AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Today: ಕರ್ನಾಟಕದಲ್ಲಿ ತಗ್ಗಿದ ಮಳೆಯ ಅಬ್ಬರ; ಹೆಚ್ಚಾಯ್ತು ಚಳಿ ಗಾಳಿ

Karnataka Rain: ಕರ್ನಾಟಕದಲ್ಲಿ ಕಳೆದೊಂದು ವಾರದಿಂದ ಮಳೆ ಜಾಸ್ತಿಯಾಗಿತ್ತು. ಇಂದಿನಿಂದ ಚಳಿ ಹೆಚ್ಚಾಗಲಿದ್ದು, ಮಳೆ ಕೊಂಚ ಕಡಿಮೆಯಾಗಲಿದೆ. ಪಂಜಾಬ್, ಹರಿಯಾಣ, ಉತ್ತರ ಪ್ರದೇಶದ ಪಶ್ಚಿಮ ಭಾಗಗಳಲ್ಲಿ ಇಂದು ಹಗುರ ಮಳೆಯಾಗುವ ಸಾಧ್ಯತೆಯಿದೆ

Karnataka Weather Today: ಕರ್ನಾಟಕದಲ್ಲಿ ತಗ್ಗಿದ ಮಳೆಯ ಅಬ್ಬರ; ಹೆಚ್ಚಾಯ್ತು ಚಳಿ ಗಾಳಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 19, 2021 | 6:10 AM

Share

Bengaluru Rain: ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ರಾಮನಗರ, ಕೋಲಾರ, ಹಾಸನ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಳೆದೊಂದು ವಾರದಿಂದ ಮಳೆ ಜಾಸ್ತಿಯಾಗಿತ್ತು. ಇಂದಿನಿಂದ ಚಳಿ ಹೆಚ್ಚಾಗಲಿದ್ದು, ಮಳೆ ಕೊಂಚ ಕಡಿಮೆಯಾಗಲಿದೆ.

ಇಂದು ದಕ್ಷಿಣ ಅಸ್ಸಾಂ, ಮಣಿಪುರ, ಈಶಾನ್ಯ ಅರುಣಾಚಲ ಪ್ರದೇಶ, ಉತ್ತರಾಖಂಡದ ಎತ್ತರದ ಪ್ರದೇಶಗಳಲ್ಲಿ ದಟ್ಟವಾದ ಮಂಜು ಉಂಟಾಗಲಿದೆ. ಪಂಜಾಬ್, ಹರಿಯಾಣ, ಉತ್ತರ ಪ್ರದೇಶದ ಪಶ್ಚಿಮ ಭಾಗಗಳಲ್ಲಿ ಇಂದು ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ಪಶ್ಚಿಮ ಭಾಗಗಳಲ್ಲಿ ಮೋಡದಿಂದ ಕೂಡಿದ ಮಳೆಯಾಗಲಿದೆ. ಡಿ. 20ರವರೆಗೆ ಚಂಡೀಗಢ, ರಾಜಸ್ಥಾನದ ಉತ್ತರ ಭಾಗದಲ್ಲಿ ಮಳೆ ಹೆಚ್ಚಾಗಲಿದೆ. ಪಂಜಾಬ್, ಅಸ್ಸಾಂ, ಮೇಘಾಲಯ, ಮಿಜೋರಾಂ, ತ್ರಿಪುರ ರಾಜ್ಯಗಳಲ್ಲಿ ಇಂದು ಮಳೆಯಾಗಲಿದೆ.

ವಾಯುವ್ಯ ಭಾರತದ ಬಯಲು ಪ್ರದೇಶಗಳಲ್ಲಿ ಇಂದಿನಿಂದ ಡಿಸೆಂಬರ್ 20ರವರೆಗೆ ಹಗುರ ಮಳೆಯಾಗಲಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಮುಂದಿನ ಎರಡು ದಿನಗಳಲ್ಲಿ ಕಾಶ್ಮೀರ-ಲಡಾಖ್-ಗಿಲ್ಗಿಟ್-ಬಾಲ್ಟಿಸ್ತಾನ್-ಮುಜಫರಾಬಾದ್​ನಲ್ಲಿ ಲಘು ಮಳೆ ಅಥವಾ ಹಿಮ ಬೀಳುವ ಸಾಧ್ಯತೆಯಿದೆ. ಇಂದು ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಮಳೆಯಾಗಲಿದೆ. ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದಲ್ಲಿ ಮಳೆಯಾಗಲಿದೆ. ಇಂದು ದೇಶದ ಉಳಿದ ಭಾಗಗಳಲ್ಲಿ ಶುಷ್ಕ ಹವಾಮಾನವಿರುತ್ತದೆ.

ಇಂದು 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಳೆಯಾಗಲಿದೆ. ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಇಂದು ಕಡಿಮೆ ಮಳೆ ಅಥವಾ ಹಿಮಪಾತ ಇರಲಿದೆ. ಇಂದು ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದಲ್ಲಿ ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ. ಇಂದು ತಮಿಳುನಾಡು, ಪುದುಚೇರಿ ಮತ್ತು ಕಾರೈಕಾಲ್ (ಪುದುಚೇರಿಯಲ್ಲಿಯೂ ಸಹ)ನಲ್ಲಿ ಚದುರಿದ ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಕೇರಳ, ಮಾಹೆ (ಪುದುಚೇರಿಯಲ್ಲಿ) ಮತ್ತು ಅಂಡಮಾನ್ ಮತ್ತು ನಿಕೋಬಾರ್‌ನಲ್ಲಿ ಕೂಡ ಇಂದು ಮಳೆಯಾಗಲಿದೆ. ರಾಜಸ್ಥಾನದಲ್ಲಿ ಇಂದು ಕನಿಷ್ಠ ತಾಪಮಾನ ದಾಖಲಾಗಲಿದ್ದು, ಭಾರೀ ಚಳಿಗಾಳಿ ಇರಲಿದೆ.

ಇದನ್ನೂ ಓದಿ: Karnataka Weather Today: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇನ್ನೆರಡು ದಿನ ಮಳೆ, ಚಳಿಗಾಳಿ ಸಾಧ್ಯತೆ

ಚಿಕ್ಕಬಳ್ಳಾಪುರಕ್ಕೆ ಆಗಮಿಸಿದ ಅತಿವೃಷ್ಟಿ ಅಧ್ಯಯನ ತಂಡ; ಮಳೆಹಾನಿ ಪರಿಹಾರ ಹೆಚ್ಚು ಮಾಡುವಂತೆ ಮನವಿ ಮಾಡಿದ ರೈತರು

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ