AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಇಂದಿನಿಂದ 4 ದಿನ ಬೆಂಗಳೂರು, ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ; ಹಲವೆಡೆ ಹೈ ಅಲರ್ಟ್

Karnataka Weather Today | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯದಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ.

Karnataka Rain: ಇಂದಿನಿಂದ 4 ದಿನ ಬೆಂಗಳೂರು, ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ; ಹಲವೆಡೆ ಹೈ ಅಲರ್ಟ್
ಮಳೆ
TV9 Web
| Edited By: |

Updated on: Sep 22, 2021 | 7:12 AM

Share

Bengaluru Rain: ಬೆಂಗಳೂರು: ಕರ್ನಾಟಕದಲ್ಲಿ ಮಳೆಯ ಅಬ್ಬರ (Heavy Rainfall) ಹೆಚ್ಚಾಗಿದ್ದು, ಇಂದಿನಿಂದ 4 ದಿನ ಮಳೆ ಹೆಚ್ಚಾಗಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಕೂಡ ಸೆ. 25ರವರೆಗೂ ಮಳೆಯ ಆರ್ಭಟ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಬೆಂಗಳೂರು ಮಾತ್ರವಲ್ಲದೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯದಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆ ಹೆಚ್ಚಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ಮಳೆಯಿಂದ ಹಳದಿ ಅಲರ್ಟ್​ ಘೋಷಿಸಲಾಗಿದೆ. ಸೆಪ್ಟೆಂಬರ್ ಕೊನೆಯ ವಾರದವರೆಗೂ ಮಲೆನಾಡು, ಕರಾವಳಿ, ಕೊಡಗಿನಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ. ಅತ್ತ ಉತ್ತರ ಭಾರತದಲ್ಲೂ ಮಳೆ ಹೆಚ್ಚಾಗಿದ್ದು, ಹಲವು ರಾಜ್ಯಗಳಲ್ಲಿ ಪ್ರವಾಹದ ಆತಂಕ ಎದುರಾಗಿದೆ. ಗುಜರಾತ್​ನಲ್ಲಿ ಇಂದಿನಿಂದ 4 ದಿನ ಅಂದರೆ ಸೆ. 25ರವರೆಗೂ ಮಳೆ ಮುಂದುವರೆಯಲಿದೆ. ನೆರೆಯ ರಾಜ್ಯವಾದ ಕೇರಳದಲ್ಲಿ ಸೆ. 23ರಂದು ವಿಪರೀತ ಮಳೆಯಾಗಲಿದೆ.

ಇಂದಿನಿಂದ ಸೆಪ್ಟೆಂಬರ್ 25ರವರೆಗೆ ಕರ್ನಾಟಕದಲ್ಲಿ ಮಳೆ ಸುರಿಯಲಿದೆ. ಹೀಗಾಗಿ ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಭಾರೀ ಮಳೆ ಸುರಿಯಲಿದೆ. ಮುಖ್ಯವಾಗಿ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇನ್ನೂ 4 ದಿನ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಸೇರಿದಂತೆ ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಇನ್ನೆರಡು ದಿನ ಸಾಧಾರಣ ಮಳೆಯಾಗಲಿದೆ.

ಪಶ್ಚಿಮ ಬಂಗಾಳದಲ್ಲೂ ಮಳೆಯ ಅಬ್ಬರದಿಂದ ಪ್ರವಾಹದ ಭೀತಿ ಎದುರಾಗಿದೆ. ರಾಜಸ್ಥಾನ, ಗುಜರಾತ್, ತಮಿಳುನಾಡು, ಪಶ್ಚಿಮ ಬಂಗಾಳ, ಒರಿಸ್ಸಾ, ಉತ್ತರಾಖಂಡ, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್​ಗಢ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಸಿಕ್ಕಿಂ, ಸೌರಾಷ್ಟ್ರ, ಕಚ್, ಮಹಾರಾಷ್ಟ್ರ, ಗೋವಾ, ಅಂಡಮಾನ್ ನಿಕೋಬಾರ್, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಜಾರ್ಖಂಡ್, ಬಿಹಾರ, ಉತ್ತರ ಪ್ರದೇಶ, ಆಂಧ್ರ ಪ್ರದೇಶ, ತೆಲಂಗಾಣ, ಕೇರಳ, ಲಕ್ಷದ್ವೀಪದಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ. ಪಂಜಾಬ್, ಹರಿಯಾಣ, ದೆಹಲಿ, ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ, ಲಡಾಖ್​ನಲ್ಲಿ ಇಂದು ಮಳೆ ಸುರಿಯಲಿದೆ. ಕರ್ನಾಟಕದಲ್ಲಿ ವರುಣನ ಅಬ್ಬರದಿಂದ ಹಲವೆಡೆ ಹೈ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: Karnataka Weather Today : ಕರ್ನಾಟಕದಲ್ಲಿ ಇಂದು ಭಾರೀ ಮಳೆ; ಬೆಂಗಳೂರಿನಲ್ಲೂ ಇಂದು ವರುಣನ ಆರ್ಭಟ ಸಾಧ್ಯತೆ

Bengaluru Rain: ಬೆಂಗಳೂರಿನಲ್ಲಿ ಸೆ. 25ರವರೆಗೂ ಗುಡುಗು ಸಹಿತ ಭಾರೀ ಮಳೆ; ಸಂಜೆ ಬೇಗ ಮನೆ ಸೇರಿಕೊಳ್ಳಿ!

(Karnataka weather Today Heavy Rainfall in Bengaluru, Shimoga, Coastal Districts for 4 More Days Weather Forecast Karnataka Rain)