Karnataka Rain: ಬೆಂಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಮಳೆ ಹೆಚ್ಚಾಗುತ್ತಿದೆ. ರಾಜ್ಯದ ಬಹುತೇಕ ಕಡೆ ಇಂದು ಮತ್ತು ನಾಳೆ ವರುಣನ ಆರ್ಭಟ ಹೆಚ್ಚಾಗಲಿದೆ. ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಮತ್ತು ವಾಯುಭಾರ ಕುಸಿತ ಉಂಟಾಗಿರುವುದರಿಂದ ಇನ್ನೆರಡು ದಿನ ಮಳೆಯ ಆರ್ಭಟ ಇರಲಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ವ್ಯಾಪಕವಾಗಿ ಮಳೆಯಾಗಲಿದೆ. ಭಾನುವಾರದಿಂದ ಮಂಗಳವಾರದವರೆಗೆ ಕರಾವಳಿಯ ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ. ಕಲಬುರ್ಗಿ ಮತ್ತು ಯಾದಗಿರಿ ಹೊರತುಪಡಿಸಿ ಕರ್ನಾಟಕದ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ. ಭಾನುವಾರದಿಂದ ಮಂಗಳವಾರದವರೆಗೆ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಪ್ರತ್ಯೇಕ ಸ್ಥಳಗಳಲ್ಲಿ ಮಳೆಯಾಗಲಿದೆ.
ಕರ್ನಾಟಕ ಹೊರತುಪಡಿಸಿ ಕೇರಳ, ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿ ಕರ್ನಾಟಕ, ಕೇರಳ ಮತ್ತು ಲಕ್ಷದ್ವೀಪದಲ್ಲಿ ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಆಂಧ್ರಪ್ರದೇಶ, ತಮಿಳುನಾಡು ಮತ್ತು ಕರ್ನಾಟಕದ ಒಳನಾಡಿನಲ್ಲಿ ಸಾಕಷ್ಟು ವ್ಯಾಪಕವಾದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ಮಹಾರಾಷ್ಟ್ರ, ಗೋವಾ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮಹಾರಾಷ್ಟ್ರ ಮತ್ತು ತೆಲಂಗಾಣದಲ್ಲಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
Rainfall Forecast: (1/2) Widespread very light to moderate rains with isolated heavy to very heavy rains likely over SIK, Malnad & Coastal Karnataka regions and isolated to widespread very light to moderate rains with isolated heavy rains likely to prevail over NIK region. pic.twitter.com/WNGEWc4nEE
— KSNDMC (@KarnatakaSNDMC) November 5, 2021
ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಸೋಮವಾರದವರೆಗೆ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮಂಗಳವಾರ ಅಲ್ಲಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಪಶ್ಚಿಮ ಘಟ್ಟದ ವ್ಯಾಪ್ತಿಯಲ್ಲಿರುವ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನಾಳೆಯವರೆಗೆ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ. ಬೆಂಗಳೂರು ಮತ್ತು ಕರ್ನಾಟಕದ ಕೆಲವು ಭಾಗಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಕರ್ನಾಟಕದಲ್ಲಿ ಮತ್ತೆ ಮಳೆ ಜಾಸ್ತಿಯಾಗಿದ್ದು, ಉತ್ತರ ಕರ್ನಾಟಕದಲ್ಲಿ ಮಾತ್ರ ಮಳೆ ಕಡಿಮೆಯಾಗಲಿದೆ ಎನ್ನಲಾಗುತ್ತಿದೆ. ಉತ್ತರ ಕರ್ನಾಟಕದಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಮುನ್ಸೂಚನೆ ಇತ್ತು. ಆದರೆ ಆ ಮಳೆ ರಾಜ್ಯದ ದಕ್ಷಿಣ ಭಾಗಕ್ಕೆ ಮಾತ್ರ ಸೀಮಿತವಾಗಲಿದೆ. ಉತ್ತರ ಕರ್ನಾಟಕದಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದೆ ಅಷ್ಟೇ ಎಂದು ಧಾರವಾಡ ಕೃಷಿ ವಿವಿ ಹವಾಮಾನ ವಿಭಾಗದ ಮುಖ್ಯಸ್ಥ ಡಾ.ಆರ್.ಹೆಚ್.ಪಾಟೀಲ ಹೇಳಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಸಾಧ್ಯತೆ ಕಡಿಮೆ. ಆದರೆ ಅರಬ್ಬಿ ಸಮುದ್ರದಲ್ಲಿ ಮತ್ತೊಂದು ವಾಯುಭಾರ ಕುಸಿತ ಆಗುತ್ತಿದೆ. ಹೀಗಾಗಿ ನವೆಂಬರ್ 11ರ ಬಳಿಕ ಉತ್ತರ ಭಾಗದಲ್ಲಿ ಕೂಡ ಮಳೆಯಾಗಲಿದೆ ಎನ್ನಲಾಗಿದೆ.
ಇದನ್ನೂ ಓದಿ: Bengaluru Rain: ಬೆಂಗಳೂರಿನಲ್ಲಿ ರಾತ್ರಿಯಿಡೀ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತ
ಸದ್ಯ ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಇಲ್ಲ: ಹವಾಮಾನ ತಜ್ಞ ಡಾ.ಆರ್.ಎಚ್.ಪಾಟೀಲ