Karnataka Weather Today : ಕರ್ನಾಟಕದಲ್ಲಿ ಇಂದು ಭಾರೀ ಮಳೆ; ಬೆಂಗಳೂರಿನಲ್ಲೂ ಇಂದು ವರುಣನ ಆರ್ಭಟ ಸಾಧ್ಯತೆ

Bengaluru Rain | ಸೆಪ್ಟೆಂಬರ್ ಕೊನೆಯ ವಾರದವರೆಗೂ ಮಲೆನಾಡು, ಕರಾವಳಿ, ಕೊಡಗಿನಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ. ಅತ್ತ ಉತ್ತರ ಭಾರತದಲ್ಲೂ ಮಳೆ ಹೆಚ್ಚಾಗಿದ್ದು, ಹಲವು ರಾಜ್ಯಗಳಲ್ಲಿ ಪ್ರವಾಹದ ಆತಂಕ ಎದುರಾಗಿದೆ.

Karnataka Weather Today : ಕರ್ನಾಟಕದಲ್ಲಿ ಇಂದು ಭಾರೀ ಮಳೆ; ಬೆಂಗಳೂರಿನಲ್ಲೂ ಇಂದು ವರುಣನ ಆರ್ಭಟ ಸಾಧ್ಯತೆ
ಮಳೆ

ಬೆಂಗಳೂರು: ಈ ತಿಂಗಳ ಆರಂಭದಿಂದಲೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಹಲವೆಡೆ ವರುಣನ ಆರ್ಭಟ (Heavy Rain) ಹೆಚ್ಚಾಗಿದ್ದು, ಇನ್ನೆರಡು ದಿನ ಮಳೆ ಮುಂದುವರೆಯಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆ ಹೆಚ್ಚಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ಮಳೆಯಿಂದ ಹಳದಿ ಅಲರ್ಟ್​ (Yellow Alert) ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ನಿನ್ನೆ ಮಧ್ಯಾಹ್ನದಿಂದ ಸಂಜೆಯವರೆಗೂ ಭಾರೀ ಮಳೆಯಾಗಿದ್ದು, ಬನಶಂಕರಿ, ಬಸವನಗುಡಿ, ಜಯನಗರ, ಕತ್ರಿಗುಪ್ಪೆ, ವಿಧಾನಸೌಧ, ಕೆಆರ್​ ರಸ್ತೆ, ಮೆಜೆಸ್ಟಿಕ್, ಶೇಷಾದ್ರಿಪುರಂ. ಮಲ್ಲೇಶ್ವರಂ, ಹೆಬ್ಬಾಳ, ರಾಜಾಜಿನಗರ, ಜೆಪಿ ನಗರ, ಕೋರಮಂಗಲ, ಆರ್​ ಆರ್ ನಗರ, ಕೆಂಗೇರಿ ಮುಂತಾದ ಏರಿಯಾಗಳಲ್ಲಿ ಮಳೆಯಿಂದ ರಸ್ತೆಗಳು ಹೊಳೆಯಂತಾಗಿದ್ದವು. ಇಂದು ಕೂಡ ಸಿಲಿಕಾನ್ ಸಿಟಿಯಲ್ಲಿ ಮಳೆಯ ಅಬ್ಬರ ಮುಂದುವರೆಯುವ ಸಾಧ್ಯತೆಯಿದೆ. ಇನ್ನೆರಡು ದಿನ ಹಾಸನ, ಕೊಡಗು, ಶಿವಮೊಗ್ಗ, ಮಂಡ್ಯ, ಕೋಲಾರ, ಮೈಸೂರು, ರಾಮನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ವ್ಯಾಪಕ ಮಳೆಯಾಗಲಿದೆ.

ಸೆಪ್ಟೆಂಬರ್ ಕೊನೆಯ ವಾರದವರೆಗೂ ಮಲೆನಾಡು, ಕರಾವಳಿ, ಕೊಡಗಿನಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ. ಅತ್ತ ಉತ್ತರ ಭಾರತದಲ್ಲೂ ಮಳೆ ಹೆಚ್ಚಾಗಿದ್ದು, ಹಲವು ರಾಜ್ಯಗಳಲ್ಲಿ ಪ್ರವಾಹದ ಆತಂಕ ಎದುರಾಗಿದೆ. ಗುಜರಾತ್​ನಲ್ಲಿ ಇಂದಿನಿಂದ 4 ದಿನ ಅಂದರೆ ಸೆ. 24ರವರೆಗೂ ಮಳೆ ಮುಂದುವರೆಯಲಿದೆ. ನೆರೆಯ ರಾಜ್ಯವಾದ ಕೇರಳದಲ್ಲಿ ಸೆ. 23ರಂದು ವಿಪರೀತ ಮಳೆಯಾಗಲಿದೆ.

ಮುಂದಿನ ಹತ್ತು ದಿನಗಳವರೆಗೂ ಉತ್ತರ ಭಾರತದಲ್ಲಿ ಮುಂಗಾರು ಅಬ್ಬರ ಮುಂದುವರೆಯುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸೆಪ್ಟೆಂಬರ್ ಅಂತ್ಯದವರೆಗೂ ವಾಯುವ್ಯ ಭಾರತದಲ್ಲಿ ಮುಂಗಾರು ಮಳೆಯ ಅಬ್ಬರ ನಿಲ್ಲುವುದಿಲ್ಲ. ಇದಕ್ಕೆ ಪರಿಸ್ಥಿತಿ ಅನುಕೂಲಕರವಾಗಿಲ್ಲ ಎಂದು ಅವರು ಹೇಳಿದ್ದಾರೆ. ಸೆಪ್ಟೆಂಬರ್‌ನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ.

ಇಂದಿನಿಂದ ಸೆಪ್ಟೆಂಬರ್ 24ರವರೆಗೆ ಕರ್ನಾಟಕದಲ್ಲಿ ಮಳೆ ಸುರಿಯಲಿದೆ. ಹೀಗಾಗಿ ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಭಾರೀ ಮಳೆ ಸುರಿಯಲಿದೆ. ಮುಖ್ಯವಾಗಿ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇನ್ನೂ 4 ದಿನ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಸೇರಿದಂತೆ ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಇನ್ನೆರಡು ದಿನ ಸಾಧಾರಣ ಮಳೆಯಾಗಲಿದೆ.

ಕರ್ನಾಟಕ ಮಾತ್ರವಲ್ಲದೆ, ರಾಜಸ್ಥಾನ, ಗುಜರಾತ್, ತಮಿಳುನಾಡು, ಪಶ್ಚಿಮ ಬಂಗಾಳ, ಒರಿಸ್ಸಾ, ಉತ್ತರಾಖಂಡ, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್​ಗಢ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಸಿಕ್ಕಿಂ, ಸೌರಾಷ್ಟ್ರ, ಕಚ್, ಮಹಾರಾಷ್ಟ್ರ, ಗೋವಾ, ಅಂಡಮಾನ್ ನಿಕೋಬಾರ್, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಜಾರ್ಖಂಡ್, ಬಿಹಾರ, ಕೊಂಕಣ, ಉತ್ತರ ಪ್ರದೇಶ, ಆಂಧ್ರ ಪ್ರದೇಶ, ತೆಲಂಗಾಣ, ಕೇರಳ, ಲಕ್ಷದ್ವೀಪದಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ. ಪಂಜಾಬ್, ಹರಿಯಾಣ, ದೆಹಲಿ, ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ, ಲಡಾಖ್​ನಲ್ಲಿ ಇಂದು ಮಳೆ ಸುರಿಯಲಿದೆ.

ಇದನ್ನೂ ಓದಿ: Karnataka Rain: ಸೆ. 17ರವರೆಗೂ ಕರ್ನಾಟಕದಲ್ಲಿ ಮಳೆ ಆರ್ಭಟ; ಕರಾವಳಿ, ಮಲೆನಾಡಿನಲ್ಲಿ ಇಂದು ಆರೆಂಜ್ ಅಲರ್ಟ್

Karnataka Weather Today | ಬೆಂಗಳೂರಲ್ಲಿ ರಾತ್ರಿಯಿಡೀ ಮಳೆ; ಮಳೆಯ ಅಬ್ಬರ ಮಂಗಳವಾರದವರೆಗೂ ಮುಂದುವರೆಯುವ ಸಂಭವ

(Karnataka Weather Today Karnataka Rain Hits till September 24 Monsoon 2021 Bengaluru Rains Weather Forecast)

Read Full Article

Click on your DTH Provider to Add TV9 Kannada