Karnataka Weather Today: ಇಂದಿನಿಂದ 4 ದಿನ ಕರ್ನಾಟಕದಲ್ಲಿ ಚಳಿ ಹೆಚ್ಚಳ; ಈ ರಾಜ್ಯಗಳಲ್ಲಿ ತುಂತುರು ಮಳೆ

| Updated By: ಸುಷ್ಮಾ ಚಕ್ರೆ

Updated on: Dec 26, 2021 | 6:08 AM

Weather Forecast: ಮಧ್ಯಪ್ರದೇಶ, ಛತ್ತೀಸ್‌ಗಢ, ವಿದರ್ಭ, ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಸೋಮವಾರದಿಂದ ಬುಧವಾರದವರೆಗೆ ಮಳೆಯಾಗುವ ಸಾಧ್ಯತೆಯಿದೆ. ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ಇಂದಿನಿಂದ ಡಿ. 29ರ ಅವಧಿಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ

Karnataka Weather Today: ಇಂದಿನಿಂದ 4 ದಿನ ಕರ್ನಾಟಕದಲ್ಲಿ ಚಳಿ ಹೆಚ್ಚಳ; ಈ ರಾಜ್ಯಗಳಲ್ಲಿ ತುಂತುರು ಮಳೆ
ಬೆಂಗಳೂರು ಮಳೆ
Follow us on

ಬೆಂಗಳೂರು: ಹೊಸ ವರ್ಷದ ಆಗಮನ ಸಮೀಪಿಸುತ್ತಿದ್ದರೂ ಚಳಿಯಂತೂ ಕಡಿಮೆಯಾಗಿಲ್ಲ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಚಳಿಗೆ ಕರ್ನಾಟಕದ ಜನರು ತತ್ತರಿಸಿದ್ದಾರೆ. ಮಲೆನಾಡು, ಉತ್ತರ ಕರ್ನಾಟಕ, ಬೆಂಗಳೂರಿನಲ್ಲಿ ಚಳಿ ಮುಂದುವರೆದಿದ್ದು, ಕರಾವಳಿ ಜಿಲ್ಲೆಗಳಲ್ಲಿ ಚಳಿ ಕೊಂಚ ಕಡಿಮೆಯಾಗಿದೆ. ಬೀದರ್, ವಿಜಯಪುರ, ಬಾಗಲಕೋಟೆ, ಕಲಬುರ್ಗಿ, ಧಾರವಾಡ, ಹುಬ್ಬಳ್ಳಿ ಮುಂತಾದ ಜಿಲ್ಲೆಗಳಲ್ಲಿ ಈಗಾಗಲೇ ಚಳಿ ಹೆಚ್ಚಾಗಿದೆ. ಕೊಡಗು, ಶಿವಮೊಗ್ಗ, ಮೈಸೂರು, ಹಾಸನ, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಚಳಿ ಹೆಚ್ಚಾಗಿದೆ. ಮುಂಬರುವ ಒಂದು ವಾರ ರಾಜ್ಯಾದ್ಯಂತ ಚಳಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಡಿಸೆಂಬರ್ 27 ರಿಂದ 29ರವರೆಗೆ ಕರ್ನಾಟಕದಲ್ಲಿ ಅಧಿಕ ತೇವಾಂಶ ಮತ್ತು ಚಳಿಯ ವಾತಾವರಣ ದಾಖಲಾಗಲಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಮಧ್ಯಪ್ರದೇಶ, ಛತ್ತೀಸ್‌ಗಢ, ವಿದರ್ಭ, ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಸೋಮವಾರದಿಂದ ಬುಧವಾರದವರೆಗೆ ಮಳೆಯಾಗುವ ಸಾಧ್ಯತೆಯಿದೆ. ಪೂರ್ವ ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ವಿದರ್ಭದಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ವಿಶೇಷವಾಗಿ ಡಿಸೆಂಬರ್ 28ರಂದು ಸಿಡಿಲು ಮತ್ತು ಆಲಿಕಲ್ಲು ಸಹಿತ ಮಳೆಯಾಗಬಹುದು.

ಡಿಸೆಂಬರ್ 28ಕ್ಕೆ ವಿದರ್ಭ, ಛತ್ತೀಸ್‌ಗಢ ಮತ್ತು ಪೂರ್ವ ಮಧ್ಯಪ್ರದೇಶದಲ್ಲೂ ಮಳೆಯಾಗುವ ನಿರೀಕ್ಷೆಯಿದೆ. ಬಿಹಾರ, ಇಂದೋರ್ ಮತ್ತು ಬಿಲಾಸ್‌ಪುರದಂತಹ ಸ್ಥಳಗಳಲ್ಲಿ ಸೋಮವಾರದಿಂದ ಬುಧವಾರದವರೆಗೆ ಗುಡುಗು ಸಹಿತ ಮಳೆಯಾಗಲಿದೆ. ಡಿಸೆಂಬರ್ 29ರವರೆಗೆ ಪಶ್ಚಿಮ ಹಿಮಾಲಯದ ಪ್ರದೇಶದಲ್ಲಿ ಮಳೆ ಮತ್ತು ಹಿಮಪಾತ ಉಂಟಾಗಲಿದೆ. ಇಂದು ಈ ಪ್ರದೇಶದಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗಲಿದೆ.

ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ಇಂದಿನಿಂದ ಡಿ. 29ರ ಅವಧಿಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ. ಡಿ. 27ರಿಂದ 28ರ ಅವಧಿಯಲ್ಲಿ ರಾಜಸ್ಥಾನ ಮತ್ತು ಉತ್ತರ ಪ್ರದೇಶದಲ್ಲಿ ಮಳೆ ಸುರಿಯಲಿದೆ. ಇಂದಿನಿಂದ ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್ ಮತ್ತು ಮಣಿಪುರದಲ್ಲಿ ಆಲಿಕಲ್ಲು ಮಳೆಯಾಗಲಿದೆ. ಮುಂದಿನ 4 ದಿನಗಳಲ್ಲಿ ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ.

ಚಂಡಮಾರುತವು ಇಂದಿನಿಂದ ವಾಯುವ್ಯ ಭಾರತದ ಮೇಲೆ ಮತ್ತು ಡಿಸೆಂಬರ್ 27ರಿಂದ ಮಧ್ಯ ಭಾರತದ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ ಎಂದು IMD ಹೇಳಿದೆ. ಮಧ್ಯಪ್ರದೇಶ, ಛತ್ತೀಸ್‌ಗಢ, ವಿದರ್ಭ, ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಡಿಸೆಂಬರ್ 27ರಿಂದ 29ರವರೆಗೆ ಪ್ರತ್ಯೇಕ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Dams Water Level: ತಗ್ಗಿದ ಮಳೆ, ಹೆಚ್ಚಿದ ಚಳಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Winter Health Tips: ಚಳಿಗಾಲದಲ್ಲಿ ಈ ಆಹಾರಗಳ ಸೇವನೆಯಿಂದ ಸೈನಸ್​ ಹೆಚ್ಚಾಗಬಹುದು: ಎಚ್ಚರಿಕೆಯಿಂದಿರಿ