AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Today: ಕರ್ನಾಟಕದಲ್ಲಿ ತಗ್ಗಿದ ಚಳಿ; ದೆಹಲಿಯಲ್ಲಿ ಮಳೆಯಿಂದ ಹಳದಿ ಅಲರ್ಟ್ ಘೋಷಣೆ

Weather Forecast: ಜನವರಿ 7ರಂದು ನೈಋತ್ಯ ರಾಜಸ್ಥಾನದಲ್ಲಿ ಚಂಡಮಾರುತ ರೂಪುಗೊಳ್ಳುವ ನಿರೀಕ್ಷೆಯಿದೆ. ಜನವರಿ 7ರಿಂದ 9ರವರೆಗೆ ವಾಯುವ್ಯ ಭಾರತದಲ್ಲಿ ಚಳಿ ಹೆಚ್ಚಾಗಲಿದೆ.

Karnataka Weather Today: ಕರ್ನಾಟಕದಲ್ಲಿ ತಗ್ಗಿದ ಚಳಿ; ದೆಹಲಿಯಲ್ಲಿ ಮಳೆಯಿಂದ ಹಳದಿ ಅಲರ್ಟ್ ಘೋಷಣೆ
ಆಂಧ್ರ ಮಳೆಯ ಚಿತ್ರಣ
TV9 Web
| Edited By: |

Updated on: Jan 06, 2022 | 6:03 AM

Share

ಬೆಂಗಳೂರು: ಹೊಸ ವರ್ಷ ಶುರುವಾದಾಗಿನಿಂದ ಕರ್ನಾಟಕದಲ್ಲಿ ಚಳಿ ಕೊಂಚ ಕಡಿಮೆಯಾಗುತ್ತಿದೆ. ಮೇ ತಿಂಗಳಿಂದ ನವೆಂಬರ್ ಅಂತ್ಯದವರೆಗೂ ಮಳೆ ಇತ್ತು. ಬಳಿಕ ಡಿಸೆಂಬರ್ ತಿಂಗಳಲ್ಲಿ ಮಳೆ ಸಂಪೂರ್ಣ ಕಡಿಮೆಯಾಗಿ ವಿಪರೀತ ಚಳಿ ಶುರುವಾಗಿತ್ತು. ಡಿಸೆಂಬರ್ ಕೊನೆಯ ವಾರದಲ್ಲಿ ರಾಜ್ಯಾದ್ಯಂತ ಅನೇಕ ಜಿಲ್ಲೆಗಳಲ್ಲಿ ಮತ್ತೆ ಮಳೆ ಶುರುವಾಗಿತ್ತು. ಕಳೆದ ವಾರದಿಂದ ಬೆಂಗಳೂರು, ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಮಳೆ ಕಡಿಮೆಯಾಗಿದೆ. ಉತ್ತರ ಕರ್ನಾಟಕ, ಮಲೆನಾಡು, ಬೆಂಗಳೂರು, ದಕ್ಷಿಣ ಒಳನಾಡಿನಲ್ಲಿ ಹೆಚ್ಚಾಗಿದ್ದ ಚಳಿಯೂ ಇದೀಗ ತಗ್ಗುತ್ತಿದೆ. ಆದರೆ, ದೆಹಲಿ, ನೊಯ್ಡಾ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಮಳೆ ಹೆಚ್ಚಾಗಿದೆ.

ಇಂದು ಪಶ್ಚಿಮ ಬಂಗಾಳದ ಡಾರ್ಜಲಿಂಗ್, ಕಾಲಿಂಪಾಂಗ್, ಪುರುಲಿಯಾ, ಬಂಕುರಾ, ಪಶ್ಚಿಮ-ಮಿಡ್ನಾಪುರ ಮತ್ತು ಜಾರ್‌ಗ್ರಾಮ್ ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ. ಇಂದಿನಿಂದ 3 ದಿನ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಈ ಮುನ್ಸೂಚನೆ ನೀಡಿದೆ. ದೆಹಲಿಯಲ್ಲಿ ಇಂದಿನಿಂದ ಜನವರಿ 9ರವರೆಗೆ ಮಳೆಯಾಗುತ್ತದೆ. ಇಂದಿನಿಂದ ಜನವರಿ 8ರ ಅವಧಿಯಲ್ಲಿ ಹೆಚ್ಚಿನ ಗಾಳಿ ಮತ್ತು ಮಳೆಯ ಸಾಧ್ಯತೆಯಿದೆ. ಜಮ್ಮು-ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಇಂದು ಭಾರೀ ಮಳೆ ಅಥವಾ ಹಿಮಪಾತ ಸಂಭವಿಸುತ್ತದೆ. ಇಂದಿನಿಂದ ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ರಾಜಸ್ಥಾನ, ಪಶ್ಚಿಮ ಉತ್ತರ ಪ್ರದೇಶ ಮತ್ತು ಪಶ್ಚಿಮ ಮಧ್ಯಪ್ರದೇಶಗಳಲ್ಲಿ ಸಾಕಷ್ಟು ಮಳೆಯಾಗುವ ಸಾಧ್ಯತೆಯಿದೆ.

ಡಿಸೆಂಬರ್‌ನಲ್ಲಿ ಉತ್ತರ ಮತ್ತು ವಾಯುವ್ಯ ಭಾರತದ ಕೆಲವು ಭಾಗಗಳಲ್ಲಿ ಇಂದು ಚಳಿ ಇರಲಿದೆ. ರಾಜಸ್ಥಾನದ ಕೆಲವು ಸ್ಥಳಗಳಲ್ಲಿ ಮತ್ತು ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ಚಳಿ ಹೆಚ್ಚಾಗಲಿದೆ. ಮಹಾರಾಷ್ಟ್ರದ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ, ಗುಡುಗು ಸಹಿತ ಮಿಂಚಿನ ಮಳೆಯಾಗಿತ್ತು. ಮಧ್ಯಪ್ರದೇಶ, ಛತ್ತೀಸ್‌ಗಢ, ಉತ್ತರ ಪ್ರದೇಶ, ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಇಂದು ಹಿಮಪಾತವಾಗಲಿದೆ.

ಜನವರಿ 7ರಂದು ನೈಋತ್ಯ ರಾಜಸ್ಥಾನದಲ್ಲಿ ಚಂಡಮಾರುತ ರೂಪುಗೊಳ್ಳುವ ನಿರೀಕ್ಷೆಯಿದೆ. ಜನವರಿ 7ರಿಂದ 9ರವರೆಗೆ ವಾಯುವ್ಯ ಭಾರತದಲ್ಲಿ ಚಳಿ ಹೆಚ್ಚಾಗಲಿದೆ. ಶುಕ್ರವಾರದಿಂದ ಭಾನುವಾರದವರೆಗೆ ಪಶ್ಚಿಮ ಹಿಮಾಲಯದ ಪ್ರದೇಶದಲ್ಲಿ ಸಾಕಷ್ಟು ವ್ಯಾಪಕವಾದ ಮಳೆ ಅಥವಾ ಹಿಮದ ಸಾಧ್ಯತೆಯಿದೆ. ಮುಂದಿನ ವಾರ ಮಳೆಯ ತೀವ್ರತೆಯು ಕಡಿಮೆಯಾಗಬಹುದು. ಜಮ್ಮು, ಕಾಶ್ಮೀರ, ಲಡಾಖ್, ಗಿಲ್ಗಿಟ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಬಾಲ್ಟಿಸ್ತಾನ್ ಮತ್ತು ಮುಜಫರಾಬಾದ್ ಈ ವಾರಾಂತ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಜನವರಿ 7ರಂದು ಪಂಜಾಬ್, ಪೂರ್ವ ಉತ್ತರ ಪ್ರದೇಶ, ಪಶ್ಚಿಮ ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಆಲಿಕಲ್ಲು ಮಳೆ ಬೀಳಲಿದೆ ಎಂದು IMD ಮುನ್ಸೂಚನೆ ನೀಡಿದೆ. ಶುಕ್ರವಾರ ಮಧ್ಯಾಹ್ನದಿಂದ ದೆಹಲಿ, ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶ ಸೇರಿದಂತೆ ಉತ್ತರ ಬಯಲು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಜನವರಿ 7ಕ್ಕೆ ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ ಮತ್ತು ರಾಜಸ್ಥಾನದಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ.

ಇದನ್ನೂ ಓದಿ: Karnataka Weather Today: ಬೆಂಗಳೂರಿನಲ್ಲಿ ವಿಪರೀತ ಚಳಿ; ದೆಹಲಿ, ಕಾಶ್ಮೀರ, ಲಡಾಖ್​ನಲ್ಲಿ 4 ದಿನ ಭಾರೀ ಮಳೆ

Karnataka Dam Water Level: ತಗ್ಗಿದ ಮಳೆ ಆರ್ಭಟ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್