
Karnataka Rain Today | ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಒಟ್ಟು 10 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ (Heavy Rain) ಮಳೆಯಾಗಲಿದೆ. ಮೂರ್ನಾಲ್ಕು ದಿನಗಳಿಂದ ಕರಾವಳಿ ಹಾಗೂ ಮಲೆನಾಡಿನ ಭಾಗದಲ್ಲಿ (Karnataka Rain) ಜೋರಾಗಿ ಮಳೆ ಸುರಿಯುತ್ತಿದೆ. ಬೆಂಗಳೂರಿನಲ್ಲಿ ಕೂಡ ಸಂಜೆಯ ವೇಳೆಗೆ ಮಳೆಯಾಗುತ್ತಿದೆ. ಇನ್ನೆರಡು ದಿನ ಕರಾವಳಿಯ ಮೂರು ಜಿಲ್ಲೆಗಳು ಸೇರಿದಂತೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಹಾಗೂ ಬೆಂಗಳೂರಿನಲ್ಲಿ ಮಳೆ (Bengaluru Rain) ಹೆಚ್ಚಾಗಲಿದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇಂದು ಕರ್ನಾಟಕದ 10 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಕೂಡ ಇಂದು ಸಂಜೆಯ ಬಳಿಕ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಾಗಿದೆ. ರಾಮನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ ಜಿಲ್ಲೆಗಳಲ್ಲಿ ಕೂಡ ಇನ್ನೆರಡು ದಿನ ಸಾಧಾರಣ ಮಳೆಯಾಗಲಿದೆ. ಈ ವೀಕೆಂಡ್ನಲ್ಲಿ ಮಲೆನಾಡು ಮತ್ತು ಕರಾವಳಿಯಲ್ಲಿ ವರುಣನ ಅಬ್ಬರ ಜೋರಾಗಿರಲಿದೆ.
ಆ. 30ರವರೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಆ. 31ರಂದು ಕೂಡ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ರಾಯಚೂರು, ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಕಳೆದ ವರ್ಷಕ್ಕಿಂತಲೂ ಹೆಚ್ಚು ಮಳೆಯಾಗಿದೆ. ಈ ಜಿಲ್ಲೆಗಳಲ್ಲಿ ಇನ್ನೆರಡು ದಿನ ಹಗುರ ಮಳೆಯಾಗಲಿದೆ. ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಇನ್ನೆರಡು ದಿನ ಮಳೆಯಾಗಲಿದೆ.
ಈ ಬಾರಿ ಕರ್ನಾಟಕದ ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿಯೂ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ದಕ್ಷಿಣ ಒಳನಾಡಿನ 16 ಜಿಲ್ಲೆಯ ಪೈಕಿ 10 ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಕರಾವಳಿಯ ಮೂರು ಜಿಲ್ಲೆಯಲ್ಲಿಯೂ ಇಂದಿನಿಂದ ಆ. 30ರವರೆಗೆ ವ್ಯಾಪಕ ಮಳೆಯಾಗಲಿದೆ. ತಮಿಳುನಾಡು ಮತ್ತು ಕೇರಳ, ಬಿಹಾರ, ಉತ್ತರ ಪ್ರದೇಶ, ಉತ್ತರಾಖಂಡ ರಾಜ್ಯಗಳಲ್ಲಿ ಇಂದು ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಸ್ಸಾಂ, ಮೇಘಾಲಯದಲ್ಲಿ ಕೂಡ ಭಾರೀ ಮಳೆಯಾಗಲಿದೆ.
ಇಂದು ತಮಿಳುನಾಡು, ಆಂಧ್ರಪ್ರದೇಶ, ಅರುಣಾಚಲಪ್ರದೇಶ, ಉತ್ತರ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ, ತೆಲಂಗಾಣ, ಕರ್ನಾಟಕದ ಕರಾವಳಿ ಪ್ರದೇಶ ಹಾಗೂ ಮಲೆನಾಡು, ಕೇರಳ, ಲಕ್ಷದ್ವೀಪದಲ್ಲಿ ವಿಪರೀತ ಮಳೆಯಾಗಲಿದೆ. ತಮಿಳುನಾಡಿನ ಚೆನ್ನೈ, ಕೊಯಮತ್ತೂರು, ತಿರುಪ್ಪೂರ್, ತೆಂಕಸಿಯಲ್ಲಿ ಇನ್ನೆರಡು ದಿನ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೇರಳದ ತಿರುವನಂತಪುರದಲ್ಲೂ ಭಾರೀ ಮಳೆಯಾಗಲಿದೆ.
ಛತ್ತೀಸ್ಗಢ, ಅಂಡಮಾನ್-ನಿಕೋಬಾರ್, ಜಮ್ಮು ಕಾಶ್ಮೀರ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಗೋವಾ, ಒರಿಸ್ಸಾ ರಾಜ್ಯಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದ್ದು, ಜೋರಾದ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ: Karnataka Weather Today: ಕರ್ನಾಟಕದ ಹಲವೆಡೆ ಇಂದಿನಿಂದ ಆ. 30ರವರೆಗೆ ಭಾರೀ ಮಳೆ; ಇಂದಿನ ಹವಾಮಾನ ಹೀಗಿದೆ
(Karnataka weather Today: Heavy Rain Lashes in 10 Districts of Karnataka IMD Issues Orange Alert Bengaluru Rain)