
Karnataka Rain: ಕರ್ನಾಟಕದಲ್ಲಿ ಹಲವೆಡೆ ನವೆಂಬರ್ 1ರವರೆಗೂ ಮಳೆ ಮುಂದುವರೆಯಲಿದೆ. ರಾಜ್ಯದ ದಕ್ಷಿಣ ಒಳನಾಡು, ರಾವಳಿ, ಮಲೆನಾಡಿನ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆ ಹಾಗೂ ಗುಡುಗು, ಮಿಂಚು ಉಂಟಾಗುವ ಸಾಧ್ಯತೆಯಿದೆ. ಇಂದಿನಿಂದ ನವೆಂಬರ್ 1ರವರೆಗೆ ದಕ್ಷಿಣ ಭಾರತದ ಹಲವಾರು ರಾಜ್ಯಗಳಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ. ತಮಿಳುನಾಡು, ಕೇರಳ, ಪುದುಚೆರಿ, ಆಂಧ್ರಪ್ರದೇಶ ಮತ್ತು ಕರ್ನಾಟಕದಲ್ಲಿ ನವೆಂಬರ್ 1 ರವರೆಗೆ ಗುಡುಗು ಮತ್ತು ಮಿಂಚು ಸಂಭವಿಸಬಹುದು.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಇಂದಿನಿಂದ ನವೆಂಬರ್ 1ರವರೆಗೂ ಕರ್ನಾಟಕದಲ್ಲಿ ಮಳೆರಾಯ ಆರ್ಭಟಿಸಲಿದ್ದಾನೆ. ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗ ಸೇರಿದಂತೆ 14 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 3 ದಿನ ಮಳೆಯಾಗುವ ಸೂಚನೆಯಿದೆ. ಈ ಹಿನ್ನೆಲೆಯಲ್ಲಿ ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಕೋಲಾರ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ದಾವಣಗೆರೆ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದೆ.
ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಮತ್ತು ಅ. 31ರಂದು ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಇನ್ನು 3 ದಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಶಾನ್ಯ ಮುಂಗಾರು ಆಗಮನದಿಂದ ಕರ್ನಾಟಕದ ದಕ್ಷಿಣ ಭಾಗದಲ್ಲಿ ಇಂದಿನಿಂದ ನ. 1ರವರೆಗೆ ಮಳೆ ಹೆಚ್ಚಾಗಲಿದೆ.
ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಇಂದಿನಿಂದ ಗುಡುಗು, ಸಿಡಿಲು ಹೆಚ್ಚಾಗಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗಲಿದೆ. ಮುಂದಿನ ಎರಡು ದಿನಗಳವರೆಗೆ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಕರ್ನಾಟಕ, ಕೇರಳ, ತಮಿಳುನಾಡು, ಪುದುಚೆರಿ, ಆಂಧ್ರಪ್ರದೇಶದಲ್ಲಿ ಇಂದಿನಿಂದ ನವೆಂಬರ್ 1ರವರರೆಗೂ ಭಾರೀ ಮಳೆಯಾಗಲಿದೆ.
ತಮಿಳುನಾಡಿನ ಕೆಲವು ಸ್ಥಳಗಳಲ್ಲಿ ಇಂದಿನಿಂದ 3 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 1ರವರೆಗೆ ಕೇರಳ ಮತ್ತು ಮಾಹೆಯಲ್ಲಿ ವ್ಯಾಪಕ ಮಳೆಯಾಗುತ್ತದೆ. ನಾಳೆಯಿಂದ ಆಂಧ್ರಪ್ರದೇಶದ ಕರಾವಳಿಯಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಇಂದು ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆ ಜಾಸ್ತಿಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನಾಳೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಇಂದು ರಾಯಲಸೀಮೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕೇರಳದ ಹಲವು ಭಾಗಗಳಲ್ಲಿ ಇಂದು ವ್ಯಾಪಕ ಮಳೆಯಾಗಬಹುದು, ತಗ್ಗು ಪ್ರದೇಶಗಳಲ್ಲಿ ಜಲಾವೃತಗೊಂಡು ರಸ್ತೆಗಳು ಹಾನಿಗೊಳಗಾಗಬಹುದು.
ಕೇರಳದ ಐದು ಜಿಲ್ಲೆಗಳಾದ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಅದು ಹೇಳಿದೆ. IMD ತ್ರಿಶೂರ್, ಪಾಲಕ್ಕಾಡ್, ಕೋಝಿಕ್ಕೋಡ್, ಮಲಪ್ಪುರಂ ಮತ್ತು ವಯನಾಡ್ ಜಿಲ್ಲೆಗಳಿಗೆ ‘ಹಳದಿ’ ಅಲರ್ಟ್ ನೀಡಿದೆ. IMD ಹವಾಮಾನದ ಪ್ರಕಾರ, ಶ್ರೀಲಂಕಾ ಕರಾವಳಿಯ ದಕ್ಷಿಣ-ಪಶ್ಚಿಮ ಬಂಗಾಳ ಕೊಲ್ಲಿಯ ಮೇಲೆ ಕಡಿಮೆ ಒತ್ತಡದ ಪ್ರದೇಶ ಮತ್ತು ಅದಕ್ಕೆ ಸಂಬಂಧಿಸಿದ ಚಂಡಮಾರುತದ ಪರಿಚಲನೆಯಿಂದಾಗಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಇಡುಕ್ಕಿ ಸೇರಿದಂತೆ ಕೇರಳದ 12 ಜಿಲ್ಲೆಗಳಿಗೆ ಹವಾಮಾನ ಇಲಾಖೆರ ಹಳದಿ ಅಲರ್ಟ್ ಘೋಷಿಸಿದೆ. ರಾಜ್ಯದ ದಕ್ಷಿಣ ಜಿಲ್ಲೆಗಳ ಹಲವಾರು ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ ಮತ್ತು ತಗ್ಗು ಪ್ರದೇಶಗಳಲ್ಲಿ ಜಲಾವೃತವಾಗಿದೆ. ಮುಲ್ಲಪೆರಿಯಾರ್ ನೀರನ್ನು ಇಡುಕ್ಕಿ ಜಲಾಶಯಕ್ಕೆ ಬಿಡುಗಡೆ ಮಾಡಿದ ನಂತರ ಸುಮಾರು 468 ಕುಟುಂಬಗಳನ್ನು ಇಡುಕ್ಕಿಯ ಆರು ಗ್ರಾಮಗಳಿಗೆ ಸ್ಥಳಾಂತರಿಸಲಾಗಿದೆ. ಕೇರಳ, ಮಾಹೆ, ಕರಾವಳಿ, ಕರ್ನಾಟಕದ ದಕ್ಷಿಣ ಒಳನಾಡು, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ನಲ್ಲಿ ಇಂದು ಮಳೆಯಾಗಲಿದೆ. ಇಂದು ಆಂಧ್ರಪ್ರದೇಶದ ಕರಾವಳಿ ಮತ್ತು ರಾಯಲಸೀಮಾದಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗಿದೆ.
Published On - 7:09 am, Sat, 30 October 21