Karnataka Weather Today: ಕರ್ನಾಟಕದ ಹಲವೆಡೆ ಇಂದಿನಿಂದ ಆ. 30ರವರೆಗೆ ಭಾರೀ ಮಳೆ; ಇಂದಿನ ಹವಾಮಾನ ಹೀಗಿದೆ

| Updated By: Skanda

Updated on: Aug 28, 2021 | 6:36 AM

Karnataka Rain Updates: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಆ. 30ರವರೆಗೆ ಭಾರೀ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ತಮಿಳುನಾಡ ಹಾಗೂ ಕೇರಳದ ಕೆಲವೆಡೆ ನಾಳೆಯಿಂದ 2 ದಿನ ರೆಡ್ ಅಲರ್ಟ್ ಘೋಷಿಸಲಾಗಿದೆ.

Karnataka Weather Today: ಕರ್ನಾಟಕದ ಹಲವೆಡೆ ಇಂದಿನಿಂದ ಆ. 30ರವರೆಗೆ ಭಾರೀ ಮಳೆ; ಇಂದಿನ ಹವಾಮಾನ ಹೀಗಿದೆ
ಮಳೆಯ ಸಾಂದರ್ಭಿಕ ಚಿತ್ರ
Follow us on

Rain in Karnataka|ಕರ್ನಾಟಕದಲ್ಲಿ ಇಂದಿನಿಂದ ಮತ್ತೆ ಮಳೆ ಬಿರುಸು (Heavy Rain) ಪಡೆದುಕೊಳ್ಳಲಿದೆ. ಕರ್ನಾಟಕ (Karnataka Rain) ಮಾತ್ರವಲ್ಲದೆ ಮಹಾರಾಷ್ಟ್ರ (Maharashtra Rain), ಕೇರಳ (Kerala Rain), ತಮಿಳುನಾಡು (Tamil Nadu Rain), ಆಂಧ್ರಪ್ರದೇಶದಲ್ಲಿಯೂ ಇಂದಿನಿಂದ ಆ. 30ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಇನ್ನೂ 3 ದಿನ ಮಳೆಯ ಅಬ್ಬರ ಹೆಚ್ಚಾಗುವುದರಿಂದ ಹಳದಿ ಅಲರ್ಟ್​ (Yellow Alert) ಘೋಷಿಸಲಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಾಗಿದೆ. ಕರ್ನಾಟಕದ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲೂ ಮಳೆಯಾಗಲಿದೆ. ಶಿವಮೊಗ್ಗ, ರಾಮನಗರ, ಕೊಡಗು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ ಮತ್ತು ಕೋಲಾರ ಈ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಹೆಚ್ಚು ಮಳೆಯಾಗಲಿದೆ.

ಕಳೆದ ಮೂರ್ನಾಲ್ಕು ದಿನಗಳಿಂದ ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ಭಾರೀ ಮಳೆಯಾಗುತ್ತಿದೆ. ಹೀಗಾಗಿ, ಮಲೆನಾಡು, ಕೊಡಗಿನತ್ತ ವೀಕೆಂಡ್​ನಲ್ಲಿ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ಇಂದು ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಹಾಗೇ, ಇಂದು ಮತ್ತು ನಾಳೆ ಕರ್ನಾಟಕದ 13 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಆ. 30ರವರೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಈ 13 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಆ. 30ರವರೆಗೂ ಯೆಲ್ಲೋ ಅಲರ್ಟ್​ ಮುಂದುವರೆಯಲಿದೆ.

ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಬೀದರ್, ರಾಯಚೂರು, ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಕಳೆದ ವರ್ಷಕ್ಕಿಂತಲೂ ಹೆಚ್ಚು ಮಳೆಯಾಗಿದೆ. ಈ ಜಿಲ್ಲೆಗಳಲ್ಲಿ ಇನ್ನೆರಡು ದಿನ ಹಗುರ ಮಳೆಯಾಗಲಿದೆ. ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಇನ್ನೆರಡು ದಿನ ಮಳೆಯಾಗಲಿದೆ.

ಈ ಬಾರಿ ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿಯೂ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ದಕ್ಷಿಣ ಒಳನಾಡಿನ 16 ಜಿಲ್ಲೆಯ ಪೈಕಿ 10 ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಕರಾವಳಿಯ ಮೂರು ಜಿಲ್ಲೆಯಲ್ಲಿಯೂ ಇಂದಿನಿಂದ ಆ. 30ರವರೆಗೆ ವ್ಯಾಪಕ ಮಳೆಯಾಗಲಿದೆ. ತಮಿಳುನಾಡು ಮತ್ತು ಕೇರಳ, ಬಿಹಾರ, ಉತ್ತರ ಪ್ರದೇಶ, ಉತ್ತರಾಖಂಡ ರಾಜ್ಯಗಳಲ್ಲಿ ಇಂದು ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಸ್ಸಾಂ, ಮೇಘಾಲಯದಲ್ಲಿ ಕೂಡ ಭಾರೀ ಮಳೆಯಾಗಲಿದೆ.

ನಾಳೆ ಮುಂಜಾನೆಯವರೆಗೂ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆಯ ತೀವ್ರತೆ ಹೆಚ್ಚಲಿದೆ. ತಮಿಳುನಾಡು, ಕೇರಳ, ಕರ್ನಾಟಕದ ಘಟ್ಟ ಪ್ರದೇಶದಲ್ಲಿ ಆ. 29 ಮತ್ತು 30ರಂದು ಮಳೆ ಹೆಚ್ಚಾಗಲಿದೆ. ತಮಿಳುನಾಡಿನ ಚೆನ್ನೈ, ಕೊಯಮತ್ತೂರು, ತಿರುಪ್ಪೂರ್, ತೆಂಕಸಿಯಲ್ಲಿ ನಾಳೆಯಿಂದ 2 ದಿನ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೇರಳದ ತಿರುವನಂತಪುರದಲ್ಲೂ ಭಾರೀ ಮಳೆಯಾಗಲಿದೆ. ಈಗಾಗಲೇ ಉತ್ತರಾಖಂಡ, ದೆಹಲಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹದ ವಾತಾವರಣ ನಿರ್ಮಾಣವಾಗಿದೆ.

ಇದನ್ನೂ ಓದಿ: Karnataka Weather Today: ಕರ್ನಾಟಕದಲ್ಲಿ ಇಂದಿನಿಂದ 4 ದಿನ ಭಾರೀ ಮಳೆ; ಕರಾವಳಿಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

Karnataka Dams Water Level: ರಾಜ್ಯದಲ್ಲಿ ಮತ್ತೆ ಮಳೆ ಹೆಚ್ಚಳ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

(Karnataka weather Today: Heavy Rains in Karnataka Kerala Tamil Nadu till August 30 IMD Karnataka Rain on Saturday)