Karnataka Weather Today: ಮಲೆನಾಡು, ಕರಾವಳಿಯಲ್ಲಿ ಸೆ. 2ರವರೆಗೂ ಭಾರೀ ಮಳೆ; ಕೆಲವೆಡೆ ಆರೆಂಜ್ ಅಲರ್ಟ್ ಘೋಷಣೆ

Karnataka Rain | ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡಿನಲ್ಲಿ ಮಳೆಯ ಆರ್ಭಟ ಇನ್ನೂ ಕಡಿಮೆಯಾಗಿಲ್ಲ. ಸೆ. 2ರವರೆಗೂ ಮಳೆ ಮುಂದುವರೆಯಲಿದ್ದು, ಕರ್ನಾಟಕದ ಇಂದಿನ ಹವಾಮಾನ ವರದಿ ಹೀಗಿದೆ.

Karnataka Weather Today: ಮಲೆನಾಡು, ಕರಾವಳಿಯಲ್ಲಿ ಸೆ. 2ರವರೆಗೂ ಭಾರೀ ಮಳೆ; ಕೆಲವೆಡೆ ಆರೆಂಜ್ ಅಲರ್ಟ್ ಘೋಷಣೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Skanda

Updated on: Aug 31, 2021 | 6:13 AM

Karnataka Rain Today | ಕರ್ನಾಟಕ ಸೇರಿ ಬಹುತೇಕ ರಾಜ್ಯಗಳಲ್ಲಿ ಮತ್ತೆ ಮಳೆಯ (Heavy Rain) ಆರ್ಭಟ ಶುರುವಾಗಿದ್ದು, ಸೆ. 2ರವರೆಗೂ ಮಳೆ ಸುರಿಯಲಿದೆ. ಇಂದಿನಿಂದ ಮೂರು ದಿನ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ.

ಸೆಪ್ಟಂಬರ್ 2ರವರೆಗೂ ಕರ್ನಾಟಕ, ಬಿಹಾರ, ಮಧ್ಯಪ್ರದೇಶ ಉತ್ತರಾಖಂಡ, ಗುಜರಾತ್ ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ. ಹಾಗೇ, ತಮಿಳುನಾಡು, ಆಂಧ್ರಪ್ರದೇಶ, ಅರುಣಾಚಲಪ್ರದೇಶ, ಉತ್ತರ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ, ತೆಲಂಗಾಣ, ವಿದರ್ಭ, ಛತ್ತೀಸ್​ಗಢ, ಅಂಡಮಾನ್-ನಿಕೋಬಾರ್, ಜಮ್ಮು ಕಾಶ್ಮೀರ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಗೋವಾ, ಒರಿಸ್ಸಾ ರಾಜ್ಯಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದ್ದು, ಜೋರಾದ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಬೆಂಗಳೂರಿನಲ್ಲಿ ಕೂಡ ಸಂಜೆಯ ಬಳಿಕ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಾಗಿದೆ. ರಾಮನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ ಜಿಲ್ಲೆಗಳಲ್ಲಿ ಕೂಡ ಇನ್ನೆರಡು ದಿನ ಸಾಧಾರಣ ಮಳೆಯಾಗಲಿದೆ. ನಿನ್ನೆ ಉಡುಪಿ ಜಿಲ್ಲೆಯ ಗುಲ್ವಾಡಿಯಲ್ಲಿ ಅತಿ ಹೆಚ್ಚು ಮಳೆಯಾಗಿದ್ದು, 109 ಮಿ.ಮೀ. ಮಳೆ ದಾಖಲಾಗಿದೆ. ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ 54 ಮಿ.ಮೀ, ಹುಲಿಕಲ್​ನಲ್ಲಿ 39 ಮಿ.ಮೀ. ಮಳೆಯಾಗಲಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಹೀಗಾಗಿ, ಇಂದಿನಿಂದ ಸೆಪ್ಟೆಂಬರ್ 2ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಭಾರಿ ಹಾಗೂ ಅತಿ ಭಾರಿ ಮಳೆ ನಿರೀಕ್ಷೆ ಇದ್ದು, ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕಲಬುರ್ಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಕೂಡ ಇಂದು ಮಳೆಯಾಗುವ ಸಾಧ್ಯತೆಯಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ರಾಯಚೂರು, ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಕಳೆದ ವರ್ಷಕ್ಕಿಂತಲೂ ಹೆಚ್ಚು ಮಳೆಯಾಗಿದೆ. ಈ ಜಿಲ್ಲೆಗಳಲ್ಲಿ ಇನ್ನೆರಡು ದಿನ ಹಗುರ ಮಳೆಯಾಗಲಿದೆ. ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಇನ್ನೆರಡು ದಿನ ಮಳೆಯಾಗಲಿದೆ.

ಈ ಬಾರಿ ಕರ್ನಾಟಕದ ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿಯೂ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ದಕ್ಷಿಣ ಒಳನಾಡಿನ 16 ಜಿಲ್ಲೆಯ ಪೈಕಿ 10 ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಕರಾವಳಿಯ ಮೂರು ಜಿಲ್ಲೆಯಲ್ಲಿಯೂ ಇಂದಿನಿಂದ ಆ. 30ರವರೆಗೆ ವ್ಯಾಪಕ ಮಳೆಯಾಗಲಿದೆ. ತಮಿಳುನಾಡು ಮತ್ತು ಕೇರಳ, ಬಿಹಾರ, ಉತ್ತರ ಪ್ರದೇಶ, ಉತ್ತರಾಖಂಡ ರಾಜ್ಯಗಳಲ್ಲಿ ಇಂದು ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಸ್ಸಾಂ, ಮೇಘಾಲಯದಲ್ಲಿ ಕೂಡ ಭಾರೀ ಮಳೆಯಾಗಲಿದೆ.

ಇದನ್ನೂ ಓದಿ: Karnataka Weather Today: ಬೆಂಗಳೂರು, ಕರಾವಳಿ ಸೇರಿ 10 ಜಿಲ್ಲೆಗಳಲ್ಲಿ ಇನ್ನೆರಡು ದಿನ ಮಳೆ ಆರ್ಭಟ; ಇಂದು ಆರೆಂಜ್ ಅಲರ್ಟ್ ಘೋಷಣೆ

Karnataka Dams Water Level: ಭಾರೀ ಮಳೆಯಿಂದ ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

(Karnataka Weather Today: Heavy Rainfall in Coastal Karnataka and Malnad Region till September 2 Karnataka Rain)

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್