Karnataka Weather: ಕರ್ನಾಟಕದಲ್ಲಿ ಇಂದು ಮೋಡ ಕವಿದ ವಾತಾವರಣ, ಬೆಳಗ್ಗೆಯಿಂದಲೇ ಕೆಲವೆಡೆ ಮಳೆ ಸಾಧ್ಯತೆ
Karnataka Rain Update: ಕರ್ನಾಟಕದ ಕೆಲವೆಡೆ ಮಳೆ ಬಂದರೂ, ಉತ್ತರ ಕರ್ನಾಟಕದಲ್ಲಿ ಮಧ್ಯಾಹ್ನದವರೆಗೆ ಬಿಸಿಲಿನ ತಾಪಮಾನ ಇರಲಿದ್ದು, ಸಂಜೆ ಹೊತ್ತಿಗೆ ವಾತಾವರಣ ಕೊಂಚ ತಂಪಾಗಲಿದೆ ಎಂದು ಅಂದಾಜಿಸಲಾಗಿದೆ. ಬೆಂಗಳೂರಿನಲ್ಲಿ ಇಂದು ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಕರ್ನಾಟಕದಲ್ಲಿ ಮೋಡ ಕವಿದ ವಾತಾವರಣ ಮತ್ತು ಸಾಧಾರಣ ಮಳೆಯಾಗುತ್ತಲೇ ಇದೆ. ತೌಕ್ತೆ ಚಂಡಮಾರುತದ ಬಳಿಕ, ಈ ರೀತಿಯ ವಾತಾವರಣ ಸೃಷ್ಟಿಯಾಗಿದ್ದು, ಒಂದಲ್ಲಾ ಒಂದು ವೇಳೆಯಲ್ಲಿ ರಾಜ್ಯದ ನಾನಾ ಕಡೆ ಇಳೆಯನ್ನು ತಂಪುಗೊಳಿಸುವಂತೆ ಮಳೆರಾಯ ಸಾಧಾರಣ ಹನಿಗಳನ್ನು ಹೊರ ಚೆಲ್ಲುತ್ತಲೇ ಇದ್ದಾನೆ. ಅಂತೆಯೇ ಇಂದು ಕೂಡ ಮಳೆ ಇರಲಿದ್ದು, ಕರಾವಳಿ ಭಾಗದಲ್ಲಿ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣ ಮನೆ ಮಾಡಿದೆ. ಇನ್ನು ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.
ಕರ್ನಾಟಕದ ಕೆಲವೆಡೆ ಮಳೆ ಬಂದರೂ, ಉತ್ತರ ಕರ್ನಾಟಕದಲ್ಲಿ ಮಧ್ಯಾಹ್ನದವರೆಗೆ ಬಿಸಿಲಿನ ತಾಪಮಾನ ಇರಲಿದ್ದು, ಸಂಜೆ ಹೊತ್ತಿಗೆ ವಾತಾವರಣ ಕೊಂಚ ತಂಪಾಗಲಿದೆ ಎಂದು ಅಂದಾಜಿಸಲಾಗಿದೆ. ಬೆಂಗಳೂರಿನಲ್ಲಿ ಇಂದು ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಯಾದಗಿರಿ ಕಲಬುರಗಿ ಮತ್ತು ಬೀದರ್ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್ ಇದ್ದು, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದೆ. ಇನ್ನು ಬಾಗಲಕೋಟೆಯಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಬಳ್ಳಾರಿಯಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಬೆಳಗಾವಿಯಲ್ಲಿ ಗರಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್, ಬೀದರ್ನಲ್ಲಿ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್, ಚಿಕ್ಕಮಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ ಮತ್ತು ಮಡಿಕೇರಿಯಲ್ಲಿ ಗರಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಉಳಿದ ನಗರಗಳ ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶ ಮಾಹಿತಿ: ಮಂಗಳೂರು: ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ಶಿವಮೊಗ್ಗ: ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ಮೈಸೂರು: ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಮಂಡ್ಯ: ಗರಿಷ್ಠ ಉಷ್ಣಾಂಶ 29ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ರಾಮನಗರ: ಗರಿಷ್ಠ ಉಷ್ಣಾಂಶ 33ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಹಾಸನ: ಗರಿಷ್ಠ ಉಷ್ಣಾಂಶ 27ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ಚಾಮರಾಜನಗರ: ಗರಿಷ್ಠ ಉಷ್ಣಾಂಶ 29ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಚಿಕ್ಕಬಳ್ಳಾಪುರ: ಗರಿಷ್ಠ ಉಷ್ಣಾಂಶ 27ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ಉಡುಪಿ: ಗರಿಷ್ಠ ಉಷ್ಣಾಂಶ 31ಡಿಗ್ರಿ ಸೆಲ್ಸಿಯಸ್, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ಕಾರಾವಾರ: ಗರಿಷ್ಠ ಉಷ್ಣಾಂಶ 31ಡಿಗ್ರಿ ಸೆಲ್ಸಿಯಸ್, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್ ಕೋಲಾರ: ಗರಿಷ್ಠ ಉಷ್ಣಾಂಶ 28ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್
ಇದನ್ನೂ ಓದಿ:
Monsoon 2021: ಅವಧಿಗೂ ಮುನ್ನವೇ ಮುಂಗಾರು ಪ್ರವೇಶ; ಚಂಡಮಾರುತದ ಬೆನ್ನಲ್ಲೇ ಮಳೆಗಾಲ ಶುರುವಾಗುವ ಸಾಧ್ಯತೆ
Published On - 10:10 am, Sat, 22 May 21