Karnataka Rain: ಬೆಂಗಳೂರು, ಕರಾವಳಿ, ಮಲೆನಾಡಿನಲ್ಲಿ ಇಂದಿನಿಂದ ಮಳೆ ತೀವ್ರತೆ ಹೆಚ್ಚಳ; ಈ ಜಿಲ್ಲೆಗಳಲ್ಲಿ ಹೈ ಅಲರ್ಟ್

Karnataka Weather Today | ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕರ್ನಾಟಕದಲ್ಲೂ ಸೆ. 12ರವರೆಗೆ ಮಳೆ ಜೋರಾಗಲಿದೆ.

Karnataka Rain: ಬೆಂಗಳೂರು, ಕರಾವಳಿ, ಮಲೆನಾಡಿನಲ್ಲಿ ಇಂದಿನಿಂದ ಮಳೆ ತೀವ್ರತೆ ಹೆಚ್ಚಳ; ಈ ಜಿಲ್ಲೆಗಳಲ್ಲಿ ಹೈ ಅಲರ್ಟ್
ಜಲಾಶಯದ ಹಿನ್ನೀರಿನಲ್ಲಿ ಮುಳುಗಡೆಯಾದ ಬ್ರೀಡ್ಜ್
Edited By:

Updated on: Sep 09, 2021 | 4:04 PM

Monsoon 2021 | ಕರ್ನಾಟಕದ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಕಳೆದೊಂದು ವಾರದಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದಲ್ಲಿ (Rain in Karnataka) ಭಾರೀ ಮಳೆಯಾಗುತ್ತಿದ್ದು, ಸೆ. 12ರವರೆಗೂ ವರುಣನ ಆರ್ಭಟ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್​ ಘೋಷಿಸಲಾಗಿದೆ.

ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕಲಬುರ್ಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್‌, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ಬೆಳಗಾವಿ, ಕೊಪ್ಪಳ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಇಂದು ಮಳೆ ಹೆಚ್ಚಾಗಲಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ನಿನ್ನೆ 168.4 ಮಿ.ಮೀ. ಮಳೆ ದಾಖಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ವಿಪರೀತ ಮಳೆಯಾಗುತ್ತಿರುವುದರಿಂದ ಶರಾವತಿ ನದಿ ನೀರಿನ ಮಟ್ಟ ಏರಿಕೆಯಾಗಿದ್ದು, ಲಿಂಗನಮಕ್ಕಿ ಜಲಾಶಯ ತುಂಬಲು ಕೆಲವೇ ಅಡಿಗಳು ಬಾಕಿ ಇವೆ.

ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯ ಜೊತೆಗೆ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಇಂದು ವಾಯುವ್ಯ ಭಾರತ ಮತ್ತು ದಕ್ಷಿಣ ಭಾರತದ ಕೆಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಯಾದಗಿರಿ ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಭಾರೀ ಮಳೆಗೆ ಸಂಪರ್ಕ ಸೇತುವೆ ಕೊಚ್ಚಿ ಹೋಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ, ಸಾಗರದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ಉಡುಪಿ, ಕುಂದಾಪುರ, ಬೈಂದೂರು, ಹುಲಿಕಲ್, ಹಾಲಾಡಿ, ಕಾರ್ಕಳ, ಮಣಿಪಾಲ ಮುಂತಾದೆಡೆಯೂ ಮಳೆ ಜೋರಾಗಿದೆ.

ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶ, ಹಿಮಾಚಲ ಪ್ರದೇಶ, ಉತ್ತರಾಖಂಡ, ಉತ್ತರ ಪಂಜಾಬ್, ಗೋವಾ, ಜಮ್ಮು ಮತ್ತು ಕಾಶ್ಮೀರ, ಮಹಾರಾಷ್ಟ್ರ, ಕೊಂಕಣ, ಗುಜರಾತ್, ರಾಜಸ್ಥಾನದಲ್ಲಿ ಸೆ. 12ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ದಕ್ಷಿಣ ಒರಿಸ್ಸಾ, ಕರಾವಳಿ ಆಂಧ್ರ ಪ್ರದೇಶ, ತೆಲಂಗಾಣ, ಹರಿಯಾಣ, ವಿದರ್ಭ ಮತ್ತು ದಕ್ಷಿಣ ಛತ್ತೀಸ್‌ಗಢದ ಕಡಿಮೆ ಒತ್ತಡದ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಒರಿಸ್ಸಾದಲ್ಲಿ ಸೆ. 11ರಂದು ಹಾಗೂ ಛತ್ತೀಸ್​ಗಢ, ತೆಲಂಗಾಣ, ಪಶ್ಚಿಮ ಬಂಗಾಳದಲ್ಲಿ ಸೆ. 12ರಂದು ವಿಪರೀತ ಮಳೆಯಾಗಲಿದೆ.

ಉತ್ತರಾಖಂಡ ಮತ್ತು ಮಹಾರಾಷ್ಟ್ರದ ಒಳನಾಡಿನಲ್ಲಿ ಇಂದು ವಿಪರೀತ ಮಳೆಯಾಗಲಿದೆ. ಲಡಾಖ್, ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ, ದೆಹಲಿ, ರಾಜಸ್ಥಾನ, ಮಧ್ಯಪ್ರದೇಶ, ತೆಲಂಗಾಣ, ಕರ್ನಾಟಕದ ಕರಾವಳಿ ಜಿಲ್ಲೆಗಳು, ಅಂಡಮಾನ್ ನಿಕೋಬಾರ್​ನಲ್ಲಿಯೂ ಮಳೆ ಹೆಚ್ಚಾಗಲಿದೆ. ಹಿಮಾಲಯ ಶ್ರೇಣಿಯಲ್ಲಿ ಇಂದಿನಿಂದ ಸೆ. 11ರವರೆಗೆ ಮಳೆ ಹೆಚ್ಚಾಗಲಿದೆ.

ಇದನ್ನೂ ಓದಿ: Karnataka Rain: ಕರಾವಳಿಯಲ್ಲಿ ಇಂದಿನಿಂದ ವಿಪರೀತ ಮಳೆ; ಕರ್ನಾಟಕದ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

Karnataka Rain: ಕರ್ನಾಟಕದಲ್ಲಿ ನಿಲ್ಲದ ವರುಣನ ಆರ್ಭಟ; ಸೆ. 5ರವರೆಗೆ ಕರಾವಳಿಯಲ್ಲಿ ವ್ಯಾಪಕ ಮಳೆ

(Karnataka Weather Today: High Alert Announced in Coastal Karnataka Rain Heavy Rainfall Continues till September 12)

Published On - 6:10 am, Thu, 9 September 21