Karnataka Weather Today: ಕರ್ನಾಟಕದಲ್ಲಿ ನ. 6ರವರೆಗೆ ಗುಡುಗು ಸಹಿತ ಮಳೆ; ಮಲೆನಾಡಿನಲ್ಲಿ ಹಳದಿ ಅಲರ್ಟ್ ಘೋಷಣೆ

Karnataka Rain: ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಗುಡುಗು, ಸಿಡಿಲಿನಿಂದ ಕೂಡಿದ ಮಳೆಯಾಗುವುದರಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ನಾಳೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Karnataka Weather Today: ಕರ್ನಾಟಕದಲ್ಲಿ ನ. 6ರವರೆಗೆ ಗುಡುಗು ಸಹಿತ ಮಳೆ; ಮಲೆನಾಡಿನಲ್ಲಿ ಹಳದಿ ಅಲರ್ಟ್ ಘೋಷಣೆ
ಮಳೆ
Follow us
TV9 Web
| Updated By: ಆಯೇಷಾ ಬಾನು

Updated on: Nov 03, 2021 | 7:11 AM

Karnataka Rain: ಬೆಂಗಳೂರು: ಇಂದಿನಿಂದ ನವೆಂಬರ್ 6ರವರೆಗೂ ಕರ್ನಾಟಕದಲ್ಲಿ ಮಳೆ ಹೆಚ್ಚಾಗಲಿದೆ. ಶ್ರೀಲಂಕಾ ಭಾಗದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯಾದ್ಯಂತ ಮಳೆಯ ಆರ್ಭಟ ಜಾಸ್ತಿಯಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದ್ದು, ಹಳದಿ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ನವೆಂಬರ್ 6ರವರೆಗೂ ಗುಡುಗು ಸಹಿತ ಮಳೆಯಾಗಲಿದೆ. ಈಗಾಗಲೇ ಕೆಆರ್​ಎಸ್​, ಕಬಿನಿ ಜಲಾಶಯಗಳು ಸಂಪೂರ್ಣ ಭರ್ತಿಯಾಗಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಬಾಗಿನ ಅರ್ಪಿಸಿದ್ದಾರೆ.

ದಕ್ಷಿಣ ಕೊಂಕಣ ಕರಾವಳಿ, ಗೋವಾ ಮತ್ತು ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಇಂದಿನಿಂದ ನವೆಂಬರ್ 6ರವರೆಗೆ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕನ್ಯಾಕುಮಾರಿ ಮತ್ತು ಶ್ರೀಲಂಕಾ ಕರಾವಳಿಯ ಉತ್ತರ ಭಾಗದಲ್ಲಿ ಕಡಿಮೆ ಒತ್ತಡದ ಪ್ರದೇಶವಿದೆ. ಇದು ಮುಂದಿನ 48 ಗಂಟೆಗಳಲ್ಲಿ ಆಗ್ನೇಯ ಅರಬ್ಬಿ ಸಮುದ್ರದ ಕಡೆಗೆ ಚಲಿಸುವ ಸಾಧ್ಯತೆಯಿದ್ದು, ನಂತರ ವಾಯುವ್ಯ ದಿಕ್ಕಿನಲ್ಲಿ ಚಲಿಸುವ ಸಾಧ್ಯತೆಯಿದೆ. ಇಂದು ಮಳೆ ತೀವ್ರಗೊಳ್ಳುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಮತ್ತು ತಮಿಳುನಾಡಿನ ಕರಾವಳಿ, ಪುದುಚೇರಿ ಮತ್ತು ಕೇರಳದ ಪ್ರತ್ಯೇಕ ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕ, ಲಕ್ಷದ್ವೀಪ, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲೂ ಮಳೆಯಾಗುವ ನಿರೀಕ್ಷೆಯಿದೆ.

ರಾಜ್ಯದಲ್ಲಿ ಹಿಂಗಾರು ಮಳೆಯಾಗುತ್ತಿದ್ದು, ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಕಡೆ ಇಂದು ಗುಡುಗು, ಸಿಡಿಲಿನಿಂದ ಕೂಡಿದ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಗುಡುಗು, ಸಿಡಿಲಿನಿಂದ ಕೂಡಿದ ಮಳೆಯಾಗುವುದರಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ನಾಳೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆ ಹೆಚ್ಚಾಗಲಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ನವೆಂಬರ್ 6ರವರೆಗೆ ಮಳೆ ಸುರಿಯಲಿದೆ.

ಕರಾವಳಿ, ದಕ್ಷಿಣ ಒಳನಾಡು, ಮಲೆನಾಡಿನಲ್ಲಿ ಇಂದು ಮತ್ತು ನ. 5ರಂದು ಹಳದಿ ಅಲರ್ಟ್‌ ಹಾಗೂ ನ. 4ರಂದು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಹಳದಿ ಅಲರ್ಟ್‌ ಘೋಷಿಸಲಾಗಿದೆ. ನವೆಂಬರ್‌ 4ರಂದು ಮಲೆನಾಡಿನ ಜಿಲ್ಲೆಗಳ ಜತೆಗೆ ದಕ್ಷಿಣ ಒಳನಾಡಿನ ಚಾಮರಾಜನಗರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಮೈಸೂರು, ರಾಮನಗರ ಜಿಲ್ಲೆಗಳಲ್ಲೂ ಹಳದಿ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ಯಾದಗಿರಿ, ಗದಗ, ಹಾವೇರಿ, ಧಾರವಾಡ, ಬೆಳಗಾವಿ, ಕೊಪ್ಪಳ, ಬಾಗಲಕೋಟ, ವಿಜಯಪುರ, ರಾಯಚೂರು ಜಿಲ್ಲೆಗಳಲ್ಲಿ ಇಂದು ಒಣಹವೆ ಮುಂದುವರಿಯಲಿದೆ. ಇಂದಿನಿಂದ ನ. 5ರವರೆಗೆ ಗುಡುಗು ಸಿಡಿಲು ಸಹಿತ ಮಳೆ, ಕೆಲವೆಡೆ ತುಂತುರು ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಇಂದಿನಿಂದ ಗುಡುಗು, ಸಿಡಿಲು ಹೆಚ್ಚಾಗಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗಲಿದೆ.

ಕೇರಳದ ಐದು ಜಿಲ್ಲೆಗಳಾದ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ತ್ರಿಶೂರ್, ಪಾಲಕ್ಕಾಡ್, ಕೋಳಿಕ್ಕೋಡ್, ಮಲಪ್ಪುರಂ ಮತ್ತು ವಯನಾಡ್ ಜಿಲ್ಲೆಗಳಿಗೆ ‘ಹಳದಿ’ ಅಲರ್ಟ್ ನೀಡಲಾಗಿದೆ. ಹವಾಮಾನ ಇಲಾಖೆ ಪ್ರಕಾರ, ಶ್ರೀಲಂಕಾ ಕರಾವಳಿಯ ದಕ್ಷಿಣ-ಪಶ್ಚಿಮ ಬಂಗಾಳ ಕೊಲ್ಲಿಯ ಮೇಲೆ ಕಡಿಮೆ ಒತ್ತಡದ ಪ್ರದೇಶ ಮತ್ತು ಅದಕ್ಕೆ ಸಂಬಂಧಿಸಿದ ಚಂಡಮಾರುತದ ಪರಿಚಲನೆಯಿಂದಾಗಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.

ಇಂದು ತಮಿಳುನಾಡು, ಕರ್ನಾಟಕ, ಕೇರಳ ಮತ್ತು ಮಾಹೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇಂದು ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ರಾಯಲಸೀಮೆ, ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಹೆಚ್ಚಾಗಲಿದೆ. ತಮಿಳುನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶ, ಕರ್ನಾಟಕ, ಕೇರಳ, ಗೋವಾ, ದಕ್ಷಿಣ ತೆಲಂಗಾಣ ಮತ್ತು ಲಕ್ಷದ್ವೀಪಗಳಲ್ಲಿ ಅಲ್ಲಲ್ಲಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯಿದೆ. ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ಪಾಲಕ್ಕಾಡ್ ಮತ್ತು ಮಲಪ್ಪುರಂ ಜಿಲ್ಲೆಗಳಿಗೆ ಎಚ್ಚರಿಕೆ ನೀಡಲಾಗಿದೆ. ಇಂದು ಕೇರಳದ ಬಹುತೇಕ ಸ್ಥಳಗಳಲ್ಲಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಕಚೇರಿ ತನ್ನ ಹವಾಮಾನ ಮುನ್ಸೂಚನೆಯಲ್ಲಿ ತಿಳಿಸಿದೆ. ಇಂದು ಕೇರಳ ಮತ್ತು ಲಕ್ಷದ್ವೀಪದಲ್ಲಿ ಗುಡುಗು- ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ನವೆಂಬರ್ 6ರವರೆಗೆ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ಕೇರಳ ಮತ್ತು ಮಾಹೆ, ದಕ್ಷಿಣ ಒಳನಾಡಿನ ಕರ್ನಾಟಕ, ಕರಾವಳಿ ಆಂಧ್ರ ಪ್ರದೇಶ ಮತ್ತು ಯಾನಂ ಮತ್ತು ರಾಯಲಸೀಮಾದಲ್ಲಿ ಪ್ರತ್ಯೇಕವಾದ ಭಾರೀ ಮಳೆಯ ಮುನ್ಸೂಚನೆ ಇದೆ. ತೆಲಂಗಾಣ ಮತ್ತು ಕರಾವಳಿ ಕರ್ನಾಟಕದಲ್ಲಿ ನವೆಂಬರ್ 6ರವರೆಗೆ ಮಳೆ ಮುಂದುವರೆಯಲಿದೆ. ದಕ್ಷಿಣ ಭಾರತದಲ್ಲಿ ಇನ್ನೂ 4 ದಿನ ಮಳೆ ಮುಂದುವರೆಯಲಿದೆ.

ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಗೋವಾ, ತಮಿಳುನಾಡು ಮತ್ತು ಕೇರಳದಲ್ಲಿ ಪ್ರತ್ಯೇಕ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಒಡಿಶಾ, ಛತ್ತೀಸ್‌ಗಢ, ಮಹಾರಾಷ್ಟ್ರ ಮತ್ತು ಲಕ್ಷದ್ವೀಪಗಳಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಅರುಣಾಚಲ ಪ್ರದೇಶ, ಸಿಕ್ಕಿಂ, ಉತ್ತರಾಖಂಡ ಮತ್ತು ಲಡಾಖ್‌ನಲ್ಲಿ ಪ್ರತ್ಯೇಕವಾದ ಮಳೆ ಮತ್ತು ಸ್ಥಳೀಯವಾಗಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಈ ಪ್ರದೇಶಗಳಲ್ಲಿ ಹಿಮಪಾತವಾಗಬಹುದು.

ಇದನ್ನೂ ಓದಿ: Karnataka Weather Today: ಮಲೆನಾಡು, ಕರಾವಳಿಯಲ್ಲಿ ಹಿಂಗಾರು ಮಳೆಯಿಂದ ಹಳದಿ ಅಲರ್ಟ್ ಘೋಷಣೆ

Karnataka Dam Water Level: ಇಂದಿನಿಂದ ಮತ್ತೆ ಮಳೆ ಹೆಚ್ಚಳ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ