Karnataka Rain: ಕರಾವಳಿಯಲ್ಲಿ ಇಂದಿನಿಂದ ವಿಪರೀತ ಮಳೆ; ಕರ್ನಾಟಕದ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

| Updated By: ಆಯೇಷಾ ಬಾನು

Updated on: Sep 08, 2021 | 6:24 AM

Karnataka Weather Today | ಭಾರೀ ಮಳೆಯಿಂದ ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕಲಬುರ್ಗಿ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Karnataka Rain: ಕರಾವಳಿಯಲ್ಲಿ ಇಂದಿನಿಂದ ವಿಪರೀತ ಮಳೆ; ಕರ್ನಾಟಕದ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಪ್ರಾತಿನಿಧಿಕ ಚಿತ್ರ
Follow us on

Karnataka Weather | ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದಲ್ಲಿ (Rain in Karnataka) ಇನ್ನೆರಡು ದಿನ ಭಾರೀ ಮಳೆಯಾಗಲಿದೆ. ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕಲಬುರ್ಗಿ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ (Orange Alert)  ಘೋಷಿಸಲಾಗಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್‌, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ಬೆಳಗಾವಿ, ಕೊಪ್ಪಳ, ಗದಗ, ಧಾರವಾಡ ಮತ್ತು ಹಾವೇರಿಯಲ್ಲಿ ಇಂದು ಹಳದಿ ಅಲರ್ಟ್‌ (Yellow Alert) ಘೋಷಿಸಲಾಗಿದೆ.

ಇಂದು ಕರ್ನಾಟಕದ ಕರಾವಳಿ ತೀರದಲ್ಲಿ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ. ಸೆಪ್ಟೆಂಬರ್ 9ರವರೆಗೆ ವಾಯುವ್ಯ ಭಾರತ ಮತ್ತು ದಕ್ಷಿಣ ಭಾರತದ ಕೆಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಕಲಬುರ್ಗಿ ಜಿಲ್ಲೆಯ ಸೊನ್ನ ಬ್ಯಾರೇಜ್​ನಿಂದ ಭೀಮಾ ನದಿಗೆ 35,088 ಕ್ಯೂಸೆಕ್ಸ್​ ನೀರು ಬಿಡಲಾಗಿದೆ.

ಯಾದಗಿರಿ ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಭಾರೀ ಮಳೆಗೆ ಸಂಪರ್ಕ ಸೇತುವೆ ಕೊಚ್ಚಿಹೋಗಿದೆ.
ಹತ್ತಿಕುಣಿ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರು ಹರಿಬಿಟ್ಟ ಹಿನ್ನೆಲೆಯಲ್ಲಿ ನೀರಿನ ರಭಸಕ್ಕೆ ಯಡ್ಡಳ್ಳಿ ಗ್ರಾಮದ ಸೇತುವೆ ಕೊಚ್ಚಿಹೋಗಿದೆ. ಯಾದಗಿರಿ ತಾಲೂಕಿನಲ್ಲಿ ಹತ್ತಿಕುಣಿ ಜಲಾಶಯ ಮತ್ತು ಯಡ್ಡಳ್ಳಿಗ್ರಾಮ ಬರುತ್ತವೆ. ಸೇತುವೆ ನಾಶ ಹಿನ್ನೆಲೆ ಯಡ್ಡಳ್ಳಿ ಗ್ರಾಮಕ್ಕೆ ತೆರಳಲು ಜನರು ಹರಸಾಹಸ ಪಡುವಂತಾಗಿದೆ.

ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶ, ಹಿಮಾಚಲ ಪ್ರದೇಶ, ಉತ್ತರಾಖಂಡ, ಉತ್ತರ ಪಂಜಾಬ್, ಗೋವಾ, ಜಮ್ಮು ಮತ್ತು ಕಾಶ್ಮೀರ, ಮಹಾರಾಷ್ಟ್ರ, ಕೊಂಕಣ, ಗುಜರಾತ್, ರಾಜಸ್ಥಾನದಲ್ಲಿ ಸೆ. 10ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ದಕ್ಷಿಣ ಒಡಿಶಾ, ಕರಾವಳಿ ಆಂಧ್ರ ಪ್ರದೇಶ, ತೆಲಂಗಾಣ, ಹರಿಯಾಣ, ವಿದರ್ಭ ಮತ್ತು ದಕ್ಷಿಣ ಛತ್ತೀಸ್‌ಗಢದ ಕಡಿಮೆ ಒತ್ತಡದ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಉತ್ತರಾಖಂಡ ಮತ್ತು ಮಹಾರಾಷ್ಟ್ರದ ಒಳನಾಡಿನಲ್ಲಿ ಇಂದು ವಿಪರೀತ ಮಳೆಯಾಗಲಿದೆ. ಲಡಾಖ್, ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ, ದೆಹಲಿ, ರಾಜಸ್ಥಾನ, ಮಧ್ಯಪ್ರದೇಶ, ತೆಲಂಗಾಣ, ಕರ್ನಾಟಕದ ಕರಾವಳಿ ಜಿಲ್ಲೆಗಳು, ಅಂಡಮಾನ್ ನಿಕೋಬಾರ್​ನಲ್ಲಿಯೂ ಮಳೆ ಹೆಚ್ಚಾಗಲಿದೆ.

ಇದನ್ನೂ ಓದಿ: Karnataka Weather Today: ಕರ್ನಾಟಕದಲ್ಲಿ ಸೆ. 9ರವರೆಗೂ ಮಳೆ; ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ

Karnataka Weather Today: ಬೆಂಗಳೂರಿನಲ್ಲಿ ಇನ್ನೂ 4 ದಿನ ಭಾರೀ ಮಳೆ; ಕರಾವಳಿಯಲ್ಲೂ ಸೆ. 6ರವರೆಗೆ ವರುಣನ ಆರ್ಭಟ

(Karnataka weather Today Heavy Rainfall in Udupi, Mangalore IMD Issues Orange Alert till September 9 Karnataka Rain)