Karnataka Weather Today: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇನ್ನೂ 4 ದಿನ ಮಳೆ; ಚೆನ್ನೈನಲ್ಲಿ ಆರೆಂಜ್ ಅಲರ್ಟ್​ ಘೋಷಣೆ

| Updated By: ಆಯೇಷಾ ಬಾನು

Updated on: Dec 08, 2021 | 6:56 AM

Karnataka Rain: ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನಲ್ಲಿ ಇಂದು ಒಣಹವೆ ಇರಲಿದ್ದು, ಮಲೆನಾಡಿನಲ್ಲಿ ಮಳೆ ಮುಂದುವರೆಯಲಿದೆ.

Karnataka Weather Today: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇನ್ನೂ 4 ದಿನ ಮಳೆ; ಚೆನ್ನೈನಲ್ಲಿ ಆರೆಂಜ್ ಅಲರ್ಟ್​ ಘೋಷಣೆ
ಪ್ರಾತಿನಿಧಿಕ ಚಿತ್ರ
Follow us on

Bengaluru Rain: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 4 ದಿನ ಮಳೆ ಸುರಿಯಲಿದೆ. ಬೆಂಗಳೂರಿನಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದೇಶದಲ್ಲಿ ಜವಾದ್ ಚಂಡಮಾರುತವು ದುರ್ಬಲಗೊಂಡಿರುವುದರಿಂದ ಮಳೆಯ ಆರ್ಭಟ ಕೊಂಚ ಕಡಿಮೆಯಾಗಿದೆ. ಆದರೂ ಸೈಕ್ಲೋನಿಕ್ ಮಾರುತಗಳ ಪ್ರಭಾವದಿಂದ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಗಳಿವೆ. ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನಲ್ಲಿ ಇಂದು ಒಣಹವೆ ಇರಲಿದ್ದು, ಮಲೆನಾಡಿನಲ್ಲಿ ಮಳೆ ಮುಂದುವರೆಯಲಿದೆ.

ಕರ್ನಾಟಕದ ಹಾಸನ, ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಮೈಸೂರು, ಮಂಡ್ಯ, ಚಿಕ್ಕಮಗಳೂರು, ತುಮಕೂರು, ರಾಮನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ. ಕರ್ನಾಟಕದ ಬಹುತೇಕ ಕಡೆ ಇಂದು ಮೋಡ ಕವಿದ ವಾತಾವರಣವಿರಲಿದೆ. ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಮಳೆ ಮುಂದುವರೆಯುವ ನಿರೀಕ್ಷೆಯಿದೆ.

ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ಇಂದಿನಿಂದ ಡಿಸೆಂಬರ್ 9ರವರೆಗೆ 7 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಮಳೆಯ ಜೊತೆಗೆ, ವಾಯುವ್ಯ, ಮಧ್ಯ ಮತ್ತು ಪೂರ್ವ ಭಾರತದ ಪ್ರದೇಶಗಳಲ್ಲಿ ಕನಿಷ್ಠ ತಾಪಮಾನದಲ್ಲಿ 3ರಿಂದ 5 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗಲಿದೆ. ಇಂದು ಆಂಧ್ರಪ್ರದೇಶ, ತಮಿಳುನಾಡು ಮತ್ತು ಕೇರಳದಲ್ಲಿ ಅಲ್ಲಲ್ಲಿ ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಲಡಾಖ್ ಮೇಲೆ ಅಲ್ಲಲ್ಲಿ ಹಿಮ ಬೀಳುವ ನಿರೀಕ್ಷೆಯಿದೆ. ಅರುಣಾಚಲ ಪ್ರದೇಶ, ಮಣಿಪುರ, ಒಡಿಶಾ, ತೆಲಂಗಾಣ ಮತ್ತು ಲಕ್ಷದ್ವೀಪಗಳಲ್ಲಿ ಪ್ರತ್ಯೇಕ ಮಳೆಯಾಗುವ ಸಾಧ್ಯತೆಯಿದೆ. ದೇಶದ ಉಳಿದ ಭಾಗಗಳಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನದ ಮುನ್ಸೂಚನೆ ನೀಡಲಾಗಿದೆ. ಇಂದು ಅಸ್ಸಾಂ, ಮೇಘಾಲಯ, ಬಿಹಾರ, ಒಡಿಶಾ, ಪಶ್ಚಿಮ ಉತ್ತರ ಪ್ರದೇಶ, ಪಂಜಾಬ್, ಹರಿಯಾಣ ಮತ್ತು ರಾಜಸ್ಥಾನದಲ್ಲಿ ಹಗುರ ಮಳೆಯಾಗುವ ನಿರೀಕ್ಷೆಯಿದೆ.

ಮುಂದಿನ ಮೂರು ದಿನಗಳವರೆಗೆ 7 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪ್ರಮುಖ IMD ಎಚ್ಚರಿಕೆಗಳನ್ನು ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡಗಳು ಚದುರಿದ ಲಘು ಮಳೆ ಅಥವಾ ಹಿಮಪಾತಕ್ಕೆ ಸಾಕ್ಷಿಯಾಗುವ ನಿರೀಕ್ಷೆಯಿದೆ. ವಾಯುವ್ಯ, ಮಧ್ಯ ಮತ್ತು ಪೂರ್ವ ಭಾರತದ ಪ್ರದೇಶಗಳಲ್ಲಿ ಹಾಗೂ ಗುಜರಾತ್‌ನಲ್ಲಿ ಕನಿಷ್ಠ ತಾಪಮಾನದಲ್ಲಿ 3 ರಿಂದ 5 ಡಿಗ್ರಿ ಸೆಲ್ಸಿಯಸ್‌ನಷ್ಟು ಇಳಿಕೆಯಾಗಲಿದೆ. ಇಂದಿನಿಂದ ಪಶ್ಚಿಮ ಹಿಮಾಲಯ ಪ್ರದೇಶದ ಮೇಲೆ ತಾಜಾ ಹವಾಮಾನದ ಅಡಚಣೆಯು ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು IMD ಮುನ್ಸೂಚನೆ ನೀಡಿದೆ. ಪಶ್ಚಿಮ ಹಿಮಾಲಯದ ಮೇಲಿನ ಅಡಚಣೆಯು ಇಂದು ಮತ್ತು ನಾಳೆ ಕರಾವಳಿ ಆಂಧ್ರಪ್ರದೇಶ, ಕೇರಳ ಮತ್ತು ತಮಿಳುನಾಡಿನಲ್ಲಿ ಚದುರಿದ, ಹಗುರದಿಂದ ಮಧ್ಯಮ ಮಳೆಗೆ ಕಾರಣವಾಗುತ್ತದೆ. ಇಂದಿನಿಂದ ತಮಿಳುನಾಡಿನಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ನೀಡಲಾಗಿದೆ.

ತಮಿಳುನಾಡಿನ ಪುದುಚೇರಿ ಜೊತೆಗೆ ಉತ್ತರ ಕರಾವಳಿ ಜಿಲ್ಲೆಗಳಾದ ಕಡಲೂರು, ಮೈಲಾಡುತುರೈ, ನಾಗಪಟ್ಟಿಣಂ, ಕಾರೈಕಲ್, ತಿರುವರೂರ್, ತಂಜಾವೂರು ಮತ್ತು ಪುದುಕ್ಕೋಟೈನಲ್ಲಿ ಇಂದು ಭಾರೀ ಮಳೆಯಾಗಲಿದೆ ಎಂದು ಚೆನ್ನೈನಲ್ಲಿರುವ IMD ಯ ಪ್ರಾದೇಶಿಕ ಹವಾಮಾನ ಕೇಂದ್ರವು ಮುನ್ಸೂಚನೆ ನೀಡಿದೆ. ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ನಾಳೆ ತೂತುಕುಡಿ ಜೊತೆಗೆ ಉತ್ತರದ ಆಂತರಿಕ ಜಿಲ್ಲೆಗಳಾದ ಕಲ್ಲಕುರುಚಿ, ತಿರುವಣ್ಣಾಮಲೈ, ಅರಿಯಲೂರ್ ಮತ್ತು ಪೆರಂಬಲೂರ್‌ನಾದ್ಯಂತ ಮಳೆಯಾಗಲಿದೆ. ಚೆನ್ನೈ ಮತ್ತು ಅದರ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಕಳೆದ ಕೆಲವು ದಿನಗಳಿಂದ ತಿರುಚಿರಾಪಳ್ಳಿ ಜಿಲ್ಲೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಗರ ಜಲಾವೃತವಾಗಿದೆ.

ಚೆನ್ನೈನಲ್ಲಿ ಭಾರೀ ಮಳೆಯಿಂದ ಇಂದು ‘ಆರೆಂಜ್’ ಅಲರ್ಟ್ ನೀಡಲಾಗಿದೆ. ಇಂದು ಮತ್ತು ಡಿಸೆಂಬರ್ 9ರಂದು ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್ ಮತ್ತು ಹಿಮಾಚಲ ಪ್ರದೇಶದಲ್ಲಿ ಮಳೆ ಅಥವಾ ಹಿಮಪಾತವಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಹೇಳಿದೆ.

ಇದನ್ನೂ ಓದಿ: Karnataka Weather Today: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇನ್ನೆರಡು ದಿನ ಮಳೆ; ಇಂದಿನ ಹವಾಮಾನ ಹೀಗಿದೆ

Viral Video: ಮಳೆಯಿಂದಾಗಿ ಪಂದ್ಯ ರದ್ದು: ಮಳೆಯ ನಡುವೆ ಮೈದಾನದಲ್ಲೇ ಸ್ಟಾರ್ ಆಲ್​ರೌಂಡರ್​ನ ಮಸ್ತಿ