Karnataka Weather Today: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ಆ. 27ರವರೆಗೂ ಕರಾವಳಿಯಲ್ಲಿ ಭಾರೀ ಮಳೆ

Karnataka Rain Today: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಆ. 27ರವರೆಗೆ ಮಳೆ ಹೆಚ್ಚಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ಹೆಚ್ಚು ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನ 9 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ.

Karnataka Weather Today: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ಆ. 27ರವರೆಗೂ ಕರಾವಳಿಯಲ್ಲಿ ಭಾರೀ ಮಳೆ
ಮಳೆಯ ಸಾಂಕೇತಿಕ ಚಿತ್ರ
Updated By: Skanda

Updated on: Aug 25, 2021 | 6:26 AM

Rain in Karnataka: ಈ ಬಾರಿ ಜೂನ್ ಮತ್ತು ಜುಲೈ ತಿಂಗಳಲ್ಲಿ ಮಳೆಯ ಆರ್ಭಟ ಹೆಚ್ಚಾಗಿತ್ತು. ಆದರೆ, ಆಗಸ್ಟ್​ನಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಕಳೆದೆರಡು ತಿಂಗಳಿಗೆ ಹೋಲಿಸಿದರೆ ಮಳೆಯ ಪ್ರಮಾಣ ಇಳಿಮುಖವಾಗಿದೆ. ಕರ್ನಾಟಕದಲ್ಲಿ ಇಂದು ಮತ್ತು ನಾಳೆ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಇನ್ನೆರಡು ದಿನ ಮಳೆ (Rain in Karnataka) ಸುರಿಯಲಿದೆ. ಆ. 26 ಮತ್ತು 27ರಂದು ಮಳೆಯ ತೀವ್ರತೆ ಹೆಚ್ಚಾಗಲಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಆ. 27ರವರೆಗೆ ಮಳೆ ಹೆಚ್ಚಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ಹೆಚ್ಚು ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನ 9 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಕರ್ನಾಟಕದ ಬಹುತೇಕ ಕಡೆ ಮಳೆಯ ತೀವ್ರತೆ (Heavy Rain) ಹೆಚ್ಚಾಗಲಿದೆ. ಇಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಚುರುಕಾಗಲಿದೆ ಎಂದು ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುರುವಾರದವರೆಗೂ ಸಾಧಾರಣ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ.

ಕರ್ನಾಟಕದಲ್ಲಿ ಆ. 26ರವರೆಗೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಈಗಾಗಲೇ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ರಾಯಚೂರು, ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಕಳೆದ ವರ್ಷಕ್ಕಿಂತಲೂ ಹೆಚ್ಚು ಮಳೆಯಾಗಿದೆ. ಈ ಜಿಲ್ಲೆಗಳಲ್ಲಿ ಇನ್ನೆರಡು ದಿನ ಹಗುರ ಮಳೆಯಾಗಲಿದೆ. ಸುಳ್ಯ, ಹೊಸಕೋಟೆ, ಆಗುಂಬೆ, ಕೃಷ್ಣರಾಜಪೇಟೆ, ಕಲಬುರ್ಗಿ, ಮಂಡ್ಯದಲ್ಲಿ ಹೆಚ್ಚು ಮಳೆಯಾಗಿದೆ.

ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಈ 9 ಜಿಲ್ಲೆಗಳಲ್ಲಿ ಇಂದು ಮಳೆ ಹೆಚ್ಚಾಗಲಿದೆ. ಇಂದಿನಿಂದ ಆ. 27ರವರೆಗೂ ಮಳೆಯಾಗಲಿದೆ. ಕರಾವಳಿಯಲ್ಲಿ ಮಳೆಯ ತೀವ್ರತೆ ಜಾಸ್ತಿಯಾಗಲಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಇನ್ನೆರಡು ದಿನ ಮಳೆಯಾಗಲಿದೆ.

ಈ ಬಾರಿ ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿಯೂ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ದಕ್ಷಿಣ ಒಳನಾಡಿನ 16 ಜಿಲ್ಲೆಯ ಪೈಕಿ 10 ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಕರಾವಳಿಯ ಮೂರು ಜಿಲ್ಲೆಯಲ್ಲಿಯೂ ಇಂದಿನಿಂದ ಆ. 27ರವರೆಗೆ ವ್ಯಾಪಕ ಮಳೆಯಾಗಲಿದೆ. ತಮಿಳುನಾಡು ಮತ್ತು ಕೇರಳದಲ್ಲಿ ಆ. 26 ಮತ್ತು 27ರಂದು ಹೆಚ್ಚು ಮಳೆಯಾಗಲಿದೆ. ಬಿಹಾರ, ಉತ್ತರ ಪ್ರದೇಶ, ಉತ್ತರಾಖಂಡ ರಾಜ್ಯಗಳಲ್ಲಿ ಆ. 27ರವರೆಗೆ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಸ್ಸಾಂ, ಮೇಘಾಲಯದಲ್ಲಿ ಇಂದು ಭಾರೀ ಮಳೆಯಾಗಲಿದೆ.

ಕರಾವಳಿಯಲ್ಲಿ ವಾಡಿಕೆಗಿಂತ ಶೇ.18 ಕಡಿಮೆ ಮಳೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಶೇ.31 ಮತ್ತು ದಕ್ಷಿಣ ಒಳನಾಡಿನಲ್ಲಿ ಶೇ.7ರಷ್ಟು ಮಳೆ ಹೆಚ್ಚಾಗಿದೆ. ಕಳೆದ ವಾರ ಉತ್ತರ ಕನ್ನಡ, ರಾಯಚೂರು, ಹಾಸನ, ಚಿಕ್ಕಬಳ್ಳಾಪುರ, ಕೋಲಾರ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮಳೆಯ ಕೊರತೆ ಹೆಚ್ಚಾಗಿದೆ. ದಕ್ಷಿಣ ಕನ್ನಡ, ಉಡುಪಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಮತ್ತು ತುಮಕೂರು ಜಿಲ್ಲೆಯಲ್ಲಿ ಮಳೆಯ ಕೊರತೆಯಾಗಿದೆ. ಬೆಳಗಾವಿ, ಯಾದಗಿರಿ, ದಾವಣಗೆರೆ ಮತ್ತು ಮೈಸೂರು ಜಿಲ್ಲೆಯಲ್ಲಿ ವಾಡಿಕೆಯ ಮಳೆಯಾಗಿದೆ. ಚಿತ್ರದುರ್ಗ ಮತ್ತು ಚಾಮರಾಜನಗರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ.

ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಕಳೆದ ವಾರದಿಂದ ಮಳೆಯ ಆರ್ಭಟ ಹೆಚ್ಚಾಗಿದೆ. ಬೆಂಗಳೂರು ಸುತ್ತಮುತ್ತ ಇನ್ನೆರಡು ದಿನ ಮೋಡ ಕವಿದ ವಾತಾವರಣವಿರಲಿದೆ.

ಇದನ್ನೂ ಓದಿ: Karnataka Weather Today: ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಮಳೆಯ ಆರ್ಭಟ; ಇಂದು ಹಳದಿ ಅಲರ್ಟ್ ಘೋಷಣೆ

Karnataka Dams Water Level: ತುಂಗಭದ್ರಾ ಡ್ಯಾಂ ಭರ್ತಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

(Karnataka Weather Today Karnataka Rain Lashes till August 27 Bengaluru Rains Dakshina Kannada Monsoon)