Karnataka Weather Today: ಸೆ. 28ರವರೆಗೂ ಕರ್ನಾಟಕದಲ್ಲಿ ಮಳೆ; ಕರಾವಳಿಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ

Karnataka Rain | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಇಂದಿನಿಂದ 4 ದಿನ ಕರ್ನಾಟಕದಲ್ಲಿ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Karnataka Weather Today: ಸೆ. 28ರವರೆಗೂ ಕರ್ನಾಟಕದಲ್ಲಿ ಮಳೆ; ಕರಾವಳಿಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ
ಮಳೆ
Follow us
TV9 Web
| Updated By: Vinay Bhat

Updated on: Sep 25, 2021 | 6:39 AM

Karnataka Rain: ಸೆಪ್ಟೆಂಬರ್ ಆರಂಭದಿಂದಲೂ ಕರ್ನಾಟಕದಲ್ಲಿ ಸುರಿಯುತ್ತಿರುವ ಮಳೆ (Heavy Rain) ಇನ್ನೂ ನಿಂತಿಲ್ಲ. ಇಂದು ಕರ್ನಾಟಕ (Rain in Karnataka) ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಹೆಚ್ಚಳವಾಗಲಿದೆ. ಇಂದಿನಿಂದ ಸೆ. 28ರವರೆಗೂ ಕರ್ನಾಟಕದಲ್ಲಿ ಮಳೆ ಮುಂದುವರೆಯಲಿದೆ. ಕರಾವಳಿ ಜಿಲ್ಲೆಗಳು, ಮಲೆನಾಡು, ಉತ್ತರ ಒಳನಾಡಿನಲ್ಲಿ ಇಂದಿನಿಂದ 4 ದಿನ ಮಳೆಯ ಅಬ್ಬರ ಜೋರಾಗಲಿದೆ.

ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲೂ ವರುಣನ ಆರ್ಭಟ ಹೆಚ್ಚಾಗಿದೆ. ಕರ್ನಾಟಕದಲ್ಲಿ ಸುರಿಯುತ್ತಿರುವ ಮಳೆಯಿಂದ ನದಿಗಳು ತುಂಬಿ ಹರಿಯುತ್ತಿದ್ದು, ಡ್ಯಾಂಗಳು ತುಂಬಿ ನಿಂತಿವೆ. ರಾಜ್ಯಾದ್ಯಂತ ಇಂದಿನಿಂದ 4 ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಉತ್ತರ ಒಳನಾಡಿನ ಬೀದರ್, ಕಲಬುರ್ಗಿ, ಯಾದಗಿರಿ, ಕೊಪ್ಪಳ, ರಾಯಚೂರು, ಹಾವೇರಿ, ವಿಜಯಪುರದಲ್ಲಿ ಇಂದಿನಿಂದ ಸೆ. 28ರವರೆಗೂ ಮಳೆಯಾಗಲಿದೆ.

ಇಂದು ಕರ್ನಾಟಕದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಜಾಸ್ತಿಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಸೆ. 28ರವರೆಗೂ ಮಳೆ ಮುಂದುವರೆಯುವ ಸಾಧ್ಯತೆಯಿದೆ. ಇಂದು ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೀದರ್ ಜಿಲ್ಲೆಯಲ್ಲಿ ಎರಡು ದಿನದಿಂದ ‌ಸುರಿಯುತ್ತಿರುವ ಮಳೆಯಿಂದ 65 ಸಾವಿರ ಹೆಕ್ಟೇರ್ ಬೆಳೆ ಹಾನಿಯಾಗಿದೆ. ಪಪ್ಪಾಯಿ, ಟೊಮ್ಯಾಟೊ ಸೇರಿದಂತೆ ಉದ್ದು, ಹೆಸರು ಹಾನಿಯಾಗಿವೆ. ಮಳೆಯ ಆರ್ಭಟಕ್ಕೆ ಬೀದರ್ ರೈತರು ಕಂಗಾಲಾಗಿದ್ದಾರೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಹಾಲಹಳ್ಳಿ ಬಳಿಯ ಜೀವನಾಡಿ ಕಾರಂಜಾ ಜಲಾಶಯ ಭರ್ತಿಯಾಗಿದೆ. ಈ ಡ್ಯಾಂನಿಂದ 4 ಕ್ರಸ್ಟ್​​​ ಗೇಟ್​ಗಳಿಂದ 1,264 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. 7.69 ಟಿಎಂಸಿ ಸಾಮರ್ಥ್ಯವಿರುವ ಕಾರಂಜಾ ಜಲಾಶಯ ಭರ್ತಿಯಾಗಿದೆ. ಡ್ಯಾಂನಿಂದ ಅಪಾರ ಪ್ರಮಾಣದ ನೀರು ಹೊರಬಿಟ್ಟ ಹಿನ್ನೆಲೆ ಮಾಂಜ್ರಾ ನದಿ ನೀರು ಜಮೀನುಗಳಿಗೆ ನುಗ್ಗಿ ಬೆಳೆಗಳು ಹಾನಿಯಾಗಿವೆ.

ಬೆಂಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮಳೆ ಹೆಚ್ಚಾಗಿದೆ. ಬೆಂಗಳೂರು ಮಾತ್ರವಲ್ಲದೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯದಲ್ಲಿ ಇಂದು ಮಳೆಯಾಗಲಿದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದೆ.

ದೆಹಲಿ ಹಾಗೂ ಗುಜರಾತ್​ನಲ್ಲಿ ಮಳೆಯ ಆರ್ಭಟ ಮಿತಿ ಮೀರಿದೆ. ದೆಹಲಿಯಲ್ಲಿ ರಸ್ತೆಗಳೆಲ್ಲ ಕೆರೆಗಳಂತಾಗಿವೆ. ಗುಜರಾತ್, ಉತ್ತರ ಪ್ರದೇಶ, ಉತ್ತರಾಖಂಡ, ರಾಜಸ್ಥಾನ, ಮಧ್ಯಪ್ರದೇಶ, ಜಾರ್ಖಂಡ್, ಛತ್ತೀಸ್​ಗಢ, ತಮಿಳುನಾಡು, ಗೋವಾ, ಅಂಡಮಾನ್ ನಿಕೋಬಾರ್, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಸಿಕ್ಕಿಂ, ಸೌರಾಷ್ಟ್ರ, ಕಚ್, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಬಿಹಾರ, ಆಂಧ್ರ ಪ್ರದೇಶ, ತೆಲಂಗಾಣ, ಕೇರಳ, ಲಕ್ಷದ್ವೀಪದಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ. ಪಂಜಾಬ್, ಹರಿಯಾಣ, ದೆಹಲಿ, ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ, ಲಡಾಖ್​, ಪಶ್ಚಿಮ ರಾಜಸ್ಥಾನದಲ್ಲಿ ಇಂದು ಮಳೆ ಹೆಚ್ಚಾಗಲಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದು ಮಳೆ ಹೆಚ್ಚಾಗಲಿದೆ.

ಇದನ್ನೂ ಓದಿ: Karnataka Weather Today: ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆಯ ಆರ್ಭಟ; ಮಲೆನಾಡು, ಕರಾವಳಿಗೆ ಆರೆಂಜ್ ಅಲರ್ಟ್

Karnataka Rain: ಕೊಡಗು, ಮಲೆನಾಡಿನಲ್ಲಿ ಇನ್ನೂ 3 ದಿನ ಮಳೆ ಹೆಚ್ಚಳ; ಹಲವೆಡೆ ಇಂದು ಹಳದಿ ಅಲರ್ಟ್ ಘೋಷಣೆ

(Karnataka weather Today Karnataka Rain Continued till September 28 Orange Alert Issued by IMD Bengaluru Rain)

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ