AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Today: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಅ. 26ರವರೆಗೂ ಭಾರೀ ಮಳೆ

Karnataka Rain: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಅ. 23ರವರೆಗೆ ಕರ್ನಾಟಕದಲ್ಲಿ ಮಳೆಯಾಗಲಿದೆ. ನಂತರ ಅಕ್ಟೋಬರ್ 25 ಮತ್ತು 26ರಂದು ವಿಪರೀತ ಮಳೆಯಾಗಲಿದೆ.

Karnataka Weather Today: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಅ. 26ರವರೆಗೂ ಭಾರೀ ಮಳೆ
ಮಳೆ (ಸಂಗ್ರಹ ಚಿತ್ರ)
TV9 Web
| Edited By: |

Updated on: Oct 22, 2021 | 7:02 AM

Share

Karnataka Rain: ಕರ್ನಾಟಕದಲ್ಲಿ ಮತ್ತೆ ಮಳೆಯ (Rain in Karnataka) ಆರ್ಭಟ ಶುರುವಾಗಿದ್ದು, ಅಕ್ಟೋಬರ್ 26ರವರೆಗೂ ಮಳೆ ಮುಂದುವರೆಯಲಿದೆ. ಅಕ್ಟೋಬರ್ 25 ಅಥವಾ 26ಕ್ಕೆ ರಾಜ್ಯಕ್ಕೆ ಹಿಂಗಾರು ಪ್ರವೇಶವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಈಗಾಗಲೇ ಮಳೆಯ ಆರ್ಭಟ ಶುರುವಾಗಿದೆ. ಕರ್ನಾಟಕದ 16 ಜಿಲ್ಲೆಗಳಲ್ಲಿ ಇನ್ನೆರಡು ದಿನ ಹಳದಿ ಅಲರ್ಟ್​ (Yellow Alert) ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಇಂದು ಮಳೆ ಜಾಸ್ತಿಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಅ. 23ರವರೆಗೆ ಕರ್ನಾಟಕದಲ್ಲಿ ಮಳೆಯಾಗಲಿದೆ. ನಂತರ ಅಕ್ಟೋಬರ್ 25 ಮತ್ತು 26ರಂದು ವಿಪರೀತ ಮಳೆಯಾಗಲಿದೆ. ಕರ್ನಾಟಕದಲ್ಲಿ ಸೆಪ್ಟೆಂಬರ್ ತಿಂಗಳ ಅಂತ್ಯದಲ್ಲೇ ಮುಂಗಾರು ಮುಕ್ತಾಯವಾಗಿದೆ. ಆದರೆ, ಚಂಡಮಾರುತ ಮತ್ತು ವಾಯುಭಾರ ಕುಸಿತದಿಂದಾಗಿ ಮಳೆ ಮುಂದುವರೆದಿತ್ತು. ಹವಾಮಾನ ತಜ್ಞರ ಪ್ರಕಾರ ಅ. 25 ಅಥವಾ 26ರಂದು ಹಿಂಗಾರು ಮಳೆ ಶುರುವಾಗಲಿದೆ. ಇಂದಿನಿಂದ ಅ. 26ರವರೆಗೆ ರಾಜ್ಯದಲ್ಲಿ ಮಳೆ ಮುಂದುವರೆಯಲಿದ್ದು, ಅ. 24ರಂದು ಮಳೆಗೆ ಬಿಡುವು ಇರಲಿದೆ.

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಕಡಿಮೆಯಾಗಿದ್ದು, ಇಂದಿನಿಂದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ರಾಮನಗರ, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ 2 ದಿನ ಹಳದಿ ಅಲರ್ಟ್​ ಘೋಷಿಸಲಾಗಿದೆ. ಹಾಗೇ, ಬಾಗಲಕೋಟೆ, ಬೀದರ್, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಕಲಬುರ್ಗಿ, ಯಾದಗಿರಿಯಲ್ಲಿ ಒಣಹವೆ ಇರಲಿದೆ.

ನೈಋತ್ಯ ಮುಂಗಾರಿನಿಂದ ಎರಡು ವಾರಗಳಿಂದ ರಾಜ್ಯದಲ್ಲಿ ಭಾರೀ ಮಳೆಯಾಗಿತ್ತು. ಇಂದು ಕೂಡ ಬೆಂಗಳೂರಿನಲ್ಲಿ ಮಳೆ ಮುಂದುವರೆಯುವ ನಿರೀಕ್ಷೆಯಿದೆ. ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಇನ್ನೆರಡು ದಿನ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ.

ಅತ್ತ ಕೇರಳ, ಪಶ್ಚಿಮ ಬಂಗಾಳ, ಉತ್ತರಾಖಂಡದಲ್ಲಿ ವಿಪರೀತ ಮಳೆಯಾಗಿ ಪ್ರವಾಹ ಉಂಟಾಗಿದೆ. ಸಿಕ್ಕಿಂ, ಪಶ್ಚಿಮ ಬಂಗಾಳದಲ್ಲೂ ಮಳೆ ಜಾಸ್ತಿಯಾಗಿದೆ. ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶದಲ್ಲಿ ಈ ವಾರ ಹಿಮಪಾತ ಉಂಟಾಗುವ ಸಾಧ್ಯತೆಯಿದೆ. ಮುಂದಿನ ಕೆಲವು ದಿನಗಳ ಕಾಲ ಕೇರಳ, ಕರ್ನಾಟಕ, ತಮಿಳುನಾಡು ಹಾಗೂ ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ.

ಉತ್ತರಾಖಂಡ, ಅರುಣಾಚಲ ಪ್ರದೇಶ, ತಮಿಳುನಾಡು, ಬಿಹಾರ, ಅಸ್ಸಾಂ, ಮೇಘಾಲಯ, ಸಿಕ್ಕಿಂ, ಮಿಜೋರಾಂ, ನಾಗಾಲ್ಯಾಂಡ್, ಮಣಿಪುರ, ತ್ರಿಪುರ, ಪಶ್ಚಿಮ ಬಂಗಾಳ, ಜಾರ್ಖಂಡ್ ರಾಜ್ಯಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕೇರಳದಲ್ಲಿ ಇಂದು ಕೂಡ ವಿಪರೀತ ಮಳೆಯಾಗಲಿದ್ದು, 8 ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಕೊಟ್ಟಾಯಂ, ಇಡುಕ್ಕಿ, ಪಲಕ್ಕಾಡ್​​, ಮಲಪ್ಪುರಂ, ಕೊಯಿಕ್ಕೊಡ್​, ವಯಾನಾಡ್​ ಮತ್ತು ಕಣ್ಣೂರು, ಪಥನಂತಿಟ್ಟ ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​ ಹೇರಲಾಗಿದ್ದು, ತಿರುವನಂತಪುರಂ, ಕೊಲ್ಲಂ, ಆಲಪ್ಪುಳ, ಎರ್ನಾಕುಲಂ, ತ್ರಿಶೂರ್ ಮತ್ತು ಕಾಸರಗೋಡು ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ. ಕೇರಳ, ತಮಿಳುನಾಡು, ಪುದುಚೆರಿ, ಕರೈಕಾಲ್​ನಲ್ಲಿ ಅ. 25ರವರೆಗೆ ಮಳೆ ಹೆಚ್ಚಾಗಲಿದೆ.

ಇದನ್ನೂ ಓದಿ: ಕೇರಳದಲ್ಲಿ ಅ.25ರವರೆಗೂ ಮಳೆಯ ಎಚ್ಚರಿಕೆ; 8 ಜಿಲ್ಲೆಗಳಲ್ಲಿ ಐಎಂಡಿಯಿಂದ ಆರೆಂಜ್​ ಅಲರ್ಟ್​​

‘ರಾಜ್ಯದಲ್ಲಿ ಭಾರಿ ಮಳೆ ಹಿನ್ನೆಲೆ; ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮುನ್ನೆಚ್ಚರಿಕೆ ವಹಿಸಲು ಸೂಚನೆ’: ಸಚಿವ ಆರ್.ಅಶೋಕ್

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?