AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಶಿವಮೊಗ್ಗ, ಹಾಸನ, ಮೈಸೂರು ಸೇರಿ ಕರ್ನಾಟಕದ ಬಹುತೇಕ ಕಡೆ ಹೆಚ್ಚು ಮಳೆ

ಕರ್ನಾಟಕದ ವಿವಿಧೆಡೆ ನಾಳೆಯಿಂದ ಮಳೆ ಹೆಚ್ಚಾಗುವ ಸಾಧ್ಯತೆ ಇದೆ, ಶಿವಮೊಗ್ಗ, ಮೈಸೂರು, ಹಾಸನ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rains: ಶಿವಮೊಗ್ಗ, ಹಾಸನ, ಮೈಸೂರು ಸೇರಿ ಕರ್ನಾಟಕದ ಬಹುತೇಕ ಕಡೆ ಹೆಚ್ಚು ಮಳೆ
ಮಳೆ
ನಯನಾ ರಾಜೀವ್
|

Updated on: Jun 21, 2024 | 7:52 AM

Share

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ,ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನುಳಿದಂತೆ ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಕೊಟ್ಟಿಗೆಹಾರ, ಕೋಟ, ಕುಂದಾಪುರ, ಗೇರುಸೊಪ್ಪ, ಧರ್ಮಸ್ಥಳ, ಆಗುಂಬೆ, ಕಮ್ಮರಡಿ, ಕಾರ್ಕಳ, ಕೊಲ್ಲೂರು, ಸಿದ್ದಾಪುರ, ಕಾರವಾರ, ಹೊನ್ನಾವರ, ಬೆಳ್ತಂಗಡಿ, ಮೂಡಿಗೆರೆ, ಶೃಂಗೇರಿ, ಕೃಷ್ಣರಾಜಸಾಗರ, ಭಾಗಮಂಡಲ, ಪಣಂಬೂರು, ಮಾಣಿ, ಮುಲ್ಕಿ, ಉಪ್ಪಿನಂಗಡಿ, ಕೊಪ್ಪ, ಜಯಪುರ, ನಾಪೋಕ್ಲು, ಕಳಸ, ಅಜ್ಜಂಪುರ, ಪೊನ್ನಂಪೇಟೆಯಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ 7 ಜಿಲ್ಲೆಗಳಿಗೆ ರೆಡ್​ ಅಲರ್ಟ್​, ಧಾರಾಕಾರ ಮಳೆಯ ಮುನ್ಸೂಚನೆ

ಬೆಂಗಳೂರಿನಲ್ಲಿ ಶುಭ್ರ ಆಕಾಶವಿದ್ದು, ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣ ನಿರ್ಮಾಣವಾಗಲಿದ್ದು, ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 31.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 33.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 31.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಚಿಕ್ಕಮಗಳೂರಿನಲ್ಲಿ 27.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?