Karnataka Weather: ಹವಾಮಾನ ವರದಿ – ಇಂದಿನಿಂದ 4 ದಿನ ಗುಡುಗು ಸಹಿತ ಮಳೆ ಸಾಧ್ಯತೆ; ಮುಂಗಾರಿಗೆ ದಿನಗಣನೆ
ಇಂದು ರಾಜ್ಯದ ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದ್ದು, ಕರಾವಳಿ, ದಕ್ಷಿಣ ಒಳನಾಡು ಭಾಗದಲ್ಲಿ ಇಂದಿನಿಂದ 4 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಆರಂಭಕ್ಕೆ ದಿನಗಣನೆ ಶುರುವಾಗಿದೆ. ತೌಕ್ತೆ ಚಂಡಮಾರುತದ ಪರಿಣಾಮ ಕರಾವಳಿ, ಮಲೆನಾಡು ಸೇರಿದಂತೆ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾದ ನಂತರ ಯಾಸ್ ಅಡ್ಡ ಪರಿಣಾಮವೂ ರಾಜ್ಯದ ಕೆಲವು ಭಾಗಗಳಲ್ಲಿ ಮಳೆ ಸುರಿಸಿದ್ದರಿಂದ ಮೇ ತಿಂಗಳ ವಾತಾವರಣ ಹೆಚ್ಚೂಕಡಿಮೆ ಮಳೆಗಾಲದಂತೆಯೇ ಆಗಿತ್ತು. ಇದೀಗ ಮುಂಗಾರು ಪ್ರವೇಶವೂ ಸನಿಹವಾಗಿರುವುದರಿಂದ ಇನ್ನೇನು ಮಳೆಗಾಲ ಅಧಿಕೃತವಾಗಿ ಆರಂಭವಾಗಲಿದೆ. ಇಂದು ರಾಜ್ಯದ ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದ್ದು, ಕರಾವಳಿ, ದಕ್ಷಿಣ ಒಳನಾಡು ಭಾಗದಲ್ಲಿ ಇಂದಿನಿಂದ 4 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆಗುಂಬೆ ಸೇರಿದಂತೆ ಮಲೆನಾಡು ಭಾಗದ ಕೆಲವೆಡೆ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗಿದ್ದು, ಇಂದು ಸೂರ್ಯ ಆಗಾಗ ಮೋಡದೊಳಗೆ ಮರೆಯಾಗುತ್ತಿದ್ದಾನೆ. ಇತ್ತ ಕರಾವಳಿ ಭಾಗದಲ್ಲೂ ಮೋಡ ಕವಿದ ವಾತಾವರಣ ಇದೆ. ಹವಾಮಾನ ಇಲಾಖೆ ವರದಿ ಪ್ರಕಾರ ಶಿವಮೊಗ್ಗ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್, ಚಿಕ್ಕಮಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಈ ವರ್ಷ ಮುಂಗಾರು ತುಸು ತಡವಾಗುವ ಸಾಧ್ಯತೆ ಇದ್ದು, ಜೂನ್ 3ರಿಂದ ಕೇರಳದಲ್ಲಿ ಮುಂಗಾರು ಆರಂಭವಾಗುವ ಸಾಧ್ಯತೆ ಇದೆ. ಕರ್ನಾಟಕಕ್ಕೆ ಜೂನ್ 4 ಅಥವಾ 5ರಂದು ಪ್ರವೇಶಿಸುವ ನಿರೀಕ್ಷೆ ಇದೆ. ಏತನ್ಮಧ್ಯೆ ಇಂದಿನಿಂದ 4 ದಿನಗಳ ಕಾಲ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಸೇರಿದಂತೆ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಇಂದಿನಿಂದ ಜೂನ್ 4ರ ತನಕ ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವ ಇರುವುದರಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ.
ಧಾರವಾಡ, ಬೆಳಗಾವಿ, ಗದಗ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಚಾಮರಾಜನಗರ, ವಿಜಯಪುರ, ಕೋಲಾರ, ಹಾಸನ, ರಾಯಚೂರು, ಕೊಪ್ಪಳ, ಕಲಬುರ್ಗಿ, ಬೀದರ್, ಚಿಕ್ಕಮಗಳೂರಿನಲ್ಲಿ ಇಂದಿನಿಂದ ಮಳೆಯ ಅಬ್ಬರ ಹೆಚ್ಚುವ ಸಾಧ್ಯತೆ ಇದೆ.
ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 37 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್, ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 37 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್, ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ. ಮೈಸೂರಿನಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ಉಳಿದ ನಗರಗಳ ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶ ಮಾಹಿತಿ ಮಂಗಳೂರು: ಗರಿಷ್ಠ29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್ ಉಡುಪಿ: ಗರಿಷ್ಠ30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್ ಕಾರವಾರ: ಗರಿಷ್ಠ30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 27 ಡಿಗ್ರಿ ಸೆಲ್ಸಿಯಸ್ ಬೆಳಗಾವಿ: ಗರಿಷ್ಠ29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಮಂಡ್ಯ: ಗರಿಷ್ಠ33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ಹಾಸನ: ಗರಿಷ್ಠ29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ರಾಮನಗರ: ಗರಿಷ್ಠ32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ಕೋಲಾರ: ಗರಿಷ್ಠ33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತುಮಕೂರು: ಗರಿಷ್ಠ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಕೊಪ್ಪಳ: ಗರಿಷ್ಠ33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ವಿಜಯಪುರ: ಗರಿಷ್ಠ32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಬೀದರ್: ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ಕಲಬುರಗಿ: ಗರಿಷ್ಠ36 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ಬಾಗಲಕೋಟೆ: ಗರಿಷ್ಠ36 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ಚಾಮರಾಜನಗರ: ಗರಿಷ್ಠ32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ದಾವಣಗೆರೆ: ಗರಿಷ್ಠ33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ಚಿತ್ರದುರ್ಗ: ಗರಿಷ್ಠ33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ಹಾವೇರಿ: ಗರಿಷ್ಠ33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ಗದಗ: ಗರಿಷ್ಠ33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ಚಿಕ್ಕಬಳ್ಳಾಪುರ: ಗರಿಷ್ಠ31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್
ಇದನ್ನೂ ಓದಿ: Monsoon Rains: ಈ ವರ್ಷ ಮುಂಗಾರು 2 ದಿನ ತಡ: ಕರ್ನಾಟಕದಲ್ಲಿ ಜೂನ್ 1ರಿಂದ 3ರವರೆಗೆ ಭಾರಿ ಮಳೆ
Published On - 10:15 am, Tue, 1 June 21