
Bengaluru Rain: ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ರಾಮನಗರ, ಕೋಲಾರ, ಹಾಸನ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಳೆದೊಂದು ವಾರದಿಂದ ಮಳೆ ಜಾಸ್ತಿಯಾಗಿತ್ತು. ಇಂದಿನಿಂದ ಚಳಿ ಹೆಚ್ಚಾಗಲಿದ್ದು, ಮಳೆ ಕೊಂಚ ಕಡಿಮೆಯಾಗಲಿದೆ.
ಇಂದು ದಕ್ಷಿಣ ಅಸ್ಸಾಂ, ಮಣಿಪುರ, ಈಶಾನ್ಯ ಅರುಣಾಚಲ ಪ್ರದೇಶ, ಉತ್ತರಾಖಂಡದ ಎತ್ತರದ ಪ್ರದೇಶಗಳಲ್ಲಿ ದಟ್ಟವಾದ ಮಂಜು ಉಂಟಾಗಲಿದೆ. ಪಂಜಾಬ್, ಹರಿಯಾಣ, ಉತ್ತರ ಪ್ರದೇಶದ ಪಶ್ಚಿಮ ಭಾಗಗಳಲ್ಲಿ ಇಂದು ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ಪಶ್ಚಿಮ ಭಾಗಗಳಲ್ಲಿ ಮೋಡದಿಂದ ಕೂಡಿದ ಮಳೆಯಾಗಲಿದೆ. ಡಿ. 20ರವರೆಗೆ ಚಂಡೀಗಢ, ರಾಜಸ್ಥಾನದ ಉತ್ತರ ಭಾಗದಲ್ಲಿ ಮಳೆ ಹೆಚ್ಚಾಗಲಿದೆ. ಪಂಜಾಬ್, ಅಸ್ಸಾಂ, ಮೇಘಾಲಯ, ಮಿಜೋರಾಂ, ತ್ರಿಪುರ ರಾಜ್ಯಗಳಲ್ಲಿ ಇಂದು ಮಳೆಯಾಗಲಿದೆ.
A Low Pressure Area lies over Southeast Bay of Bengal & adjoining Equatorial Indian Ocean with associated cyclonic circulation extending upto 5.8 km above mean sea level. It is likely to move east-northeastwards and become more marked during next 48 hours.
— India Meteorological Department (@Indiametdept) December 18, 2021
ವಾಯುವ್ಯ ಭಾರತದ ಬಯಲು ಪ್ರದೇಶಗಳಲ್ಲಿ ಇಂದಿನಿಂದ ಡಿಸೆಂಬರ್ 20ರವರೆಗೆ ಹಗುರ ಮಳೆಯಾಗಲಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಮುಂದಿನ ಎರಡು ದಿನಗಳಲ್ಲಿ ಕಾಶ್ಮೀರ-ಲಡಾಖ್-ಗಿಲ್ಗಿಟ್-ಬಾಲ್ಟಿಸ್ತಾನ್-ಮುಜಫರಾಬಾದ್ನಲ್ಲಿ ಲಘು ಮಳೆ ಅಥವಾ ಹಿಮ ಬೀಳುವ ಸಾಧ್ಯತೆಯಿದೆ. ಇಂದು ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಮಳೆಯಾಗಲಿದೆ. ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದಲ್ಲಿ ಮಳೆಯಾಗಲಿದೆ. ಇಂದು ದೇಶದ ಉಳಿದ ಭಾಗಗಳಲ್ಲಿ ಶುಷ್ಕ ಹವಾಮಾನವಿರುತ್ತದೆ.
ಇಂದು 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಳೆಯಾಗಲಿದೆ. ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಇಂದು ಕಡಿಮೆ ಮಳೆ ಅಥವಾ ಹಿಮಪಾತ ಇರಲಿದೆ. ಇಂದು ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದಲ್ಲಿ ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ. ಇಂದು ತಮಿಳುನಾಡು, ಪುದುಚೇರಿ ಮತ್ತು ಕಾರೈಕಾಲ್ (ಪುದುಚೇರಿಯಲ್ಲಿಯೂ ಸಹ)ನಲ್ಲಿ ಚದುರಿದ ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಕೇರಳ, ಮಾಹೆ (ಪುದುಚೇರಿಯಲ್ಲಿ) ಮತ್ತು ಅಂಡಮಾನ್ ಮತ್ತು ನಿಕೋಬಾರ್‌ನಲ್ಲಿ ಕೂಡ ಇಂದು ಮಳೆಯಾಗಲಿದೆ. ರಾಜಸ್ಥಾನದಲ್ಲಿ ಇಂದು ಕನಿಷ್ಠ ತಾಪಮಾನ ದಾಖಲಾಗಲಿದ್ದು, ಭಾರೀ ಚಳಿಗಾಳಿ ಇರಲಿದೆ.
ಇದನ್ನೂ ಓದಿ: Karnataka Weather Today: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇನ್ನೆರಡು ದಿನ ಮಳೆ, ಚಳಿಗಾಳಿ ಸಾಧ್ಯತೆ
ಚಿಕ್ಕಬಳ್ಳಾಪುರಕ್ಕೆ ಆಗಮಿಸಿದ ಅತಿವೃಷ್ಟಿ ಅಧ್ಯಯನ ತಂಡ; ಮಳೆಹಾನಿ ಪರಿಹಾರ ಹೆಚ್ಚು ಮಾಡುವಂತೆ ಮನವಿ ಮಾಡಿದ ರೈತರು