Karnataka Weather Today: ಇಂದಿನಿಂದ ಡಿ. 15ರವರೆಗೆ ಕರ್ನಾಟಕದಲ್ಲಿ ಹಗುರ ಮಳೆ; ದಕ್ಷಿಣ ಭಾರತದ ಹವಾಮಾನ ಹೀಗಿದೆ

Karnataka Rain: ಕರ್ನಾಟಕದ ಹಾಸನ, ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಮೈಸೂರು, ಮಂಡ್ಯ, ಚಿಕ್ಕಮಗಳೂರು, ತುಮಕೂರು, ರಾಮನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ.

Karnataka Weather Today: ಇಂದಿನಿಂದ ಡಿ. 15ರವರೆಗೆ ಕರ್ನಾಟಕದಲ್ಲಿ ಹಗುರ ಮಳೆ; ದಕ್ಷಿಣ ಭಾರತದ ಹವಾಮಾನ ಹೀಗಿದೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 12, 2021 | 6:05 AM

Bengaluru Rain: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಡಿ. 15ರವರೆಗೆ ಮಳೆ ಸುರಿಯಲಿದೆ. ಇಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ, ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ರಾಮನಗರ, ಕೊಡಗು, ಶಿವಮೊಗ್ಗ, ಮೈಸೂರು, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಮಳೆಯಾಗುವ ನಿರೀಕ್ಷೆಯಿದೆ.

ಕರ್ನಾಟಕದ ಹಾಸನ, ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಮೈಸೂರು, ಮಂಡ್ಯ, ಚಿಕ್ಕಮಗಳೂರು, ತುಮಕೂರು, ರಾಮನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ. ಕರ್ನಾಟಕದ ಬಹುತೇಕ ಕಡೆ ಇಂದು ಮೋಡ ಕವಿದ ವಾತಾವರಣವಿರಲಿದೆ. ಬೆಂಗಳೂರಿನಲ್ಲೂ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಜೂನ್ ತಿಂಗಳಿನಿಂದ ರಾಜ್ಯದಲ್ಲಿ ಮಳೆಯಾಗುತ್ತಿದ್ದು, ಇನ್ನೂ ಮಳೆ ಮುಂದುವರೆದಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಡಿಸೆಂಬರ್ 15ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇಂದು ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆಯಿದೆ. ಕರ್ನಾಟಕ, ಕೇರಳ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಒಳಭಾಗದಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಈ ಅವಧಿಯಲ್ಲಿ ಬಂಗಾಳಕೊಲ್ಲಿಯಿಂದ ಈಶಾನ್ಯ ಮಾರುತಗಳು ತಮಿಳುನಾಡು ಮತ್ತು ಆಂಧ್ರಪ್ರದೇಶದ ಮೇಲೆ ಬೀಸುವ ಸಾಧ್ಯತೆಯಿದೆ. ಸೋಮವಾರ ತಮಿಳುನಾಡಿನಲ್ಲಿ ಮಿಂಚು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಇದಲ್ಲದೆ, ಈ ಅವಧಿಯಲ್ಲಿ ಆಂಧ್ರಪ್ರದೇಶ, ತಮಿಳುನಾಡು, ಕರ್ನಾಟಕ, ಕೇರಳ ಮತ್ತು ಲಕ್ಷದ್ವೀಪಗಳಲ್ಲಿ ಮಿಂಚು ಸಹಿತ ಚದುರಿದ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಸೋಮವಾರದಿಂದ ಬುಧವಾರದವರೆಗೆ ಪಶ್ಚಿಮ ಹಿಮಾಲಯ ಪ್ರದೇಶದ ಮೇಲೆ ತಾಜಾ ಪಾಶ್ಚಿಮಾತ್ಯ ಅಡಚಣೆಯು ಪರಿಣಾಮ ಬೀರುವ ಸಾಧ್ಯತೆಯಿದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್ ಮತ್ತು ಹಿಮಾಚಲ ಪ್ರದೇಶದಲ್ಲಿ ಮಿಂಚಿನೊಂದಿಗೆ ಸೇರಿದ ಮಳೆಯಾಗಲಿದೆ. ಈ ಅವಧಿಯಲ್ಲಿ ಉತ್ತರ ಭಾರತದ ಬಯಲು ಪ್ರದೇಶಗಳು ಮತ್ತು ಪಕ್ಕದ ಪ್ರದೇಶಗಳಲ್ಲಿ ಮತ್ತು ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಸೋಮವಾರದಿಂದ ಗರಿಷ್ಠ ತಾಪಮಾನವು ಸರಾಸರಿಗಿಂತ ಕಡಿಮೆ ಇರುತ್ತದೆ. ಈ ಅವಧಿಯಲ್ಲಿ ಇತರ ಪ್ರದೇಶಗಳು ಸಾಮಾನ್ಯ ಅಥವಾ ಸ್ವಲ್ಪ ಬೆಚ್ಚಗಿರುತ್ತದೆ.

ಡಿ. 15ರವರೆಗೆ ರಾಜಸ್ಥಾನ, ಗುಜರಾತ್ ಮತ್ತು ಪಕ್ಕದ ಪ್ರದೇಶಗಳಲ್ಲಿ ಕನಿಷ್ಠ ತಾಪಮಾನವು ಸರಾಸರಿಗಿಂತ ಕಡಿಮೆಯಿರುತ್ತದೆ. ಮುಂದಿನ ಮೂರು ದಿನಗಳವರೆಗೆ ಒಡಿಶಾ, ಅಸ್ಸಾಂ, ಮೇಘಾಲಯ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಬೆಳಗಿನ ಸಮಯದಲ್ಲಿ ಮಂಜು ಇರಲಿದೆ.

ಮುಂದಿನ 3 ದಿನಗಳಲ್ಲಿ ದಕ್ಷಿಣ ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂ, ರಾಯಲಸೀಮಾ, ದಕ್ಷಿಣ ಒಳನಾಡು ಕರ್ನಾಟಕ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಮತ್ತು ಕೇರಳ ಮತ್ತು ಮಾಹೆಯಲ್ಲಿ ಚದುರಿದ ಲಘು ಅಥವಾ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶುಕ್ರವಾರ ಮುನ್ಸೂಚನೆ ನೀಡಿದೆ. ಡಿಸೆಂಬರ್ 13ರ ರಾತ್ರಿಯಿಂದ ಪಶ್ಚಿಮ ಹಿಮಾಲಯ ಪ್ರದೇಶದ ಮೇಲೆ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Weather Today: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇನ್ನೂ 4 ದಿನ ಮಳೆ; ಚೆನ್ನೈನಲ್ಲಿ ಆರೆಂಜ್ ಅಲರ್ಟ್​ ಘೋಷಣೆ

Karnataka Rain: ಡಿ. 11ರವರೆಗೆ ಕರ್ನಾಟಕದಲ್ಲಿ ಹಗುರ ಮಳೆ; ತಮಿಳುನಾಡು, ಆಂಧ್ರ, ಬಂಗಾಳದಲ್ಲಿ ಇಂದು ಭಾರೀ ಮಳೆ

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ