Karnataka Weather Today: ಕರಾವಳಿ, ಮಲೆನಾಡಿನಲ್ಲಿ ಇಂದು ತುಂತುರು ಮಳೆ; ಕೇರಳ, ತಮಿಳುನಾಡಿನಲ್ಲಿ ವರುಣನ ಆರ್ಭಟ

Rain Updates: ಇಂದು ಕೂಡ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡದಲ್ಲಿ ಮಳೆ ಮುಂದುವರೆಯುವ ನಿರೀಕ್ಷೆಯಿದೆ. ಇಂದು (ಶುಕ್ರವಾರ) ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

Karnataka Weather Today: ಕರಾವಳಿ, ಮಲೆನಾಡಿನಲ್ಲಿ ಇಂದು ತುಂತುರು ಮಳೆ; ಕೇರಳ, ತಮಿಳುನಾಡಿನಲ್ಲಿ ವರುಣನ ಆರ್ಭಟ
ಮಳೆ
Follow us
| Updated By: ಸುಷ್ಮಾ ಚಕ್ರೆ

Updated on: Mar 11, 2022 | 5:56 AM

ಬೆಂಗಳೂರು: ಕರ್ನಾಟಕದ ಹಲವು ಪ್ರದೇಶಗಳಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆಯಾಗುತ್ತಿದೆ. ಕರ್ನಾಟಕದಲ್ಲಿ ಉರಿ ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ವರುಣದೇವ (Rainfall) ತಂಪೆರೆಯುತ್ತಿದ್ದಾನೆ. ಈ ವರ್ಷದ ಮೊದಲ ಮಳೆಗೆ ದಕ್ಷಿಣ ಕನ್ನಡ ತಂಪಾಗಿದ್ದು, ಮಂಗಳೂರಿನ ಹಲವೆಡೆ ನೀರು ನಿಂತು ಅವಾಂತರ ಸೃಷ್ಟಿಯಾಯಿತು. ಅಂಗಡಿ, ಮನೆಗಳಿಗೂ ನುಗ್ಗಿದ ನೀರಿನಿಂದ ಜನರು ಕಂಗಾಲಾದರು. ಇಂದು ಕೂಡ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡದಲ್ಲಿ ಮಳೆ ಮುಂದುವರೆಯುವ ನಿರೀಕ್ಷೆಯಿದೆ. ಇಂದು (ಶುಕ್ರವಾರ) ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (IMD) ನೀಡಿದೆ.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಲಕ್ಷದ್ವೀಪದಲ್ಲಿ ಚದುರಿದ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ರಾಜಸ್ಥಾನ, ಮಹಾರಾಷ್ಟ್ರ, ಮಧ್ಯಪ್ರದೇಶ, ಕೇರಳ, ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಕೂಡ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ತಮಿಳುನಾಡು, ಪುದುಚೇರಿ ಮತ್ತು ಕೇರಳದಾದ್ಯಂತ ಚದುರಿದ ಮಳೆಯಾಗಲಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮುಂದಿನ 3 ದಿನಗಳಲ್ಲಿ ಕೇರಳ, ಮಾಹೆಯಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಇಂದು ಲಕ್ಷದ್ವೀಪದಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ರಾಜಸ್ಥಾನ, ಮಹಾರಾಷ್ಟ್ರ, ಮಧ್ಯಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ. ಕೇರಳದಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೇರಳದ ಕೊಲ್ಲಂ, ಪತ್ತನಾಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ ಮತ್ತು ವಯನಾಡ್ ಜಿಲ್ಲೆಗಳಲ್ಲಿ ಮಾರ್ಚ್ 12ರವರೆಗೆ ಮಳೆಯಾಗಲಿದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.

ಈ ವಾರ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ಮಾರ್ಚ್‌ ಮೊದಲ ವಾರದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರಾವಳಿ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ದಕ್ಷಿಣ ಕರಾವಳಿ ಆಂಧ್ರಪ್ರದೇಶ ಮತ್ತು ರಾಯಲಸೀಮಾದಲ್ಲಿ ಅಲ್ಲಲ್ಲಿ ಮಳೆಯಾಗುತ್ತಿದೆ. ಹೀಗಾಗಿ, ಮೀನುಗಾರರಿಗೆ ದಕ್ಷಿಣ ಬಂಗಾಳ ಕೊಲ್ಲಿ, ಹಿಂದೂ ಮಹಾಸಾಗರ, ಮನ್ನಾರ್ ಕೊಲ್ಲಿ ಮತ್ತು ಕೊಮೊರಿನ್ ಪ್ರದೇಶಕ್ಕೆ ಹೋಗದಂತೆ ಎಚ್ಚರಿಕೆಯನ್ನು ನೀಡಲಾಗಿದೆ.

ಇದನ್ನೂ ಓದಿ: Karnataka Rain: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದು ಗುಡುಗು ಸಹಿತ ಮಳೆ

Rain Updates: ಮಧ್ಯಪ್ರದೇಶ, ಗುಜರಾತ್, ಮಹಾರಾಷ್ಟ್ರದಲ್ಲಿ ಇನ್ನೆರಡು ದಿನ ವ್ಯಾಪಕ ಮಳೆ; ಹಳದಿ ಅಲರ್ಟ್​ ಘೋಷಣೆ