Karnataka Weather Today: ಬೆಂಗಳೂರು ಸೇರಿ ಹಲವೆಡೆ ಅ. 10ರವರೆಗೂ ಮಳೆ ಸಾಧ್ಯತೆ; ಕರ್ನಾಟಕದ ಇಂದಿನ ಹವಾಮಾನ ಹೀಗಿದೆ

Karnataka Rain : ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗಿನಲ್ಲಿ ಮಳೆ ಹೆಚ್ಚಾಗಲಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಅ. 10ರವರೆಗೂ ಮಳೆ ಮುಂದುವರೆಯಲಿದೆ.

Karnataka Weather Today: ಬೆಂಗಳೂರು ಸೇರಿ ಹಲವೆಡೆ ಅ. 10ರವರೆಗೂ ಮಳೆ ಸಾಧ್ಯತೆ; ಕರ್ನಾಟಕದ ಇಂದಿನ ಹವಾಮಾನ ಹೀಗಿದೆ
ಮಳೆಯಿಂದ ರಸ್ತೆಗಳಲ್ಲಿ ನೀರು ತುಂಬಿರುವುದು

Bangalore Rain: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಎರಡು ದಿನಗಳಿಂದ ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದೆ. ಇಂದು ಮತ್ತು ನಾಳೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗಿನಲ್ಲಿ ಮಳೆ ಹೆಚ್ಚಾಗಲಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಅಕ್ಟೋಬರ್ 10ರವರೆಗೂ ಮಳೆ ಮುಂದುವರೆಯಲಿದೆ. ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೀದರ್, ಕೊಪ್ಪಳ, ರಾಯಚೂರು, ಕಲಬುರ್ಗಿ, ವಿಜಯಪುರ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದೆ.

ಎರಡು ದಿನಗಳಿಂದ ಮಲೆನಾಡು, ಕರಾವಳಿ, ಬೆಂಗಳೂರು, ಮೈಸೂರಿನಲ್ಲಿ ವಿಪರೀತ ಮಳೆಯಾಗುತ್ತಿದೆ. ಕರ್ನಾಟಕದ ಬಹುತೇಕ ಕಡೆ ಇಂದು ಮಳೆ ಜಾಸ್ತಿಯಾಗಲಿದೆ. ಕರ್ನಾಟಕದಲ್ಲಿ 4 ತಿಂಗಳ ಮುಂಗಾರು ಸೆ. 30ಕ್ಕೆ ಅಂತ್ಯವಾಗಿದೆ. ಕರ್ನಾಟಕದಲ್ಲಿ ಈ ವರ್ಷ 852 ಮಿ.ಮೀ. ಮಳೆಯಾಗಬೇಕಿತ್ತು ಆದರೆ, 787 ಮಿ.ಮೀ. ಮಳೆ ದಾಖಲಾಗಿದೆ. ಬೆಂಗಳೂರಿನಲ್ಲಿ ಮಂಗಳವಾರ ಸಂಜೆಯಿಂದ ಬುಧವಾರ ಸಂಜೆಯವರೆಗೂ ಮಳೆ ಸುರಿದಿದ್ದು, ಓರ್ವ ಉದ್ಯಮಿ ಸಾವನ್ನಪ್ಪಿದ್ದಾರೆ.

ಅಕ್ಚೋಬರ್ 10ರವರೆಗೂ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು ಮಹಾನಗರ ಪಾಲಿಕೆಯಯಿಂದ ಮಳೆಗಾಲ ನಿರ್ವಹಣೆಗಾಗಿ 63 ಉಪವಿಭಾಗಗಳಲ್ಲಿ ತಾತ್ಕಾಲಿಕ ನಿಯಂತ್ರಣ ಕೊಠಡಿ ತೆರೆಯಲಾಗಿದೆ. ಅಕ್ಟೋಬರ್ ಅಂತ್ಯದವರೆಗೂ ಈ ನಿಯಂತ್ರಣ ಕೊಠಡಿಗಳು ಕಾರ್ಯ ನಿರ್ವಹಿಸಲಿವೆ. ತಗ್ಗುಪ್ರದೇಶಗಳಲ್ಲಿ ಶಾಶ್ವತ ಪರಿಹಾರಕ್ಕಾಗಿ ರಾಜಕಾಲುವೆಗಳಿಗೆ ತಡೆಗೋಡೆ ನಿರ್ಮಿಸಲಾಗುವುದು. ಮಳೆಗಾಲದಲ್ಲಿ ಪ್ರವಾಹ ಉಂಟಾಗುವ 539 ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸ್ಥಳಗಳ ಸಂಖ್ಯೆಯನ್ನು 185ಕ್ಕೆ ಇಳಿಸಲಾಗಿದೆ.

ಇಂದಿನಿಂದ ಕರ್ನಾಟಕದಲ್ಲಿ ಮಳೆಯ ಆರ್ಭಟ ಕೊಂಚ ಇಳಿಮುಖವಾಗಲಿದೆ. ಆದರೂ ಅ. 10ರವರೆಗೂ ಮಳೆ ಸುರಿಯಲಿದೆ. ಕರ್ನಾಟಕ ಸೇರಿದಂತೆ ತಮಿಳುನಾಡು, ಕೇರಳದಲ್ಲಿ ಇಂದು ಭಾರೀ ಮಳೆ ಸುರಿಯಲಿದೆ. ಪಶ್ಚಿಮ ಬಂಗಾಳ, ಗೋವಾ, ಲಕ್ಷದ್ವೀಪ, ಛತ್ತೀಸ್​ಗಢ, ಸಿಕ್ಕಿಂ, ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ತ್ರಿಪುರ, ಮಣಿಪುರ, ಮಿಜೋರಾಂ, ದೆಹಲಿ, ಮಧ್ಯಪ್ರದೇಶ, ಜಾರ್ಖಂಡ್, ಗುಜರಾತ್, ಮಹಾರಾಷ್ಟ್ರ, ಒರಿಸ್ಸಾ, ಗೋವಾ, ಉತ್ತರ ಪ್ರದೇಶ, ಜಮ್ಮು ಕಾಶ್ಮೀರ, ಉತ್ತರಾಖಂಡ, ಲಡಾಖ್, ಪಂಜಾಬ್, ಹರಿಯಾಣ, ಆಂಧ್ರಪ್ರದೇಶದಲ್ಲಿ ಇನ್ನೆರಡು ದಿನ ಮಳೆಯಾಗಲಿದೆ.

ಭಾರೀ ಮಳೆಗೆ ಮನೆ ಕುಸಿದು ಒಂದೇ ಮನೆಯ ಐವರು ಮೃತಪಟ್ಟ ಘಟನೆ ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಸಂಭವಿಸಿದೆ. 7 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದು ಮೂವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ಗಂಗವ್ವ ಭೀಮಪ್ಪ(80), ಸತ್ಯವ್ವ ಅರ್ಜುನ್‌(45), ಕಾಶವ್ವ(8), ಪೂಜಾ ಅರ್ಜುನ್‌(8), ಸವಿತಾ ಭೀಮಪ್ಪ(28) ಮೃತರು. ಭೀಮಪ್ಪ ಖನಗಾಂವಿ ಎಂಬುವವರಿಗೆ ಸೇರಿದ ಮನೆ ಕುಸಿದಿದೆ. ಸ್ಥಳದಲ್ಲೇ ಐವರು, ಆಸ್ಪತ್ರೆಗೆ ಸಾಗಿಸುವಾಗ ಇಬ್ಬರು ಮೃತಪಟ್ಟಿದ್ದಾರೆ. ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಲಾ 5 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ.

ಇದನ್ನೂ ಓದಿ: Karnataka Weather Today: ಬೆಂಗಳೂರಿನಲ್ಲಿ ಇಂದೂ ಮಳೆ ಸಾಧ್ಯತೆ; ಕರ್ನಾಟಕದಲ್ಲಿ ನಾಳೆಯಿಂದ ಆರೆಂಜ್ ಅಲರ್ಟ್ ಘೋಷಣೆ

Bangalore Rain: ಬೆಂಗಳೂರಿನಲ್ಲಿ ರಾತ್ರಿಯಿಡೀ ಸುರಿದ ಮಳೆಗೆ ನದಿಯಂತಾದ ರಸ್ತೆಗಳು; ಜನಜೀವನ ಅಸ್ತವ್ಯಸ್ತ

Read Full Article

Click on your DTH Provider to Add TV9 Kannada