರುವ ಮಳೆಯಿಂದಾಗಿ ಹಳ್ಳ, ಕೊಳ್ಳಗಳು ಮೈದುಂಬಿಕೊಂಡಿವೆ. ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯದಲ್ಲಿ ಮಳೆ ಸುರಿಯಲಿದೆ (Monsoon 2021) ಎಂದು ಹವಾಮಾನ ಇಲಾಖೆ ಕೆಲ ದಿನಗಳ ಹಿಂದೆಯೇ ಮುನ್ಸೂಚನೆ (Weather Forecast) ನೀಡಿತ್ತು. ಇದೀಗ ಕನಿಷ್ಟ ಜುಲೈ 21ರ ತನಕ ಮಳೆಯ ವಾತಾವರಣ ಏರಿಳಿತದೊಂದಿಗೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಸ್ಪಷ್ಟ ಮಾಹಿತಿ ನೀಡಿದೆ. ಕರ್ನಾಟಕದಲ್ಲಿ ನಾಳೆ (ಜುಲೈ 19) ಹಾಗೂ ಜುಲೈ 22ರಂದು ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಯಲಿದ್ದು ಪರೀಕ್ಷಾ ಕೇಂದ್ರಗಳಿಗೆ ತೆರಳುವಾಗ ಮಕ್ಕಳು ಜಾಗ್ರತೆಯಿಂದ ಹೋಗುವಂತೆ ನೋಡಿಕೊಳ್ಳಬೇಕಿದೆ.

ಇಂದು (ಜುಲೈ 18) ಸಹ ರಾಜ್ಯಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಉತ್ತಮ ಮಳೆ ಹಾಗೂ ಅಲ್ಲಲ್ಲಿ ಭಾರೀ ಮಳೆಯಾಗಲಿದೆ. ಮಲೆನಾಡು ಜಿಲ್ಲೆಗಳಲ್ಲಿ ಚದುರಿದ ಮಳೆಯಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆಯಾಗಲಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದ ಮಳೆಯಿಂದ ಅಲ್ಲಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಲೇ ಇದ್ದು, ಇಂದು ಕೂಡಾ ಮುಂಜಾನೆಯಿಂದಲೇ ಜಿಟಿಜಿಟಿ ಮಳೆ ಶುರುವಾಗಿದೆ.

ಕೇರಳದಿಂದ ಮಹಾರಾಷ್ಟ್ರದ ಕಡೆಗೆ ವೇಗವಾದ ಮೇಲ್ಮೈ ಸುಳಿಗಾಳಿ ಬೀಸುತ್ತಿದ್ದು, ಅದರ ಪ್ರಭಾವದಿಂದ ರಾಜ್ಯದ ಕರಾವಳಿ ಭಾಗದಲ್ಲಿ ಇಂದು ಧಾರಾಕಾರ ಮಳೆಯಾಗಲಿದೆ. ಜತೆಗೆ ದಕ್ಷಿಣ ಒಳನಾಡಿನಲ್ಲೂ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಒಂದು ವಾರದ ತನಕ ಇದೇ ರೀತಿ ಮಳೆಯ ವಾತಾವರಣ ಮುಂದುವರೆಯಲಿದ್ದು ನಂತರ ಕಡಿಮೆಯಾಗುವ ನಿರೀಕ್ಷೆ ಇದೆ.

ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ಮಂಗಳೂರು ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗಿನಲ್ಲಿ ಮಳೆಯ ಆರ್ಭಟ ಸದ್ಯಕ್ಕೆ ನಿಲ್ಲುವುದು ಅನುಮಾನ ಎನ್ನಲಾಗಿದೆ. ಈಗಾಗಲೇ ಕೆಲ ದಿನಗಳಿಂದ ಮಲೆನಾಡು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಆಯಾ ಪ್ರದೇಶಗಳಿಗೆ ಅನುಗುಣವಾಗಿ ಸೂಕ್ತ ಎಚ್ಚರಿಕೆಯನ್ನೂ ಹವಾಮಾನ ಇಲಾಖೆ ನೀಡಿದೆ. ಸದ್ಯದ ಮಾಹಿತಿ ಪ್ರಕಾರ ಇಂದು ಮತ್ತು ನಾಳೆ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿಯಲ್ಲಿ ಭಾರೀ ಮಳೆಯ ನಿರೀಕ್ಷೆಯಿದೆ.

ಬೆಂಗಳೂರಿನಲ್ಲೂ ಮಳೆಯಾಗಲಿದ್ದು, ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ, ತಂಪಾದ ವಾತಾವರಣ ಇರಲಿದೆ ಎಂದು ಹವಾಮಾನ ವರದಿಗಳು ತಿಳಿಸಿವೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಲೆನಾಡು ಭಾಗಗಳಲ್ಲಿ ಭಾರೀ ಪ್ರಮಾಣದ ಮಳೆಯಾಗುತ್ತಿದ್ದು, ಹಲವೆಡೆ ಪರಿಸ್ಥಿತಿಗೆ ಅನುಗುಣವಾಗಿ ರೆಡ್, ಆರೆಂಜ್​ ಹಾಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ರಾತ್ರಿಯಿಡೀ ಸುರಿದ ಭಾರೀ ಮಳೆಗೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಚಟ್ನಳ್ಳಿ ಗ್ರಾಮದ ಕೆರೆ ಕೋಡಿ ಬಿದ್ದು ಅಪಾರ ಪ್ರಮಾಣದ ನೀರು ಜಮೀನು ಹಾಗೂ ಮನೆಗಳಿಗೆ ನುಗ್ಗಿದೆ. ಬೇವಿನಹಳ್ಳಿಯ ಕೃಷ್ಣ ನಾಯ್ಕ ಎಂಬುವರಿಗೆ ಸೇರಿದ ಮೂರು ಎಕರೆ ಅಡಿಕೆ ಬೆಳೆ ನಾಶವಾಗಿದ್ದು, ಬೇವಿನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.

ಚಿತ್ರದುರ್ಗ ಜಿಲ್ಲೆಯ ವಿವಿಧೆಡೆ ತಡರಾತ್ರಿ ಧಾರಾಕಾರ ಮಳೆಯಾದ ಹಿನ್ನೆಲೆ ಚಿತ್ರದುರ್ಗ, ಚಳ್ಳಕೆರೆ, ಹೊಸದುರ್ಗದಲ್ಲಿ ಚೆಕ್ ಡ್ಯಾಂ, ಕೆರೆ- ಕಟ್ಟೆಗಳು ಭರ್ತಿಯಾಗಿವೆ. ಚಳ್ಳಕೆರೆ ತಾಲೂಕಿನ ಕಸವಿಗೊಂಡನಹಳ್ಳಿ ಬಳಿಯ ದೊಡ್ಡಹಳ್ಳ ತುಂಬಿ ಹರಿಯುತ್ತಿದ್ದು, ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದ ಬಳಿಯ ಕೆರೆಯ ಕೋಡಿ ಒಡೆದು ಹೋಗಿದೆ.

ನೆರೆಯ ಕೇರಳ, ಮಹಾರಾಷ್ಟ್ರ, ಗೋವಾ ರಾಜ್ಯಗಳಲ್ಲೂ ಮಳೆಯ ಅಬ್ಬರ ಮುಂದುವರೆದಿದ್ದು, ಮುಂಬೈನ ಕೆಲ ರಸ್ತೆಗಳಿಗೆ ನೀರು ನುಗ್ಗಿದೆ. ಗೋವಾದಲ್ಲೂ ಭಾರೀ ಗಾಳಿ ಸಹಿತ ಮಳೆಯಾಗುತ್ತಿದ್ದು ಕೇರಳದಲ್ಲೂ ಮಳೆಯ ಅಬ್ಬರ ಹೆಚ್ಚಾಗಿದೆ. ಕರಾವಳಿ ಪ್ರದೇಶಗಳಲ್ಲಿ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದ್ದು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಮುಂಬೈನ ವಿಕ್ರೋಲಿಯಲ್ಲಿ ಹಲವು ಮನೆಗಳು ಮಳೆಯಿಂದಾಗಿ ಕುಸಿದು ಬಿದ್ದಿದ್ದು ಮೂವರು ಸಾವಿಗೀಡಾಗಿದ್ದಾರೆ. ಚೆಂಬೂರ್‌ನಲ್ಲಿ ಮಳೆಯಿಂದ ಗುಡಿಸಲುಗಳ ಮೇಲೆ ಗೋಡೆ ಕುಸಿದು 11 ಜನರು ಸಾವಿಗೀಡಾದ ಭೀಕರ ದುರಂತವೂ ಸಂಭವಿಸಿದೆ.

ಇದನ್ನೂ ಓದಿ: Karnataka Weather: ಕರ್ನಾಟಕದಲ್ಲಿ ಇಂದು ಮತ್ತು ನಾಳೆ ಭಾರೀ ಮಳೆ; ಹಲವೆಡೆ ರೆಡ್​, ಆರೆಂಜ್ ಅಲರ್ಟ್​

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ