ಬೆಂಗಳೂರು: ಕರ್ನಾಟಕದಲ್ಲಿ ಕಳೆದ ವಾರ ಸುರಿದಿದ್ದ ಮಳೆ (Rain Updates) ಸಂಪೂರ್ಣ ಕಡಿಮೆಯಾಗಿದೆ. ದೆಹಲಿ, ಉತ್ತರ ಪ್ರದೇಶ, ಹರಿಯಾಣ, ಜಮ್ಮು ಮತ್ತು ಕಾಶ್ಮೀರ, ಬಿಹಾರ, ಅಸ್ಸಾಂ, ಮೇಘಾಲಯ ಮತ್ತು ಮಧ್ಯ ಮಹಾರಾಷ್ಟ್ರದ ಕೆಲವು ಸ್ಥಳಗಳಲ್ಲಿ ಫೆಬ್ರವರಿ 5ರವರೆಗೆ ಶೀತ ಗಾಳಿ (Winter) ಬೀಸಲಿದ್ದು, ಮಳೆಯಾಗಲಿದೆ. ಇಂದು ಪಂಜಾಬ್, ಹರಿಯಾಣ, ಚಂಡೀಗಢ, ಪಶ್ಚಿಮ ಉತ್ತರ ಪ್ರದೇಶ, ಮಧ್ಯಪ್ರದೇಶ, ವಿದರ್ಭ (ಮಹಾರಾಷ್ಟ್ರದಲ್ಲಿ) ಮತ್ತು ಛತ್ತೀಸ್‌ಗಢದಲ್ಲಿ ಚಳಿ ಉಂಟಾಗಲಿದೆ. ಇಂದಿನಿಂದ ಫೆಬ್ರವರಿ 4ರವರೆಗೆ ಪಶ್ಚಿಮ ಹಿಮಾಲಯನ್ ಪ್ರದೇಶದಲ್ಲಿ ಸಾಧಾರಣ ಮಳೆ ಅಥವಾ ಹಿಮಪಾತದ ಸಾಧ್ಯತೆಯಿದೆ. ಫೆಬ್ರವರಿ 3ರಂದು ಜಮ್ಮು ಮತ್ತು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶದ ಮೇಲೆ ಹಿಮ ಬೀಳುವ ಸಾಧ್ಯತೆಯಿದೆ.
ಇಂದಿನಿಂದ ಫೆಬ್ರವರಿ 4ರವರೆಗೆ ಉತ್ತರ ಪ್ರದೇಶ, ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ವ್ಯಾಪಕ ಮಳೆಯಾಗಲಿದೆ. ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಉತ್ತರಾಖಂಡದಲ್ಲಿ ಮಳೆಯಾಗಲಿದೆ. ಸಿಕ್ಕಿಂ, ಅರುಣಾಚಲ ಪ್ರದೇಶ, ತ್ರಿಪುರಾ, ಮಣಿಪುರ ಮತ್ತು ಮಿಜೋರಾಂನಲ್ಲಿ ಕೂಡ ಮಳೆಯಾಗುವ ಸಾಧ್ಯತೆಯಿದೆ. ತಮಿಳುನಾಡು ಮತ್ತು ಕೇರಳದಲ್ಲಿ ಫೆಬ್ರವರಿ ಇಂದು ಮಳೆ ಹೆಚ್ಚಾಗಲಿದೆ ಎಂದು IMD ಮುನ್ಸೂಚನೆ ನೀಡಿದೆ.
ಇಂದು ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಕೇರಳ-ಮಾಹೆಯಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಫೆ. 3 ಮತ್ತು 4ರಂದು ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಮತ್ತು ಫೆ. 4 ಮತ್ತು 5ರಂದು ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಮಳೆಯಾಗಲಿದೆ.
ಇಂದು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಮಳೆ ಅಥವಾ ಹಿಮ ಉಂಟಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕೂಡ ಮಳೆಯಾಗಲಿದೆ. ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ಬಿಹಾರ ಮತ್ತು ಒಡಿಶಾದಲ್ಲಿ ಶೀತ ಅಲೆಗಳು ಉಂಟಾಗುವ ಸಾಧ್ಯತೆಯಿದೆ. ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಮಧ್ಯಪ್ರದೇಶ ಸೇರಿದಂತೆ ವಾಯುವ್ಯ ಮತ್ತು ಮಧ್ಯ ಭಾರತದ ಹಲವಾರು ರಾಜ್ಯಗಳಲ್ಲಿ ಇಂದು ಶೀತ ಅಲೆ ಉಂಟಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.
ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಚಂಡೀಗಢ, ದೆಹಲಿ, ಹರಿಯಾಣ ಮತ್ತು ಉತ್ತರ ಭಾರತದ ಪ್ರದೇಶಗಳಲ್ಲಿ ಸರಾಸರಿಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಪಂಜಾಬ್, ಹರಿಯಾಣ ಮತ್ತು ದೆಹಲಿಯಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.
ಇಂದಿನಿಂದ ಫೆಬ್ರವರಿ 4ರವರೆಗೆ ಪಶ್ಚಿಮ ಹಿಮಾಲಯ ಪ್ರದೇಶದಾದ್ಯಂತ ಮಳೆ ಮತ್ತು ಹಿಮಪಾತ ಉಂಟಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ವಿಶೇಷವಾಗಿ ಫೆಬ್ರವರಿ 3ರಂದು ಭಾರೀ ಮಳೆ ಅಥವಾ ಹಿಮಪಾತವಾಗುವ ಸಾಧ್ಯತೆಯಿದೆ. ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ ಮತ್ತು ಉತ್ತರ ಪ್ರದೇಶಗಳಲ್ಲಿ ಫೆಬ್ರವರಿ 4ರವರೆಗೆ ವ್ಯಾಪಕವಾದ ಮಳೆಯಾಗಲಿದೆ. ಫೆಬ್ರವರಿ 6ರಿಂದ ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಮಳೆಯಾಗಲಿದೆ. ಫೆಬ್ರವರಿ 3ರಿಂದ ಫೆಬ್ರವರಿ 5ರವರೆಗೆ 3 ದಿನಗಳ ಕಾಲ ಮಳೆ ಮತ್ತು ಮೋಡ ಕವಿದ ವಾತಾವರಣವಿರಲಿದೆ. ಪಂಜಾಬ್ ಮತ್ತು ಹರಿಯಾಣದಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಹೇಳಿದೆ.
ಇದನ್ನೂ ಓದಿ: Karnataka Weather Today: ಕರ್ನಾಟಕದಲ್ಲಿ ಮಳೆ ಇಳಿಕೆ; ಅಸ್ಸಾಂ, ತಮಿಳುನಾಡು, ಕೇರಳದಲ್ಲೂ ಭಾರೀ ಮಳೆ
Karnataka Weather Today: ಕರ್ನಾಟಕದಲ್ಲಿ ಇಂದು ತುಂತುರು ಮಳೆ; ತಮಿಳುನಾಡು, ಕೇರಳದಲ್ಲೂ ಭಾರೀ ಮಳೆ