Karnataka Weather Today: ಚಳಿಗಾಲದಲ್ಲೂ ನಿಲ್ಲದ ವರುಣನ ಅಬ್ಬರ; ಇನ್ನೆರಡು ದಿನ ರಾಜ್ಯದಲ್ಲಿ ಮಳೆ ಸಾಧ್ಯತೆ

Karnataka Rain: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇನ್ನೆರಡು ದಿನ ಮಳೆ ಸುರಿಯಲಿದೆ. ಇಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ, ಒಣ ಹವೆ ಮುಂದುವರೆಯಲಿದೆ.

Karnataka Weather Today: ಚಳಿಗಾಲದಲ್ಲೂ ನಿಲ್ಲದ ವರುಣನ ಅಬ್ಬರ; ಇನ್ನೆರಡು ದಿನ ರಾಜ್ಯದಲ್ಲಿ ಮಳೆ ಸಾಧ್ಯತೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Dec 10, 2021 | 6:56 AM

Bengaluru Rain: ಮಳೆಗಾಲ ಮುಗಿದು ಚಳಿಗಾಲ ಶುರುವಾಗಿ 2 ತಿಂಗಳಾದರೂ ಮಳೆಯ ಅಬ್ಬರ ಮಾತ್ರ ಇನ್ನೂ ಕಡಿಮೆಯಾಗಿಲ್ಲ. ಇಂದು ಮತ್ತು ನಾಳೆ ಮತ್ತೆ ರಾಜ್ಯಾದ್ಯಂತ ಮಳೆ ಸುರಿಯುವ ನಿರೀಕ್ಷೆಯಿದೆ. ಕರ್ನಾಟಕ ಮಾತ್ರವಲ್ಲದೆ ತಮಿಳುನಾಡು, ಆಂಧ್ರಪ್ರದೇಶ, ಕೇರಳದಲ್ಲಿ ವರುಣನ ಆರ್ಭಟ ಶುರುವಾಗುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇನ್ನೆರಡು ದಿನ ಮಳೆ ಸುರಿಯಲಿದೆ. ಇಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ, ಒಣ ಹವೆ ಮುಂದುವರೆಯಲಿದೆ.

ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ರಾಮನಗರ, ಕೊಡಗು, ಶಿವಮೊಗ್ಗ, ಮೈಸೂರು, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಇನ್ನೆರಡು ದಿನ ಮಳೆಯಾಗುವ ಸಾಧ್ಯತೆಯಿದೆ. ತಮಿಳುನಾಡಿನಲ್ಲೂ ಇಂದು ಮಳೆಯಾಗಲಿದ್ದು, ಹಳದಿ ಅಲರ್ಟ್​ ಘೋಷಿಸಲಾಗಿದೆ. ಕರ್ನಾಟಕದ ಹಾಸನ, ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಮೈಸೂರು, ಮಂಡ್ಯ, ಚಿಕ್ಕಮಗಳೂರು, ತುಮಕೂರು, ರಾಮನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ. ಕರ್ನಾಟಕದ ಬಹುತೇಕ ಕಡೆ ಇಂದು ಮೋಡ ಕವಿದ ವಾತಾವರಣವಿರಲಿದೆ.

ಭಾರತೀಯ ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ಇಂದು ಏಳು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಅರುಣಾಚಲ ಪ್ರದೇಶ, ಮಣಿಪುರ, ಒಡಿಶಾ, ತೆಲಂಗಾಣ ಮತ್ತು ಲಕ್ಷದ್ವೀಪಗಳಲ್ಲಿ ಪ್ರತ್ಯೇಕ ಮಳೆಯಾಗುವ ಸಾಧ್ಯತೆಯಿದೆ. ಇಂದು ಅಸ್ಸಾಂ, ಮೇಘಾಲಯ, ಬಿಹಾರ, ಒಡಿಶಾ, ಪಶ್ಚಿಮ ಉತ್ತರ ಪ್ರದೇಶ, ಪಂಜಾಬ್, ಹರಿಯಾಣ ಮತ್ತು ರಾಜಸ್ಥಾನದಲ್ಲಿ ಹಗುರ ಮಳೆಯಾಗುವ ನಿರೀಕ್ಷೆಯಿದೆ.

ಮುಂದಿನ ಒಂದೆರಡು ದಿನ ಈಶಾನ್ಯ ಮತ್ತು ಪೂರ್ವದ ಕೆಲವು ಬಯಲು ಪ್ರದೇಶಗಳಲ್ಲಿ ಮಳೆ ಮತ್ತು ಮಂಜಿನ ಮುನ್ಸೂಚನೆ ನೀಡಲಾಗಿದೆ. ಇಂದು ಕೇರಳ ಮತ್ತು ತಮಿಳುನಾಡಿನಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗುವ ನಿರೀಕ್ಷೆಯಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಒಡಿಶಾ, ಛತ್ತೀಸ್‌ಗಢ, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ ಮತ್ತು ಲಕ್ಷದ್ವೀಪಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ದೇಶದ ಉಳಿದ ಭಾಗಗಳಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನದ ಮುನ್ಸೂಚನೆಯಿದೆ.

ಇದನ್ನೂ ಓದಿ: Horoscope Today- ದಿನ ಭವಿಷ್ಯ; ಕಟಕ ರಾಶಿಯವರಿಗೆ ಮದುವೆಯ ಮಾತುಕತೆಗಳಲ್ಲಿ ಸಫಲತೆ ಸಿಗಲಿದೆ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ