Karnataka Weather Today: ಬೆಂಗಳೂರು ಸೇರಿ ಕರ್ನಾಟಕದ ಹಲವು ಕಡೆ ಇಂದು, ನಾಳೆ ಭಾರಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮಾಹಿತಿ

ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಯ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಜ್ಞರು ತಿಳಿಸಿದ್ದಾರೆ.

Karnataka Weather Today: ಬೆಂಗಳೂರು ಸೇರಿ ಕರ್ನಾಟಕದ ಹಲವು ಕಡೆ ಇಂದು, ನಾಳೆ ಭಾರಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮಾಹಿತಿ
ಮಳೆ (ಸಂಗ್ರಹ ಚಿತ್ರ)
Follow us
TV9 Web
| Updated By: sandhya thejappa

Updated on:Nov 08, 2021 | 10:19 AM

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಬೆಂಗಳೂರು ಸೇರಿ ರಾಜ್ಯದ ಮಲೆನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು (ನ.8) ಮತ್ತು ನಾಳೆ (ನ.9) ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಜ್ಞರು ಮಾಹಿತಿ ನೀಡಿದ್ದಾರೆ. ಮಂಗಳವಾರದ ಬಳಿಕ ರಾಜ್ಯದಲ್ಲಿ ಮಳೆ ಕಡಿಮೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಯ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಸದ್ಯ ಬೆಳಿಗ್ಗೆಯಿಂದ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಜಿಟಿ ಜಿಟಿ ಮಳೆಯಾಗುತ್ತಿದೆ. ಇನ್ನು ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಜೋರು ಮಳೆ ಸುರಿಯುತ್ತಿದೆ.

ತಮಿಳುನಾಡಿನಲ್ಲಿ ಮಳೆ ಅವಾಂತರ ತಮಿಳುನಾಡಿನಲ್ಲಿ ಮುಂದಿನ 2 ವಾರಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಜೊತೆಗೆ ಆಂಧ್ರಪ್ರದೇಶ, ಪುದುಚೆರಿ, ಕರ್ನಾಟಕ, ಕೇರಳದಲ್ಲಿ ಕೂಡ ಮಳೆ ಹೆಚ್ಚಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ತುಂತುರು ಮಳೆಯಾಗಲಿದೆ. ಹಾಗೇ, ಲಕ್ಷದ್ವೀಪ, ತೆಲಂಗಾಣ, ರಾಯಲಸೀಮೆ, ಮಾಹೆ, ಒಡಿಶಾದಲ್ಲಿ ಕೂಡ ಮಳೆ ಹೆಚ್ಚಾಗಲಿದೆ.

ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದ ತಮಿಳುನಾಡು ತತ್ತರಿಸಿ ಹೋಗಿದೆ. ಭಾರಿ ಮಳೆಗೆ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ತಿರುವಳ್ಳೂರ್, ಚೆಂಗಲ್ಪಟ್ಟು, ಕಾಂಚಿಪುರ ಸೇರಿ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಮುಂದಿನ 2 ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಧಾರಾಕಾರ ಮಳೆಗೆ ಚೆನ್ನೈ ಮಹಾನಗರ ಸ್ತಬ್ಧವಾಗಿದೆ. ಚೆನ್ನೈ ಏರ್​ಪೋರ್ಟ್​ ರನ್​ವೇ ಕೂಡ ಬಂದ್ ಆಗಿದ್ದು, ಚೆನ್ನೈ ಲೋಕಲ್ ಟ್ರೈನ್​ಗಳು ಸ್ತಬ್ಧಗೊಂಡಿವೆ.

ಇದನ್ನೂ ಓದಿ

ಮಹಾಮಳೆಗೆ ತತ್ತರಿಸಿದ ತಮಿಳುನಾಡು! ಮುಂದಿನ 2 ದಿನಗಳ ಕಾಲ ಭಾರಿ ಮಳೆ ಮುನ್ಸೂಚನೆ

Sooryavanshi: ಅಭಿಮಾನಿಗಳಲ್ಲಿ ಹುಚ್ಚೆಬ್ಬಿಸಿದ ‘ಸೂರ್ಯವಂಶಿ’; ದಿನದ 24 ಗಂಟೆಯೂ ಅಕ್ಷಯ್​ ಕುಮಾರ್​ ಚಿತ್ರ ಪ್ರದರ್ಶನ

Published On - 10:10 am, Mon, 8 November 21

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್