AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Today: ಗುಲಾಬ್ ಚಂಡಮಾರುತದ ಪರಿಣಾಮ; ಕರಾವಳಿಯಲ್ಲಿ ಇಂದು ವಿಪರೀತ ಮಳೆ ಸಾಧ್ಯತೆ

Karnataka Rain | ಗುಲಾಬ್ ಚಂಡಮಾರುತದ ಪರಿಣಾಮದಿಂದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಇಂದು ವಿಪರೀತ ಮಳೆಯಾಗುವ ಸಾಧ್ಯತೆಯಿದೆ.

Karnataka Weather Today: ಗುಲಾಬ್ ಚಂಡಮಾರುತದ ಪರಿಣಾಮ; ಕರಾವಳಿಯಲ್ಲಿ ಇಂದು ವಿಪರೀತ ಮಳೆ ಸಾಧ್ಯತೆ
ಮಳೆ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Sep 28, 2021 | 6:40 AM

Share

Cyclone Gulab: ಪಕ್ಕದ ರಾಜ್ಯವಾದ ಆಂಧ್ರ ಪ್ರದೇಶದಲ್ಲಿ ಗುಲಾಬ್ ಚಂಡಮಾರುತದ ಅಬ್ಬರ ಜೋರಾಗಿದೆ. ಒರಿಸ್ಸಾದಲ್ಲೂ ಚಂಡಮಾರುತ ಅಪ್ಪಳಿಸಿದ್ದು, ಇದರ ಪರಿಣಾಮವಾಗಿ ಕರ್ನಾಟಕದಲ್ಲಿ ಕೂಡ ಇಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಗುಲಾಬ್ ಚಂಡಮಾರುತದ ಪ್ರಭಾವದಿಂದ ಕರ್ನಾಟಕದ ಕರಾವಳಿ ಜಿಲ್ಲೆಗಳು, ಮಹಾರಾಷ್ಟ್ರ, ಮಧ್ಯಪ್ರದೇಶ, ಛತ್ತೀಸ್​ಗಢ, ತೆಲಂಗಾಣ, ಆಂಧ್ರಪ್ರದೇಶದಲ್ಲಿ ಇನ್ನೆರಡು ದಿನ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಭಾರತದಲ್ಲಿ ಈ ಬಾರಿ ಸೆಪ್ಟೆಂಬರ್ ತಿಂಗಳಲ್ಲಿ ವಾಡಿಕೆಗಿಂತ ಶೇ. 27ಕ್ಕೂ ಹೆಚ್ಚು ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳು, ಮಲೆನಾಡು, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಇನ್ನೆರಡು ದಿನ ಮಳೆಯಾಗಲಿದೆ. ಗುಲಾಬ್ ಚಂಡಮಾರುತದ ಪರಿಣಾಮದಿಂದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಇಂದು ವಿಪರೀತ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಉತ್ತರ ಒಳನಾಡಿನ ಬೀದರ್, ಕಲಬುರ್ಗಿ, ಯಾದಗಿರಿ, ಕೊಪ್ಪಳ, ರಾಯಚೂರು, ಹಾವೇರಿ, ವಿಜಯಪುರದಲ್ಲಿ ಇಂದು ಮಳೆಯಾಗಲಿದೆ. ಬೆಂಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದಲ್ಲಿ ಇನ್ನೆರಡು ದಿನ ಮುಂಗಾರು ಮುಂದುವರೆಯಲಿದೆ.

ಭಾನುವಾರ ರಾತ್ರಿ ಒರಿಸ್ಸಾ- ಆಂಧ್ರಪ್ರದೇಶದ ಗಡಿಭಾಗದಲ್ಲಿ ಗುಲಾಬ್ ಚಂಡಮಾರುತ ಅಪ್ಪಳಿಸಿತ್ತು. ಒಡಿಶಾದ ಗೋಪಾಲಪುರಂ ಮತ್ತು ಆಂಧ್ರಪ್ರದೇಶದ ಕಾಳಿಂಗಪಟ್ಟಣಂನಲ್ಲಿ ಚಂಡಮಾರುತವು ಭೂ ಪ್ರವೇಶ ಮಾಡಿತ್ತು. ಮಹಾರಾಷ್ಟ್ರ, ಛತ್ತೀಸ್​ಗಢ ಮುಂತಾದ ರಾಜ್ಯಗಳಲ್ಲಿ ಇಂದು ಗುಲಾಬ್ ಚಂಡಮಾರುತದ ಪರಿಣಾಮ ಹೆಚ್ಚಾಗಲಿದೆ. ಮಧ್ಯಪ್ರದೇಶ, ಬಿಹಾರ, ಆಂಧ್ರಪ್ರದೇಶ, ಕರ್ನಾಟಕದಲ್ಲಿ ಮಳೆಯಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ.

ಇಂದು ಗುಜರಾತ್, ಮಧ್ಯ ಮಹಾರಾಷ್ಟ್ರ, ಕೊಂಕಣ, ಗೋವಾ, ಪಶ್ಚಿಮ ಬಂಗಾಳ, ಮರಾಠವಾಡ, ಸೌರಾಷ್ಟ್ರ, ಕಚ್, ಮಧ್ಯಪ್ರದೇಶ, ವಿದರ್ಭ, ಛತ್ತೀಸ್​ಗಢ, ಜಾರ್ಖಂಡ್, ಆಂಧ್ರಪ್ರದೇಶದ ಕರಾವಳಿ ತೀರ, ತೆಲಂಗಾಣ, ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡು, ತಮಿಳುನಾಡು, ಪುದುಚೆರಿ, ಕೇರಳ, ಮಾಹೆಯಲ್ಲಿ ಇಂದು ಅತ್ಯಂತ ಹೆಚ್ಚು ಮಳೆಯಾಗಲಿದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: Karnataka Rain: ಕೊಡಗು, ಮಲೆನಾಡಿನಲ್ಲಿ ಇನ್ನೂ 3 ದಿನ ಮಳೆ ಹೆಚ್ಚಳ; ಹಲವೆಡೆ ಇಂದು ಹಳದಿ ಅಲರ್ಟ್ ಘೋಷಣೆ

Cyclone Gulab ಅಬ್ಬರಿಸಿದ ಗುಲಾಬ್ ಚಂಡಮಾರುತ: ಆಂಧ್ರ ಪ್ರದೇಶದ ಇಬ್ಬರು ಮೀನುಗಾರರು ಸಾವು, ಒಬ್ಬ ನಾಪತ್ತೆ

(Karnataka weather Today Heavy to Heavy Rain Predicted in Karnataka Coastal Areas as Cyclone Gulab Hits Bangalore Rain)

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?