Karnataka Rain: ಕರ್ನಾಟಕದಲ್ಲಿ ನಿಲ್ಲದ ವರುಣನ ಆರ್ಭಟ; ಸೆ. 5ರವರೆಗೆ ಕರಾವಳಿಯಲ್ಲಿ ವ್ಯಾಪಕ ಮಳೆ
Karnataka Weather Today | ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರು, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸೆ. 5ರವರೆಗೂ ವ್ಯಾಪಕ ಮಳೆಯಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ

Karnataka Rains Today | ಜೂನ್ ಮತ್ತು ಜುಲೈ ತಿಂಗಳಲ್ಲಿ ಕರ್ನಾಟಕದಲ್ಲಿ ಅಬ್ಬರಿಸಿದ್ದ ಮಳೆರಾಯ (Heavy Rain) ಆಗಸ್ಟ್ ತಿಂಗಳಲ್ಲಿ ಕೊಂಚ ತಣ್ಣಗಾಗಿದ್ದ. ಆದರೂ ಆಗಸ್ಟ್ ಎರಡನೇ ವಾರದಿಂದ ಮಲೆನಾಡು (Malnad) ಮತ್ತು ಕರಾವಳಿಯಲ್ಲಿ (Coastal Districts) ಮಳೆ ಹೆಚ್ಚಾಗಿತ್ತು. ಇದೀಗ ಸೆಪ್ಟೆಂಬರ್ ಆರಂಭದಿಂದಲೇ ಕರ್ನಾಟಕದಲ್ಲಿ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರು, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸೆ. 5ರವರೆಗೂ ವ್ಯಾಪಕ ಮಳೆಯಾಗಲಿದ್ದು, ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ.
ಇಂದು ಮತ್ತು ನಾಳೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ. ಸೆ. 3ರಿಂದ 5ರವರೆಗೂ ಮಳೆಯ ಅಬ್ಬರ ಹೆಚ್ಚಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇನ್ನೆರಡು ದಿನ ಗುಡುಗು ಸಹಿತ ಮಳೆಯಾಗಲಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಾಗಿದೆ. ರಾಮನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ ಜಿಲ್ಲೆಗಳಲ್ಲಿ ಕೂಡ ಇನ್ನೆರಡು ದಿನ ಸಾಧಾರಣ ಮಳೆಯಾಗಲಿದೆ. ಇಂದಿನಿಂದ ಸೆಪ್ಟೆಂಬರ್ 2ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದ್ದು, ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಈಗಿನ ತಾಪಮಾನ ? ಬೀದರ್ 26ºC ಕಲಬುರ್ಗಿ 28ºC ಬೆಳಗಾವಿ 27ºC ಹುಬ್ಬಳ್ಳಿ 29ºC ರಾಯಚೂರು 28ºC ಕಾರವಾರ 28ºC ಶಿವಮೊಗ್ಗ 26ºC ಯಾದಗಿರಿ 28ºC ಮಂಗಳೂರು 30ºC ಮಡಿಕೇರಿ 21ºC ಮೈಸೂರು 28ºC ಕೋಲಾರ 28ºC ಶಿರಸಿ 25ºC ತುಮಕೂರು 27ºC.#karnataka #weather
— ಹವಾಮಾನ ವರದಿ ಬೆಂಗಳೂರು (@blr_weather) August 31, 2021
ಇಂದಿನಿಂದ 5 ದಿನ ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದ್ದು, ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ರಾಯಚೂರು, ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಕಳೆದ ವರ್ಷಕ್ಕಿಂತಲೂ ಹೆಚ್ಚು ಮಳೆಯಾಗಿದೆ. ಈ ಜಿಲ್ಲೆಗಳಲ್ಲಿ ಇಂದು ಹಗುರ ಮಳೆಯಾಗಲಿದೆ.
ಸೆಪ್ಟಂಬರ್ 2ರವರೆಗೂ ಕರ್ನಾಟಕ, ಬಿಹಾರ, ಮಧ್ಯಪ್ರದೇಶ ಉತ್ತರಾಖಂಡ, ಗುಜರಾತ್ ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ. ಹಾಗೇ, ತಮಿಳುನಾಡು, ರಾಯಲಸೀಮೆ, ಆಂಧ್ರಪ್ರದೇಶ, ಅರುಣಾಚಲಪ್ರದೇಶ, ಉತ್ತರ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ, ತೆಲಂಗಾಣ, ವಿದರ್ಭ, ಛತ್ತೀಸ್ಗಢ, ಅಂಡಮಾನ್-ನಿಕೋಬಾರ್, ಜಮ್ಮು ಕಾಶ್ಮೀರ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಗೋವಾ, ಒರಿಸ್ಸಾ ರಾಜ್ಯಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದ್ದು, ಜೋರಾದ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ: Karnataka Weather Today: ಮಲೆನಾಡು, ಕರಾವಳಿಯಲ್ಲಿ ಸೆ. 2ರವರೆಗೂ ಭಾರೀ ಮಳೆ; ಕೆಲವೆಡೆ ಆರೆಂಜ್ ಅಲರ್ಟ್ ಘೋಷಣೆ
Karnataka Dams Water Level: ಮಳೆಯಿಂದ ಹಲವು ಡ್ಯಾಂಗಳ ಭರ್ತಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
(Karnataka weather Today: Heavy Rainfall in 9 Districts till September 5 IMD Issued Yellow Alert Karnataka Rain)