AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: ಕರಾವಳಿ ಸೇರಿ ಕರ್ನಾಟಕದ ಹಲವೆಡೆ ಇನ್ನೆರಡು ದಿನ ಮಳೆ, ಉತ್ತರ ಒಳನಾಡಿನಲ್ಲಿ ಭಾರೀ ಗಾಳಿ

ಕರ್ನಾಟಕ ಹವಾಮಾನ ಜುಲೈ 22: ಕರ್ನಾಟಕದ ಕರಾವಳಿ ಸೇರಿದಂತೆ ವಿವಿಧ ಕಡೆಗಳಲ್ಲಿ ಇನ್ನೆರಡು ದಿನ ಮಳೆಯ ವಾತಾವರಣ ಮುಂದುವರಿಯಲಿದೆ. ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ, ಉತ್ತರ ಒಳನಾಡಿನಲ್ಲಿ 40-50 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather Forecast: ಕರಾವಳಿ ಸೇರಿ ಕರ್ನಾಟಕದ ಹಲವೆಡೆ ಇನ್ನೆರಡು ದಿನ ಮಳೆ, ಉತ್ತರ ಒಳನಾಡಿನಲ್ಲಿ ಭಾರೀ ಗಾಳಿ
ಮಳೆ (ಸಾಂದರ್ಭಿಕ ಚಿತ್ರ)Image Credit source: tv9
ಗಣಪತಿ ಶರ್ಮಾ
|

Updated on: Jul 22, 2026 | 6:57 AM

Share

ಮುಖ್ಯಾಂಶಗಳು

  • ಉತ್ತರ ಒಳನಾಡಿನಲ್ಲಿ ಬಲವಾದ ಗಾಳಿಯ ಮುನ್ಸೂಚನೆ
  • ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಕೆ
  • ಬೆಂಗಳೂರು ಸೇರಿ ದಕ್ಷಿಣ ಒಳನಾಡಿಗೂ ಮಳೆ ಮುನ್ಸೂಚನೆ

ಬೆಂಗಳೂರು, ಜುಲೈ 22: ಕರ್ನಾಟಕದ ಬಹುತೇಕ ಭಾಗಗಳಲ್ಲಿ ಇನ್ನೆರಡು ದಿನ ಮಳೆಯ ವಾತಾವರಣ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಕೇಂದ್ರ ಮುನ್ಸೂಚನೆ (Weather Forecast) ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದ್ದರೆ, ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ 40ರಿಂದ 50 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲೂ ಕೆಲವೆಡೆ ಸಾಧಾರಣ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ. ವೇಗದ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ

ಇಂದು (ಜುಲೈ 22) ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಅನೇಕ ಕಡೆ ಮಳೆಯೊಂದಿಗೆ ಬಲವಾದ ಗಾಳಿ ಬೀಸಲಿದೆ.

ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೂ ಮಳೆ ಅಲರ್ಟ್

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ.

ಜುಲೈ 23ರಂದು ಕೂಡ ಕರಾವಳಿ ಜಿಲ್ಲೆಗಳಲ್ಲಿ ಅನೇಕ ಕಡೆ ಮಳೆ ಮುಂದುವರಿಯಲಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ.

ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?

ಮಂಗಳವಾರಕ್ಕೆ ಕೊನೆಗೊಂಡಂತೆ 24 ಗಂಟೆಗಳ ಅವಧಿಯಲ್ಲಿ ಉತ್ತರ ಒಳನಾಡಿನಲ್ಲಿ ಮುಂಗಾರು ಚುರುಕಾಗಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆ ಸಾಮಾನ್ಯವಾಗಿತ್ತು. ಉತ್ತರ ಕನ್ನಡದ ಗೇರುಸೊಪ್ಪದಲ್ಲಿ ಭಾರಿ ಮಳೆ (16 ಸೆಂ.ಮೀ.) ಆಗಿದೆ. ಜಗಲ್‌ಬೆಟ್​​ನಲ್ಲೂ 14 ಸೆಂ.ಮೀ. ಮಳೆಯಾಗಿದೆ. ಉಳಿದಂತೆ ಅಗುಂಬೆಯಲ್ಲಿ (ಶಿವಮೊಗ್ಗ) 8 ಸೆಂ.ಮೀ., ಕೊಲ್ಲೂರು (ಉಡುಪಿ) 8 ಸೆಂ.ಮೀ., ಬೆಳ್ತಂಗಡಿ (ದಕ್ಷಿಣ ಕನ್ನಡ) 7 ಸೆಂ.ಮೀ., ಮೂಡುಬಿದಿರೆ (ದಕ್ಷಿಣ ಕನ್ನಡ) 7 ಸೆಂ.ಮೀ., ಉಡುಪಿಯಲ್ಲಿ 7 ಸೆಂ.ಮೀ. ಮಳೆಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ