AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: ಕರಾವಳಿಯಲ್ಲಿ ಭಾರಿ ಮಳೆ ಎಚ್ಚರಿಕೆ; ಉತ್ತರ ಕನ್ನಡಕ್ಕೆ ಆರೆಂಜ್ ಅಲರ್ಟ್

ಕರ್ನಾಟಕ ಹವಾಮಾನ ಮುನ್ಸೂಚನೆ ಜುಲೈ 24: ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಭಾರೀ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಶಿರಸಿ ಹಾಗೂ ಸಿದ್ದಾಪುರ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ.

Karnataka Weather Forecast: ಕರಾವಳಿಯಲ್ಲಿ ಭಾರಿ ಮಳೆ ಎಚ್ಚರಿಕೆ; ಉತ್ತರ ಕನ್ನಡಕ್ಕೆ ಆರೆಂಜ್ ಅಲರ್ಟ್
ಸಾಂದರ್ಭಿಕ ಚಿತ್ರImage Credit source: tv9
ಗಣಪತಿ ಶರ್ಮಾ
|

Updated on: Jul 24, 2026 | 6:45 AM

Share

ಮುಖ್ಯಾಂಶಗಳು

  • ಉತ್ತರ ಕನ್ನಡ ಜಿಲ್ಲೆಗೆ ಇಂದು ಆರೆಂಜ್ ಅಲರ್ಟ್
  • ಶಿರಸಿ, ಸಿದ್ದಾಪುರ ಶಾಲೆಗಳಿಗೆ ರಜೆ ಘೋಷಣೆ
  • ಕರಾವಳಿ, ಮಲೆನಾಡಿನಲ್ಲಿ ಮಳೆ ಮುಂದುವರಿಕೆ ಸಾಧ್ಯತೆ

ಬೆಂಗಳೂರು, ಜುಲೈ 24: ಕರ್ನಾಟಕದಲ್ಲಿ ಮುಂಗಾರು (Monsoon Rain) ಚುರುಕುಗೊಂಡಿದ್ದು, ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ (Weather Forecast) ನೀಡಿದೆ. ಅದರಲ್ಲೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು (ಜುಲೈ 24) ಒಂದೆರಡು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಶಿರಸಿ ಮತ್ತು ಸಿದ್ದಾಪುರ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ರಜೆ ಘೋಷಿಸಿದ್ದಾರೆ.

ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ ಸಾಧ್ಯತೆ

ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದೆರಡು ಕಡೆ ಭಾರೀ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗಲಿದೆ.

ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ ಮುನ್ಸೂಚನೆ

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳ ಕೆಲವೆಡೆ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಹಾವೇರಿ, ಕೊಪ್ಪಳ ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಮಳೆಯ ಸಾಧ್ಯತೆ ವ್ಯಕ್ತವಾಗಿದೆ.

ಬೆಂಳೂರಿನಲ್ಲೂ ಮಳೆ ಸಾಧ್ಯತೆ

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಮೈಸೂರು ಜಿಲ್ಲೆಗಳ ಕೆಲವೆಡೆ ಗಂಟೆಗೆ 40-50 ಕಿ.ಮೀ. ವೇಗದ ಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಮಂಡ್ಯ, ಹಾಸನ, ಚಾಮರಾಜನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲೂ ಸಾಧಾರಣದಿಂದ ಮಧ್ಯಮ ಮಳೆಯಾಗಲಿದೆ.

ಜುಲೈ 25ರಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಬಹುತೇಕ ಕಡೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

ಎಲ್ಲೆಲ್ಲಿ ಹೆಚ್ಚು ಮಳೆಯಾಗಿದೆ? ಎಷ್ಟು?

ಗುರುವಾರ ಮಧ್ಯಾಹ್ನಕ್ಕೆ ಕೊನೆಗೊಂಡಂತೆ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಹೆಚ್ಚು ಮಳೆ ದಾಖಲಾಗಿರುವ ಪ್ರದೇಶಗಳು ಇಂತಿವೆ:

  • ಬ್ರಹ್ಮಾವರ (ಉಡುಪಿ ಜಿಲ್ಲೆ) – 7 ಸೆಂ.ಮೀ.
  • ಜಗಲ್​​ಬೆಟ್ (ಉತ್ತರ ಕನ್ನಡ ಜಿಲ್ಲೆ) – 7 ಸೆಂ.ಮೀ.
  • ಜೋಯಿಡಾ (ಉತ್ತರ ಕನ್ನಡ ಜಿಲ್ಲೆ) – 7 ಸೆಂ.ಮೀ.
  • ಉಪ್ಪಿನಂಗಡಿ (ದಕ್ಷಿಣ ಕನ್ನಡ ಜಿಲ್ಲೆ) – 7 ಸೆಂ.ಮೀ.
  • ಲೋಂಡಾ (ಬೆಳಗಾವಿ ಜಿಲ್ಲೆ) – 7 ಸೆಂ.ಮೀ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ