ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಬೆಂಗಳೂರು ಸೇರಿ ರಾಜ್ಯದ ಮಲೆನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು (ನ.8) ಮತ್ತು ನಾಳೆ (ನ.9) ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಜ್ಞರು ಮಾಹಿತಿ ನೀಡಿದ್ದಾರೆ. ಮಂಗಳವಾರದ ಬಳಿಕ ರಾಜ್ಯದಲ್ಲಿ ಮಳೆ ಕಡಿಮೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಯ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಸದ್ಯ ಬೆಳಿಗ್ಗೆಯಿಂದ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಜಿಟಿ ಜಿಟಿ ಮಳೆಯಾಗುತ್ತಿದೆ. ಇನ್ನು ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಜೋರು ಮಳೆ ಸುರಿಯುತ್ತಿದೆ.
ತಮಿಳುನಾಡಿನಲ್ಲಿ ಮಳೆ ಅವಾಂತರ
ತಮಿಳುನಾಡಿನಲ್ಲಿ ಮುಂದಿನ 2 ವಾರಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಜೊತೆಗೆ ಆಂಧ್ರಪ್ರದೇಶ, ಪುದುಚೆರಿ, ಕರ್ನಾಟಕ, ಕೇರಳದಲ್ಲಿ ಕೂಡ ಮಳೆ ಹೆಚ್ಚಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ತುಂತುರು ಮಳೆಯಾಗಲಿದೆ. ಹಾಗೇ, ಲಕ್ಷದ್ವೀಪ, ತೆಲಂಗಾಣ, ರಾಯಲಸೀಮೆ, ಮಾಹೆ, ಒಡಿಶಾದಲ್ಲಿ ಕೂಡ ಮಳೆ ಹೆಚ್ಚಾಗಲಿದೆ.
ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದ ತಮಿಳುನಾಡು ತತ್ತರಿಸಿ ಹೋಗಿದೆ. ಭಾರಿ ಮಳೆಗೆ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ತಿರುವಳ್ಳೂರ್, ಚೆಂಗಲ್ಪಟ್ಟು, ಕಾಂಚಿಪುರ ಸೇರಿ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಮುಂದಿನ 2 ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಧಾರಾಕಾರ ಮಳೆಗೆ ಚೆನ್ನೈ ಮಹಾನಗರ ಸ್ತಬ್ಧವಾಗಿದೆ. ಚೆನ್ನೈ ಏರ್ಪೋರ್ಟ್ ರನ್ವೇ ಕೂಡ ಬಂದ್ ಆಗಿದ್ದು, ಚೆನ್ನೈ ಲೋಕಲ್ ಟ್ರೈನ್ಗಳು ಸ್ತಬ್ಧಗೊಂಡಿವೆ.
ಇದನ್ನೂ ಓದಿ
ಮಹಾಮಳೆಗೆ ತತ್ತರಿಸಿದ ತಮಿಳುನಾಡು! ಮುಂದಿನ 2 ದಿನಗಳ ಕಾಲ ಭಾರಿ ಮಳೆ ಮುನ್ಸೂಚನೆ
Sooryavanshi: ಅಭಿಮಾನಿಗಳಲ್ಲಿ ಹುಚ್ಚೆಬ್ಬಿಸಿದ ‘ಸೂರ್ಯವಂಶಿ’; ದಿನದ 24 ಗಂಟೆಯೂ ಅಕ್ಷಯ್ ಕುಮಾರ್ ಚಿತ್ರ ಪ್ರದರ್ಶನ
Published On - 10:10 am, Mon, 8 November 21