Karnataka Weather Today: ಇಂದಿನಿಂದ 3 ದಿನ ಕರ್ನಾಟಕದಲ್ಲಿ ಭಾರೀ ಮಳೆ; ಒರಿಸ್ಸಾ, ಆಂಧ್ರದಲ್ಲಿ ಗುಲಾಬ್ ಚಂಡಮಾರುತದ ಭೀತಿ
Karnataka Rain | ನೆರೆಯ ರಾಜ್ಯ ಆಂಧ್ರ ಪ್ರದೇಶದಲ್ಲಿ ಗುಲಾಬ್ ಚಂಡಮಾರುತದ ಹಿನ್ನೆಲೆ ಬೆಂಗಳೂರಿನಲ್ಲೂ ಶನಿವಾರ ಸಂಜೆಯಿಂದ ಮಳೆ ಹೆಚ್ಚಾಗಿದೆ. ಕರಾವಳಿ ಜಿಲ್ಲೆಗಳು, ಮಲೆನಾಡು, ಉತ್ತರ ಒಳನಾಡಿನಲ್ಲಿ ಇಂದಿನಿಂದ 3 ದಿನ ಮಳೆಯ ಅಬ್ಬರ ಹೆಚ್ಚಾಗಲಿದೆ.
Karnataka Rain: ಜುಲೈ ತಿಂಗಳಲ್ಲಿ ಭಾರೀ ಮಳೆಯಿಂದ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಅವಾಂತರ ಸೃಷ್ಟಿಯಾಗಿತ್ತು. ಆಗಸ್ಟ್ನಲ್ಲಿ ಮಳೆ ಕಡಿಮೆಯಾಗಿ, ಒಣಹವೆ ಉಂಟಾಗಿತ್ತು. ಸೆಪ್ಟೆಂಬರ್ ತಿಂಗಳ ಆರಂಭದಿಂದಲೂ ಮಳೆ ಹೆಚ್ಚಾಗಿದೆ. ಇಂದಿನಿಂದ ಮೂರು ದಿನಗಳ ಕಾಲ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಭಾರತದಲ್ಲಿ ಈ ಬಾರಿ ಸೆಪ್ಟೆಂಬರ್ ತಿಂಗಳಲ್ಲಿ ವಾಡಿಕೆಗಿಂತ ಶೇ. 27ಕ್ಕೂ ಹೆಚ್ಚು ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಮಳೆ ಹೆಚ್ಚಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 28ರವರೆಗೆ ಭಾರೀ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳು, ಮಲೆನಾಡು, ಉತ್ತರ ಒಳನಾಡಿನಲ್ಲಿ ಇಂದಿನಿಂದ 3 ದಿನ ಮಳೆಯ ಅಬ್ಬರ ಹೆಚ್ಚಾಗಲಿದೆ.
ಇಂದು ಕರ್ನಾಟಕದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಜಾಸ್ತಿಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಸೆ. 28ರವರೆಗೂ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಇಂದಿನಿಂದ 2 ದಿನ ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ನೆರೆಯ ಆಂಧ್ರ ಪ್ರದೇಶ ಮತ್ತು ಒರಿಸ್ಸಾದಲ್ಲಿ ಗುಲಾಬ್ ಚಂಡಮಾರುತದ ಆರ್ಭಟ ಇರಲಿದ್ದು, ಈ ಭಾಗಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ನೆರೆಯ ರಾಜ್ಯ ಆಂಧ್ರ ಪ್ರದೇಶದಲ್ಲಿ ಗುಲಾಬ್ ಚಂಡಮಾರುತದ ಹಿನ್ನೆಲೆ ಬೆಂಗಳೂರಿನಲ್ಲೂ ಶನಿವಾರ ಸಂಜೆಯಿಂದ ಮಳೆ ಹೆಚ್ಚಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಉತ್ತರ ಒಳನಾಡಿನ ಬೀದರ್, ಕಲಬುರ್ಗಿ, ಯಾದಗಿರಿ, ಕೊಪ್ಪಳ, ರಾಯಚೂರು, ಹಾವೇರಿ, ವಿಜಯಪುರದಲ್ಲಿ ಇಂದಿನಿಂದ ಸೆ. 28ರವರೆಗೂ ಮಳೆಯಾಗಲಿದೆ. ಇಂದು ಕರ್ನಾಟಕದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಜಾಸ್ತಿಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಸೆ. 28ರವರೆಗೂ ಮಳೆ ಮುಂದುವರೆಯುವ ಸಾಧ್ಯತೆಯಿದೆ. ಇಂದು ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
25.9.2021 Forecast day1: Rain/thundershowers very likely to occur at many places over the State. day2: Rain/thundershowers very likely to occur at many places over Coastal Karnataka and at a few places over Interior Karnataka. Fisheries Warning: Nil #imdbangalore
— Met centre Bengaluru (@metcentre_bng) September 25, 2021
ಬೀದರ್ ಜಿಲ್ಲೆಯಲ್ಲಿ ಸತತವಾಗಿ ಧಾರಾಕಾರ ಮಳೆ ಸುರಿಯುತ್ತಿದೆ. ಇದರಿಂದ ಕಾರಂಜಾ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, 5050 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. 7.69 ಟಿಎಂಸಿ ಸಾಮರ್ಥ್ಯವಿರುವ ಕಾರಂಜಾ ಜಲಾಶಯದಲ್ಲಿ ಸದ್ಯ 7.24 ಟಿಎಂಸಿ ನೀರು ಸಂಗ್ರಹವಾಗಿದೆ. ಕಾರಂಜಾ ಜಲಾಶಯಕ್ಕೆ ಒಳಹರಿವು ಹೆಚ್ಚಾಗುತ್ತಿದಂತೆ ಜಲಾಶಯಕ್ಕೆ ಯಾವುದೇ ಅಪಾಯವಾಗಬಾರದು ಎಂದು ಅಧಿಕಾರಿಗಳು ನಿನ್ನೆ 5050 ಕ್ಯೂಸೆಕ್ ನೀರು ಹೊರ ಬಿಟ್ಟಿದ್ದಾರೆ. ಬೀದರ್ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದ ಪಪ್ಪಾಯಿ, ಟೊಮ್ಯಾಟೊ ಸೇರಿದಂತೆ ಉದ್ದು, ಹೆಸರು ಹಾನಿಯಾಗಿವೆ. ಮಳೆಯ ಆರ್ಭಟಕ್ಕೆ ಬೀದರ್ ರೈತರು ಕಂಗಾಲಾಗಿದ್ದಾರೆ. ಡ್ಯಾಂನಿಂದ ಅಪಾರ ಪ್ರಮಾಣದ ನೀರು ಹೊರಬಿಟ್ಟ ಹಿನ್ನೆಲೆ ಮಾಂಜ್ರಾ ನದಿ ನೀರು ಜಮೀನುಗಳಿಗೆ ನುಗ್ಗಿ ಬೆಳೆಗಳು ಹಾನಿಯಾಗಿವೆ.
ಬೆಂಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮಳೆ ಹೆಚ್ಚಾಗಿದೆ. ಬೆಂಗಳೂರು ಮಾತ್ರವಲ್ಲದೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯದಲ್ಲಿ ಇಂದು ಮಳೆಯಾಗಲಿದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ.
ಆಂಧ್ರಪ್ರದೇಶ, ಗುಜರಾತ್, ಒರಿಸ್ಸಾದಲ್ಲಿ ಇಂದು ವಿಪರೀತ ಮಳೆ ಸುರಿಯಲಿದೆ. ದೆಹಲಿ, ಉತ್ತರ ಪ್ರದೇಶ, ಉತ್ತರಾಖಂಡ, ರಾಜಸ್ಥಾನ, ಮಧ್ಯಪ್ರದೇಶ, ಜಾರ್ಖಂಡ್, ಛತ್ತೀಸ್ಗಢ, ಗೋವಾ, ಅಂಡಮಾನ್ ನಿಕೋಬಾರ್, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಸಿಕ್ಕಿಂ, ಸೌರಾಷ್ಟ್ರ, ಕಚ್, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಬಿಹಾರ, ಆಂಧ್ರ ಪ್ರದೇಶ, ತೆಲಂಗಾಣ, ಕೇರಳ, ಲಕ್ಷದ್ವೀಪದಲ್ಲಿ ಇಂದು ಮಳೆಯಾಗಲಿದೆ. ಪಂಜಾಬ್, ಹರಿಯಾಣ, ದೆಹಲಿ, ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ, ಲಡಾಖ್, ಪಶ್ಚಿಮ ರಾಜಸ್ಥಾನ, ತಮಿಳುನಾಡಿನಲ್ಲಿ ಇಂದು ಮಳೆಯ ಅಬ್ಬರ ಇರಲಿದೆ.
ಇದನ್ನೂ ಓದಿ: Karnataka Weather Today: ಸೆ. 28ರವರೆಗೂ ಕರ್ನಾಟಕದಲ್ಲಿ ಮಳೆ; ಕರಾವಳಿಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ
(Karnataka Weather Today Heavy Rainfall till September 28 Karnataka Rain Cyclone Gulab Scare in Odisha, Andhra Pradesh)